ಬೀದರ್‌ | ನಾಗಲೋಕ ಬುದ್ಧ ವಿಹಾರದಲ್ಲಿ ವರ್ಷವಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ

Date:

ಭಾರತೀಯ ಬೌದ್ಧ ಮಹಾಸಭೆ, ಬೀದರ್ ಜಿಲ್ಲಾ ಘಟಕದ ವತಿಯಿಂದ ವರ್ಷವಾಸ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜುಲೈ 11ರಂದು ಬೀದರ್ ನಗರದ ಗಾಂಧಿ ಗಂಜ್‌ನ ನಾಗಲೋಕ ಬುದ್ಧ ವಿಹಾರದಲ್ಲಿ ನಡೆಯಿತು.

- Advertisement -

ಸಭೆಗೆ ಪೂಜ್ಯ ಭಂತೆಗಳ ದಿವ್ಯ ಸಾನಿಧ್ಯದಲ್ಲಿ ಭಾರತೀಯ ಬೌದ್ಧ ಮಹಾಸಭೆಯ ಬೀದರ್ ಜಿಲ್ಲಾಧ್ಯಕ್ಷ ರಾಜಪ್ಪ ಗುನ್ನಳ್ಳಿಕರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷ ಡಾ. ಕಾಶಿನಾಥ್ ಚಲ್ವಾ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಜಿಲ್ಲಾಧ್ಯಕ್ಷ ರಾಜಪ್ಪ ಗುನ್ನಳ್ಳಿಕರ್ ಮಾತನಾಡಿ, “ವರ್ಷವಾಸ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ವಿಶೇಷ ಉಪನ್ಯಾಸಕರಾಗಿ ಕೇಂದ್ರೀಯ ಶಿಕ್ಷಕರನ್ನು ನೇಮಕ ಮಾಡಬೇಕು. ಕಾರ್ಯಕ್ರಮಗಳು ನಿಗದಿತ ವೇಳಾಪಟ್ಟಿಯಂತೆ ನಡೆಯುವಂತೆ ಎಲ್ಲರೂ ಸಮಯಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ತಿಳಿಸಿದರು.

ಪ್ರಮುಖರು ಮಾತನಾಡಿ, “ಮುಂಬರುವ ದಿನಗಳಲ್ಲಿ ಭಾರತೀಯ ಬೌದ್ಧ ಮಹಾಸಭೆಯ ವತಿಯಿಂದ ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮಗಳಲ್ಲಿ ವರ್ಷವಾಸ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು. ವರ್ಷವಾಸ ಕಾರ್ಯಕ್ರಮದ ಮೂಲಕ ಜಿಲ್ಲೆಯ ಎಲ್ಲಾ ಬೌದ್ಧ ಉಪಾಸಕ-ಉಪಾಸಕಿಯರು ಧಮ್ಮದ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಧಮ್ಮದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಲಾಯಿತು.

ಇದನ್ನೂ ಓದಿ : ಬೀದರ್‌ | ಸೌಹಾರ್ದ–ಬಾಂಧವ್ಯಕ್ಕಾಗಿ ಬೀದರದಿಂದ ಬೆಂಗಳೂರಿಗೆ ಏಕಾಂಗಿಯಾಗಿ ಪಾದಯಾತ್ರೆ

ಸಭೆಯಲ್ಲಿ ಸೂರ್ಯಕಾಂತ್ ಭಾವಿದೊಡ್ಡಿ, ಬಾಬುರಾವ ಆಣದೂರೆ, ಬೀದರ್ ತಾಲೂಕು ಅಧ್ಯಕ್ಷ ಶಿವಕುಮಾರ್ ಸದಾಪುಲೆ, ಭಾಲ್ಕಿ ತಾಲೂಕಾಧ್ಯಕ್ಷ ವಿಶ್ವನಾಥ್ ಮೋರೆ, ಬಸವಕಲ್ಯಾಣ ತಾಲೂಕು ಅಧ್ಯಕ್ಷ ಮನೋಹರ್ ಮೈಸೆ, ಔರಾದ್ ತಾಲೂಕು ಅಧ್ಯಕ್ಷ ಸುಭಾಷ್ ಡೊಂಗ್ರೆ, ಸಾಹಿತಿಗಳಾದ ಶರಣು ಫುಲೆ ಹಾಗೂ ಜಗನ್ನಾಥ್ ಬಡಿಗೇರ್ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಅನೇಕ ಬೌದ್ಧ ಉಪಾಸಕ-ಉಪಾಸಕಿಯರು ಉಪಸ್ಥಿತರಿದ್ದರು. ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ್ ಸಿಂಗೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...