ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸೇರಿ ಮೂವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ ಅವರು ಕೆಲಸದಿಂದ ಅಮಾನತುಗೊಳಿಸಿದ್ದಾರೆ.
ವೈದ್ಯಾಧಿಕಾರಿ ಡಾ.ಜೈರಾಜ್, ಶುಶೂಷಾಧಿಕಾರಿ ರೈಚಲ್ ರಾಣಿ ಹಾಗೂ ಪ್ರಯೋಗಾಲಯದ ತಾಂತ್ರಿಕ ಅಧಿಕಾರಿ ಶರಣಬಸವ ಸಿಂಗ್ರಿ ಅಮಾನತುಗೊಂಡವರು.
ಗರ್ಭಿಣಿಯೊಬ್ಬರು ಹೆರಿಗೆ ಸಲುವಾಗಿ ಮನ್ನಾಏಖೆಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇತ್ತೀಚೆಗೆ ದಾಖಲಾಗಿದ್ದರು. ಹೆರಿಗೆ ನಂತರ ತೀವ್ರ ರಕ್ತಸ್ರಾವವಾಗಿತ್ತು. ವೈದ್ಯರು ಬೀದರ್‌ನ ಬ್ರಿಮ್ಸ್‌ಗೆ ಕೊಂಡೊಯ್ಯಲು ಸಲಹೆ ನೀಡಿದ್ದರು. ಬ್ರಿಮ್‌ಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮಹಿಳೆ ಮೃತಪಟ್ಟಿದ್ದರು. ಘಟನೆಗೆ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿರುವುದಕ್ಕೆ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬೀದರ್ | ಶಿಕ್ಷಕರಿಗೆ ಟಿಇಟಿ ಕಡ್ಡಾಯ: ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಲಿ




