ಬೀದರ್‌ | ಮೊರಾರ್ಜಿ ವಸತಿ ಶಾಲೆಯಲ್ಲಿ ಕಳಪೆ ಆಹಾರ : ಶಾಸಕ ಶೈಲೇಂದ್ರ ಬೆಲ್ದಾಳೆ ಆಕ್ರೋಶ

Date:

ಬೀದರ್ ದಕ್ಷಿಣ ಕ್ಷೇತ್ರದ ಕಮಠಾಣಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು  ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರ ವ್ಯವಸ್ಥೆ, ಅಡುಗೆ ಮನೆ ಹಾಗೂ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದರು.

- Advertisement -

ಪರಿಶೀಲನೆ ವೇಳೆ ವಿದ್ಯಾರ್ಥಿಗಳಿಗಾಗಿ ಸಂಗ್ರಹಿಸಿಟ್ಟಿದ್ದ ತೊಗರಿ ಬೇಳೆ, ಅಕ್ಕಿ, ಅಡುಗೆ ಎಣ್ಣೆ, ಶೇಂಗಾ, ಹೆಸರು ಬೇಳೆ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳು ಕಳಪೆ ಮಟ್ಟದ್ದಾಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಘಟನೆಯ ಗಂಭೀರತೆಯನ್ನು ಮನಗಂಡ ಶಾಸಕರು ತಕ್ಷಣವೇ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಕಳಪೆ ಆಹಾರ ಪದಾರ್ಥಗಳ ಕುರಿತು ಸಂಪೂರ್ಣ ಮಾಹಿತಿ ನೀಡಿ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದರು. ಈ ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳು, ಸಿಬ್ಬಂದಿ ಅಥವಾ ಗುತ್ತಿಗೆದಾರರು ಯಾರೇ ಆಗಿದ್ದರೂ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

“ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ಒದಗಿಸುವುದು ಸರ್ಕಾರದ ಹಾಗೂ ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ. ಮಕ್ಕಳ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ನಿಯಮಿತ ತಪಾಸಣೆ ನಡೆಸಿ, ಯಾವುದೇ ಲೋಪ ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಆರ್‌ಟಿಐನಿಂದ ಬಯಲಾಯ್ತು ಮೋದಿ ಮತ್ತು ಗೋದಿ ಮೀಡಿಯಾದ ಅಸಲಿ ಬಣ್ಣ!

ಪರಿಶೀಲನೆಯ ಬಳಿಕ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಅಹವಾಲು ಸ್ವೀಕರಿಸಿ ಸಮಸ್ಯೆ ಆಲಿಸಿದರು. ವಿದ್ಯಾರ್ಥಿಗಳು ನೀಡಿದ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿದ ಅವರು, ಮೂಲಭೂತ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ವಸತಿ ವ್ಯವಸ್ಥೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಪರಿಷ್ಕರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...