ಬೀದರ್‌ | ಅರಣ್ಯೀಕರಣ, ಹಸಿರು ಹೊದಿಕೆ ಹೆಚ್ಚಳಕ್ಕೆ ಆದ್ಯತೆ ನೀಡಿ : ಸಚಿವ ರಾಮಲಿಂಗರೆಡ್ಡಿ

Date:

ಬೀದರ್ ಜಿಲ್ಲಾದ್ಯಂತ ಹಸಿರು ಹೊದಿಕೆ ಹೆಚ್ಚಿಸುವ ನಿಟ್ಟಿನಲ್ಲಿ ರಸ್ತೆ ಬದಿ ಹಾಗೂ ಸರ್ಕಾರಿ ಕಚೇರಿ ಆವರಣಗಳ ಖಾಲಿ ಜಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಅರಣ್ಯೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗರೆಡ್ಡಿ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಬೀದರ್ ನಗರದ ಹೊರವಲಯದಲ್ಲಿರುವ ಬೀದರ್ ಪ್ರಾದೇಶಿಕ ಅರಣ್ಯ ವಿಭಾಗದ ವ್ಯಾಪ್ತಿಯ ‘ದೇವ-ದೇವ ವನ’ಕ್ಕೆ ಬುಧವಾರ ಭೇಟಿ ನೀಡಿದ ಸಚಿವರು, ಅಲ್ಲಿನ ಬೃಹತ್ ಪಂಚವಟಿ, ಜಪಾನೀಸ್ ಗಾರ್ಡನ್, ಶಿವ ಪಂಚಾಯತಿ ವನ, ರಾಶಿ ವನ, ನವನಿಕೇತನ ವನ, ನಂದನ ವನ, ನವಗ್ರಹ ವನ ಹಾಗೂ ನಂದಿನಿ ವನಗಳನ್ನು ವೀಕ್ಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ವೇಳೆ ಮಾತನಾಡಿದ ಅವರು, “ವನ ಪ್ರದೇಶಗಳಲ್ಲಿ ಪ್ರಾಣಿ-ಪಕ್ಷಿ ಸಂಕುಲಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ವನಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು” ಎಂದು ನಿರ್ದೇಶನ ನೀಡಿದರು.

WhatsApp Image 2026 08 26 at 7.22.55 PM

ನಂತರ ಹಳ್ಳದಕೇರಿ ಟ್ರೀ ಪಾರ್ಕ್ ಹಾಗೂ ಪ್ಲಾಂಟೇಷನ್‌ಗೆ ಭೇಟಿ ನೀಡಿ, ವಿವಿಧ ಬಗೆಯ ಗಿಡ-ಮರಗಳನ್ನು ಬೆಳೆಸುತ್ತಿರುವುದನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈಗಾಗಲೇ ನೆಡಲಾಗಿರುವ ಗಿಡ-ಮರಗಳ ಸುರಕ್ಷತೆ ಹಾಗೂ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಗಿಡಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಜಿಲ್ಲೆಯಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಗಿಡ ನೆಡುವುದು ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ರಸ್ತೆ ಬದಿ ನೆಟ್ಟಿರುವ ಗಿಡಗಳಿಗೆ ಸಮರ್ಪಕವಾಗಿ ನೀರುಣಿಸುವುದರ ಜೊತೆಗೆ ಅವುಗಳ ನಿರಂತರ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಪ್ರಕೃತಿಯನ್ನು ಸಂರಕ್ಷಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ಕಲ್ಪಿಸಲು ಸಾಧ್ಯ” ಎಂದು ಸಚಿವರು ಹೇಳಿದರು.

ಜಿಲ್ಲೆಯ ಅರಣ್ಯ ಪ್ರದೇಶಗಳ ಅಭಿವೃದ್ಧಿ ಹಾಗೂ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ಉದ್ದೇಶದಿಂದ ಟ್ರೀ ಪಾರ್ಕ್‌ಗಳನ್ನು ಮತ್ತಷ್ಟು ಸುಂದರಗೊಳಿಸಲು ಅಗತ್ಯ ಅನುದಾನ ಹಾಗೂ ಸರ್ಕಾರದ ಬೆಂಬಲ ಒದಗಿಸಲಾಗುವುದು. ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ದೇವ-ದೇವ ವನ ವೀಕ್ಷಣೆಗೆ ಮುನ್ನ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ಸಚಿವರು ಗೌರವ ವಂದನೆ ಸ್ವೀಕರಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ

ಬೀದರ್‌ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತ್ ಸುಭಾಷರಾವ್ ಪಾಟೀಲ್, ಬೀದರ್ ಸಾಮಾಜಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಎರಡೋಣಿ, ಬೀದರ್ ವಲಯ ಅರಣ್ಯ ಅಧಿಕಾರಿ ಪ್ರವೀಣಕುಮಾರ ಮೋರೆ, ಬೀದರ್ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ಹೇಮಾ, ಸಾಮಾಜಿಕ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೀರೇಶ್ ಕಲ್ಯಾಣಿ, ಉಪವಲಯ ಅರಣ್ಯ ಅಧಿಕಾರಿ ಸದಾನಂದ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2026 08 13 at 6.47.20 PM 1
ಜಾಹೀರಾತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...