ಬೀದರ | ಪ್ರಥಮ ದಲಿತ ಬಂಡಾಯ ಸಮ್ಮೇಳನದ ಭಿತ್ತಿಪತ್ರ ಬಿಡುಗಡೆ

Date:

ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗುತ್ತಿರುವ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನದ ಭಿತ್ತಿಪತ್ರವನ್ನು ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕುಮಾರ್ ಅಪ್ಪೆ ಅವರು ಜಿಲ್ಲಾ ಕನ್ನಡ ಭವನದಲ್ಲಿ ಬಿಡುಗಡೆಗೊಳಿಸಿದರು.

- Advertisement -

ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷ ಮಾರುತಿ ಬೌದ್ಧೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮ್ಮೇಳನದ ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿ ಮಾತನಾಡಿ, “ಸಮ್ಮೇಳನದ ಯಶಸ್ಸಿಗಾಗಿ ವಿವಿಧ ಸಮಿತಿಗಳ ಮೂಲಕ ಕೈಗೊಂಡಿರುವ ಸಿದ್ಧತೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿದರು. ಎಲ್ಲ ಸಮಿತಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ನಿಯೋಜಿತ ಸರ್ವಾಧ್ಯಕ್ಷ ಮಾರುತಿ ಬೌದ್ಧೆ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನದ ಆಯೋಜನೆಗಾಗಿ ನಡೆಸುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು. ದಲಿತ ಬಂಡಾಯ ಚಳವಳಿಯ ಆಶಯ, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಸಮುದಾಯಗಳ ಧ್ವನಿಯನ್ನು ಸಾಹಿತ್ಯದ ಮೂಲಕ ಬಲಪಡಿಸಲು ಈ ಸಮ್ಮೇಳನ ಮಹತ್ವದ ವೇದಿಕೆಯಾಗಲಿದೆ” ಎಂದರು.

ಭಿತ್ತಿಪತ್ರ ಬಿಡುಗಡೆಗೊಳಿಸಿದ ವಿನೋದ್ ಕುಮಾರ್ ಅಪ್ಪೆ ಮಾತನಾಡಿ, “ಕನ್ನಡ ಸಾಹಿತ್ಯ ಲೋಕದಲ್ಲಿ ದಲಿತ ಬಂಡಾಯ ಸಾಹಿತ್ಯದ ಸಾಮಾಜಿಕ ಆಶಯಗಳಿಗೆ ಪ್ರತ್ಯೇಕ ವೇದಿಕೆ ಕಲ್ಪಿಸಿರುವುದು ಅಭಿನಂದನೀಯ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಈ ವಿನೂತನ ಪ್ರಯೋಗ ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಿಗೂ ಮಾದರಿಯಾಗಲಿದೆ. ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವೆ” ಎಂದು ತಿಳಿಸಿದರು.

ಸಮ್ಮೇಳನವು ಸಮಾನತೆ, ಸ್ವಾಭಿಮಾನ ಹಾಗೂ ಸಾಮಾಜಿಕ ನ್ಯಾಯದ ಕುರಿತ ಚರ್ಚೆ ಮತ್ತು ಸಂವಾದಕ್ಕೆ ಮಹತ್ವದ ವೇದಿಕೆಯಾಗಲಿದೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದರು.

