ಬೀದರ್‌ | ಪ್ರತಿಭಾ ಪುರಸ್ಕಾರ : ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನ

Date:

ರಾಜ್ಯ ಸರ್ಕಾರಿ ನೌಕರರ ಸಂಘವು 2026ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಅಧಿಕ ಅಂಕ ಗಳಿಸಿ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಿದೆ.

- Advertisement -

2026ನೇ ಸಾಲಿನ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾದ ರಾಜ್ಯ ಸರ್ಕಾರಿ ಕಾಯಂ ನೌಕರರ ಮಕ್ಕಳು https:l/powermedia.info ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಂಘದ ನಿಗದಿತ ನಮೂನೆಯಲ್ಲಿ ವಿದ್ಯಾರ್ಥಿಯ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ, ಕಾಲೇಜಿನ ದೃಢೀಕೃತ ಅಂಕಪಟ್ಟಿ, ಸಂಘದ ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆ ಅಧ್ಯಕ್ಷರ ದೃಢೀಕರಣದೊಂದಿಗೆ ಆನ್‍ಲೈನ್‍ನಲ್ಲಿ ಅರ್ಜಿ ಅಪ್‍ಲೋಡ್ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್ | ವಸತಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ : ಯೋಗಿಶ್ ಎಸ್.ಬಿ

ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಕೆಗೆ ಮೇ 25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ರಾಜ್ಯ ಸಂಘದ ದೂರವಾಣಿ ಸಂಖ್ಯೆ 080-22354783/84 ಗೆ ಸಂಪರ್ಕಿಸಬಹುದು.

ಬೀದರ್ ಜಿಲ್ಲೆಯ ಎಸ್‍ಎಸ್‍ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ನೌಕರರ ಮಕ್ಕಳು ತಪ್ಪದೆ ಹೆಸರು ನೋಂದಾಯಿಸಬೇಕು ಎಂದು‌ ಪ್ರಕಟಣೆಯಲ್ಲಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...