ಬೀದರ್‌ | ಕೃಷಿ, ಶಿಕ್ಷಣ, ವಸತಿ ಸಾಲ ಸೌಲಭ್ಯಕ್ಕೆ ಆದ್ಯತೆ ನೀಡಿ: ಸಂಸದ ಸಾಗರ್ ಖಂಡ್ರೆ

Date:

ಬೀದರ್ ಜಿಲ್ಲೆಯಲ್ಲಿ ಕೃಷಿ, ಶಿಕ್ಷಣ, ವಸತಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ದೊರೆಯುವಂತೆ ಬ್ಯಾಂಕ್ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಬೀದರ್ ಲೋಕಸಭಾ ಸದಸ್ಯ ಸಾಗರ್ ಈಶ್ವರ ಖಂಡ್ರೆ ಸೂಚಿಸಿದರು.

- Advertisement -

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಸಲಹಾ ಸಮಿತಿ (ಡಿಸಿಸಿ) ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿಎಲ್‌ಆರ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ರೈತರು ಬೆಳೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ತಕ್ಷಣ ಸಾಲ ಮಂಜೂರು ಮಾಡಬೇಕು. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕರ್ನಾಟಕ ಬ್ಯಾಂಕ್ ರೈತರಿಗೆ ಸಾಲ ವಿತರಿಸುವಲ್ಲಿ ನಿರೀಕ್ಷಿತ ಸಾಧನೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ನಿಗದಿತ ಗುರಿ ಸಾಧಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳು ಆರ್ಥಿಕ ತೊಂದರೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು. ಅವರಿಗೆ ಬ್ಯಾಂಕ್‌ಗಳ ಮೂಲಕ ಶಿಕ್ಷಣ ಸಾಲ ಸೌಲಭ್ಯ ಕಲ್ಪಿಸಬೇಕು. ಸಾಲ ಪಡೆಯುವ ವಿಧಾನದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ವಿದ್ಯಾಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಅರ್ಹ ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂದರು.

ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಮನೆ ದೊರೆಯುವಂತೆ ನೋಡಿಕೊಳ್ಳಬೇಕು. ಯೋಜನೆಗೆ ಅಗತ್ಯವಿರುವ ದಾಖಲೆಗಳ ಕುರಿತು ಫಲಾನುಭವಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. ದಾಖಲೆಗಳಿಗಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಧಿಕಾರಿಗಳು ಗಮನ ಹರಿಸಬೇಕು. ಬೆಳೆ ಸಾಲ, ಶಿಕ್ಷಣ ಸಾಲ ಹಾಗೂ ವಸತಿ ನಿರ್ಮಾಣ ಸಾಲದ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೈಗೊಂಡ ಕ್ರಮಗಳ ವರದಿಯನ್ನು ಮುಂದಿನ ಸಭೆಗೆ ಸಲ್ಲಿಸಬೇಕು ಎಂದು ಸೂಚಿಸಿದರು.

ಗ್ರಾಮೀಣ ಭಾಗದ ಜನರಿಗೆ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಹಾಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಕುರಿತು ಅರಿವು ಮೂಡಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಿ, ವಿಮಾ ಯೋಜನೆಗಳ ಪ್ರಯೋಜನಗಳನ್ನು ತಿಳಿಸಬೇಕು. ಅರ್ಹ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ವ್ಯಾಪ್ತಿಗೆ ತರಲು ಲೀಡ್ ಬ್ಯಾಂಕ್ ಮ್ಯಾನೇಜರ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಸಣ್ಣ ಉದ್ಯಮಗಳನ್ನು ಸ್ಥಾಪಿಸಲು ಆಸಕ್ತಿ ತೋರುವ ಫಲಾನುಭವಿಗಳ ಅರ್ಜಿಗಳನ್ನು ಸ್ವೀಕರಿಸಿ, ಅವರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಮುದ್ರಾ ಯೋಜನೆಯಡಿ ಶಿಶು ಸಾಲ ವಿತರಣೆ ಪ್ರಮಾಣ ಕಡಿಮೆಯಿದ್ದು, ಮುಂದಿನ ದಿನಗಳಲ್ಲಿ ಅದನ್ನು ಶೇ.50ರಷ್ಟು ಹೆಚ್ಚಿಸುವ ಗುರಿ ಹೊಂದಬೇಕು. ಈ ನಿಟ್ಟಿನಲ್ಲಿ ಬ್ಯಾಂಕ್ ಹಾಗೂ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.‌

