ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

Date:

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು ಬೀದರ್‌ ಉಪನಗರ ಠಾಣೆ ಪೊಲೀಸರು ಮುಖ್ಯ ಆರೋಪಿ ಸೇರಿ ನಾಲ್ವರನ್ನು ಬಂಧಿಸಿದ್ದು, ಬಂಧಿತರಿಂದ ಐದು ಪಿಸ್ತೂಲ್‌ ಹಾಗೂ 12 ಜೀವಂತ ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್‌ ಉಪನಗರ ಪೊಲೀಸ್‌ ಠಾಣೆಯ ಪೊಲೀಸರು ಅಕ್ರಮ ಪಿಸ್ತೂಲ್‌ ಮಾರಾಟ ಜಾಲದ ಮುಖ್ಯ ಆರೋಪಿ ಮಹಾರಾಷ್ಟ್ರದ ನಾಂದೇಡ್‌ ಮೂಲದ ಬಲಬೀರಸಿಂಗ್‌ ಅಲಿಯಾಸ್‌ ಶೇರಾ ಜಾಧವ್‌ನನ್ನು ಹೈದರಾಬಾದ್‌ನಲ್ಲಿ ಬಂಧಿಸಿದ್ದು, ಪ್ರಕರಣ ಸಂಬಂಧಿಸಿದಂತೆ ಇನ್ನುಳಿದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜುಲೈ 15ರಂದು ನಗರ ಹೊರವಲಯದ ಜ್ಞಾನಸುಧಾ ಶಾಲೆ ಸಮೀಪದ ರಿಂಗ್‌ ರಸ್ತೆಯಲ್ಲಿ ಪೊಲೀಸರು ದಾಳಿ ನಡೆಸಿ ಅಮನ್‌ ಸಿಂಗ್‌ ಹಾಗೂ ವೆಂಕಟೇಶ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಐದು ಪಿಸ್ತೂಲ್‌, 26 ಜೀವಂತ ಗುಂಡುಗಳು, 10 ಎಂ.ಟಿ.ಕೇಸ್‌, ಐದು ತಲ್ವಾರ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ₹6.73 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.‌ ಅಂದು ಪ್ರಮುಖ ಆರೋಪಿ ಬಲಬೀರ್‌ ಸಿಂಗ್‌ ತಲೆಮರೆಸಿಕೊಂಡಿದ್ದ, ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಮುಖ್ಯ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

ಪ್ರಕರಣದ ಮುಖ್ಯ ಆರೋಪಿ ಬಲಬೀರ್‌ ಸಿಂಗ್‌ ಜೊತೆಗೆ ಆನಂದಕುಮಾರ, ಈಶ್ವರ ಹಾಗೂ ಅಶ್ವಿನ್‌ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದಲೂ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಒಟ್ಟು ಐದು ಪಿಸ್ತೂಲ್‌ ಹಾಗೂ 12 ಜೀವಂತ ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿದ್ದು, ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

WhatsApp Image 2026 10 03 at 7.57.14 PM 1

ಪ್ರಮುಖ ಆರೋಪಿ ಬಲಬೀರಸಿಂಗ್‌ ಅಲಿಯಾಸ್‌ ಶೇರಾ ಜಾಧವ್‌ ವಿರುದ್ಧ ಮಹಾರಾಷ್ಟ್ರದ ಇತವಾರ್‌, ಲಿಂಬೆಗಾಂವ್‌ ಹಾಗೂ ನಾಂದೇಡ್‌ ಗ್ರಾಮೀಣ ಪೊಲೀಸ್‌ ಠಾಣೆಗಳಲ್ಲಿ ಪ್ರತ್ಯೇಕ 5 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣಗಳ ಕುರಿತಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಎನ್.ಡಿ. ಸನದಿ ನೇತ್ರತ್ವದಲ್ಲಿ ಸೆನ್ ಠಾಣೆ ಸಿಪಿಐ ಸಂತೋಷ್ ತಟ್ಟೆಪಳ್ಳಿ, ಸಿಬ್ಬಂದಿಗಳಾದ ಎಮ್.ಡಿ. ಆರಿಫ್, ಪ್ರಶಾಂತ್, ನಾಗೇಶ, ಗಂಗಾಧರ, ಸೂರ್ಯಕಾಂತ, ಅನಿಲ್, ಹಣಮಂತ, ಮಂಜುನಾಥ, ರಮೇಶ, ಗುರುನಾಥ, ಶೇಖ ಮೊದಿನ್, ರಾಜಕುಮಾರ ದಾನಾ, ರಮೇಶ, ಉಮೇಶ, ರಾಜಕುಮಾರ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...