WhatsApp Image 2026 10 10 at 7.46.08 PM 32

ಈ ಸಂದರ್ಭದಲ್ಲಿ ಪ್ರಮುಖರಾದ ವಿಠಲದಾಸ ಪ್ಯಾಗೆ, ಫರ್ನಾಂಡೀಸ್ ಹಿಪ್ಪಳಗಾಂವ, ಗಾಲಿಬ್ ಹಾಸ್ಮಿ, ಪ್ರಶಾಂತ ದೊಡ್ಡಿ, ಬಾಬುರಾವ ದಾನಿ, ಶಂಭುಲಿಂಗ ವಾಲ್ದೊಡ್ಡಿ, ಸುಂದರರಾಜ ಮಾಳೆಗಾಂವ, ವಿಜಯಕುಮಾರ್ ಸೋನಾರೆ, ವಿನಯಕುಮಾರ ಮಾಳಗೆ, ಶಿವಶಂಕರ ಟೋಕರೆ, ಮಹೇಶ ಗೋರನಾಳಕರ್, ಸುಬ್ಬಣ್ಣ ಕರಕನಳ್ಳಿ, ಸಂತೋಷ ಜೋಳದಾಬಕೆ, ಸುಮಂತ ಕಟ್ಟಿಮನಿ, ಡಾ.ದೇವಿದಾಸ ತುಮಕುಂಟೆ, ವಿಜಯಕುಮಾರ ಗಾಯಕವಾಡ, ಝರೆಪ್ಪಾ ಬೆಲ್ದಾರ, ಜಗದೀಶ್ವರ ಬಿರಾದರ, ಅರುಣ ಪಟೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ₹7 ಕೋಟಿ ವೆಚ್ಚದ ಬಿಟಿ ರಸ್ತೆ ಕಾಮಗಾರಿಗೆ ಶಾಸಕ ರಹೀಂ ಖಾನ್ ಚಾಲನೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ವಿರುದ್ಧ ಲಂಚ ಆರೋಪ: ಕೇರಳ ಸರ್ಕಾರದಿಂದ ತನಿಖೆಗೆ ಆದೇಶ!

ಕೇರಳದ ಲೋಕೋಪಯೋಗಿ ಇಲಾಖೆ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ಗುತ್ತಿಗೆದಾರರಿಂದ ಕೋಟಿಗಟ್ಟಲೆ ಲಂಚಕ್ಕೆ...

ರಾಮ-ಕೃಷ್ಣ ಹೋಲಿಕೆ ವಿವಾದ: ಬಾಗೇಶ್ವರ ಬಾಬಾ ವಿರುದ್ಧ ಯಾದವ ಸಮುದಾಯ ಆಕ್ರೋಶ!

ಧರ್ಮದ ಅಖಂಡತೆಯನ್ನು ಎತ್ತಿಹಿಡಿಯಬೇಕಾದ ಸಾರ್ವಜನಿಕ ವೇದಿಕೆಗಳೇ ಇತ್ತೀಚೆಗೆ ಧಾರ್ಮಿಕ ಒಡಕು ಮತ್ತು...

ಪತ್ರಿಕಾ ಸ್ವಾತಂತ್ರ್ಯ ಭಕ್ಷಕರು: ಜಾಗತಿಕ ಕಪ್ಪುಪಟ್ಟಿಗೆ ಅದಾನಿ, ಓಪ್‌ಇಂಡಿಯಾ, ಟ್ರಂಪ್ ಸೇರ್ಪಡೆ!

ಪ್ರಪಂಚದಾದ್ಯಂತ ಮಾಧ್ಯಮಗಳ ಧ್ವನಿಯನ್ನು ಅಡಗಿಸಲು ಮತ್ತು ಪತ್ರಕರ್ತರನ್ನು ವ್ಯವಸ್ಥಿತವಾಗಿ ಗುರಿಯಾಗಿಸಲು ಮುಂದಾಗಿರುವ...

‘ಬ್ರೋ’ ಗ್ಯಾನೇಶ್ ನಂಬರ್ ಕೊಡಲಾ: ಯುಎಸ್ ಮಧ್ಯಂತರ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಟ್ರಂಪ್ – ಸಿಇಸಿ ಮೀಮ್ಸ್ ವೈರಲ್

ಅಮೆರಿಕದ 2026ರ ಮಧ್ಯಂತರ ಚುನಾವಣೆಯ ಫಲಿತಾಂಶದಲ್ಲಿ ಡೆಮಾಕ್ರಟಿಕ್ ಪಕ್ಷವು ಹಿನ್ನಡೆಯಲ್ಲಿದ್ದ ಪ್ರಮುಖ...