WhatsApp Image 2026 11 13 at 8.18.17 PM

ಪಿಎಂಎಫ್‌ಎಂಇ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸೂಕ್ತ ದಾಖಲೆಗಳನ್ನು ಪಡೆದು ಯೋಜನೆಯ ಲಾಭ ದೊರೆಯುವಂತೆ ಮಾಡಬೇಕು. ಅರ್ಹತೆ ಇಲ್ಲದ ಕಾರಣಕ್ಕೆ ಅರ್ಜಿಗಳು ತಿರಸ್ಕೃತಗೊಂಡಿದ್ದರೆ, ಅದಕ್ಕೆ ಕಾರಣವನ್ನು ಫಲಾನುಭವಿಗಳಿಗೆ ತಿಳಿಸಬೇಕು. ಅಗತ್ಯ ದಾಖಲೆಗಳನ್ನು ಒದಗಿಸುವ ಕುರಿತು ಮಾರ್ಗದರ್ಶನ ನೀಡಿ, ಅರ್ಹರು ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯ 100 ರಿಂದ 200 ಮೀನುಗಾರರಿಗೆ ಸಾಲ ಸೌಲಭ್ಯ ಕಲ್ಪಿಸಲು ಸಂಬಂಧಿಸಿದ ಇಲಾಖೆ ಹಾಗೂ ಬ್ಯಾಂಕ್ ಅಧಿಕಾರಿಗಳು ಕ್ರಮ ವಹಿಸಬೇಕು. ಅದೇ ರೀತಿ ಪಶುಸಂಗೋಪನಾ ಕ್ಷೇತ್ರದಲ್ಲಿಯೂ ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಗೆ ಎಲ್ಲ ಅಧಿಕಾರಿಗಳು ಸಂಪೂರ್ಣ ಪ್ರಗತಿ ವರದಿಯೊಂದಿಗೆ ಹಾಜರಾಗಬೇಕು. ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು. ಮುಂದಿನ ಸಭೆಯಲ್ಲಿ ಎಲ್ಲ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ : ಬೀದರ್‌ | ಕನೇರಿ ಸ್ವಾಮಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್, ಲೀಡ್ ಬ್ಯಾಂಕ್ ಮ್ಯಾನೇಜರ್ ಪವನ ಪೂಜಾರಿ, ಎಸ್‌ಬಿಐ ಅಧಿಕಾರಿಗಳಾದ ಜಗದೀಶ್, ಮುಂಡಿರಾಜರೆಡ್ಡಿ, ಸರವಣನ್ ಶಿವಾನಂದನ್, ಆರ್‌ಬಿಐ ಬೆಂಗಳೂರು ಎಜಿಎಂ ಜಯಕುಮಾರ್, ಎಸ್‌ಬಿಐ ಬೀದರ್ ಪ್ರಾದೇಶಿಕ ವ್ಯವಸ್ಥಾಪಕ ಮಂಜುನಾಥ ರೆಡ್ಡಿ, ನಬಾರ್ಡ್ ಡಿಡಿಎಂ ಪವನ್ ಕುಮಾರ್ ಪೂಜಾರಿ, ಎಲ್‌ಡಿಎಂ ರಮೇಶ್ ಶಿಂಧೆ, ಎಸ್‌ಬಿಐ ವ್ಯವಸ್ಥಾಪಕ ವಿಷ್ಣುಕಾಂತ್ ಫತ್ತೆಪುರೆ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ನರಾಧಮ ಇಸ್ರೇಲಿನ ನೀಚ ಕೃತ್ಯಗಳು ಮತ್ತು ಮೋದಿ ಮೌನಕ್ಕೆ ಕೊನೆಯೇ ಇಲ್ಲವೇ?

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ ಕುರಿತ ಭಾರತದ ನಿಲುವು ಅತ್ಯಂತ ನಿರಾಶಾಜನಕ. ಮೋದಿ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...