ಬೀದರ್‌ | ಸೆ.9ರಿಂದ ಕೆಕೆಆರ್‌ಡಿಬಿ ಕಚೇರಿ ಎದುರು ಖಾಸಗಿ ಶಿಕ್ಷಣ ಸಂಸ್ಥೆಗಳ ಧರಣಿ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಸೆ.9 ರಿಂದ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ವಿಭಾಗೀಯ ಅಧ್ಯಕ್ಷ ಸುನಿಲ ಹುಡಗಿ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಯಾವುದೇ ಗದ್ದಲ ಅಥವಾ ಘೋಷಣೆಗಳಿಲ್ಲದೆ, ವಚನಗಳು ಹಾಗೂ ತತ್ವಪದಗಳನ್ನು ಹಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

“ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ಷೇತ್ರಕ್ಕೆ ಮೀಸಲಿಡಲಾಗಿರುವ ಅನುದಾನದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಕಡೆಗಣಿಸಲಾಗುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿರುವ ₹1,250 ಕೋಟಿ ಅನುದಾನದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಎಷ್ಟು ಪ್ರಮಾಣದ ಅನುದಾನ ನೀಡಲಾಗುತ್ತಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಕೆಕೆಆರ್‌ಡಿಬಿಗೆ ಮೀಸಲಾದ ₹5,000 ಕೋಟಿ ಅನುದಾನದಲ್ಲಿ ಕನಿಷ್ಠ ಶೇ.30ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು. ಅದರಲ್ಲಿ ಶೇ.5ರಷ್ಟು ಅನುದಾನವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ನೀಡಬೇಕು” ಎಂದು ಆಗ್ರಹಿಸಿದರು.

“1995ರಿಂದ ಅನುದಾನಕ್ಕಾಗಿ ಕಾಯುತ್ತಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿ ಹಂತ ಹಂತವಾಗಿ ಅನುದಾನ ನೀಡಬೇಕು. ಐದು ವರ್ಷ ಪೂರೈಸಿದ ಶಾಲೆಗಳಿಗೆ ಶೇ.25, ಹತ್ತು ವರ್ಷ ಪೂರ್ಣಗೊಳಿಸಿದ ಶಾಲೆಗಳಿಗೆ ಶೇ.50 ಹಾಗೂ 15 ವರ್ಷ ಪೂರ್ಣಗೊಳಿಸಿದ ಶಾಲೆಗಳಿಗೆ ಶೇ.100ರಷ್ಟು ಅನುದಾನ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಕನ್ನಡೇತರ ಮಾಧ್ಯಮಗಳ ಅನುದಾನ ರಹಿತ ಶಾಲೆಗಳಿಗೆ ನೇರ ಹಣಕಾಸಿನ ನೆರವು ನೀಡುವ ಬದಲು ಹೆಚ್ಚುವರಿ ಕೊಠಡಿಗಳು, ಶೌಚಾಲಯ, ಕಾಂಪೌಂಡ್, ವಿಜ್ಞಾನ ಮತ್ತು ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್‌ಬೋರ್ಡ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು” ಎಂದು ಮನವಿ ಮಾಡಿದರು.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನೀಡುವ ಮಾದರಿಯಲ್ಲಿ ಖಾಸಗಿ ಶಾಲೆಗಳಿಗೂ ವಿದ್ಯುತ್ ಬಿಲ್‌ನಲ್ಲಿ ವಿನಾಯಿತಿ ನೀಡಬೇಕು. ನಗರ ಪ್ರದೇಶಗಳಲ್ಲಿರುವ ಶಾಲಾ ಕಟ್ಟಡಗಳಿಗೆ ನೀಡಲಾಗುವ ಸೌಲಭ್ಯಗಳಂತೆ ಗ್ರಾಮೀಣ ಪ್ರದೇಶದ ಖಾಸಗಿ ಶಾಲಾ ಕಟ್ಟಡಗಳಿಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಸ್ತಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲು ಉದ್ದೇಶಿಸಿರುವ ಶೇ.7.5ರಷ್ಟು ಮೀಸಲಾತಿಯನ್ನು ಗ್ರಾಮೀಣ ಹಾಗೂ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಖಾಸಗಿ ಶಾಲೆಗಳ ಮಕ್ಕಳಿಗೂ ವಿಸ್ತರಿಸಬೇಕು. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳ ನಡುವೆ ತಾರತಮ್ಯ ಮಾಡಬಾರದು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ನಿಯಮಗಳನ್ನು 2012ರ ಮೂಲ ಸ್ವರೂಪದಲ್ಲೇ ಮರುಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸೆಪ್ಟೆಂಬರ್ 9ರಿಂದ 17ರವರೆಗೆ ಕಲಬುರಗಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಏಳು ಜಿಲ್ಲೆಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಕಲಬುರಗಿಗೆ ಆಗಮಿಸುವ ಸಂದರ್ಭದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸೆ.21ರಂದು ಬೀದರ್‌ನಲ್ಲಿ ಕೋಚಿಂಗ್‌ ಸೆಂಟರ್‌ಗಳ ವಿರುದ್ಧ ಧರಣಿ:

ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಮಣಗೀರೆ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್‌ಗಳ ಹಾವಳಿ ಹೆಚ್ಚುತ್ತಿದ್ದು, ಇದರಿಂದ ಶಾಲಾ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಅನಧಿಕೃತ ಕೋಚಿಂಗ್ ಕೇಂದ್ರಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸೆಪ್ಟೆಂಬರ್ 21ರಂದು ಬೀದರ್‌ನ ಸಾರ್ವಜನಿಕ ಶಿಕ್ಷಣ ಇಲಾಖೆ(ಡಿಡಿಪಿಐ) ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ತಿಳಿಸಿದರು.

ಬೀದರ್ ತಾಲೂಕಾಧ್ಯಕ್ಷ ಸಂದೀಪ ಶಟಕಾರ ಮಾತನಾಡಿ, “ಸೆಪ್ಟೆಂಬರ್ 21ರಂದು ನಡೆಯಲಿರುವ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು. ಅಂದಿನ ಪ್ರತಿಭಟನೆಗೆ ಜಿಲ್ಲೆಯ ಎಲ್ಲ ಖಾಸಗಿ ಶಾಲೆಗಳು ಕೈಜೋಡಿಸಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ : ಬೀದರ್‌ | ಜನರ ಮನೆ ಬಾಗಿಲಿಗೆ ಸರ್ಕಾರ, ಪ್ರಜಾ ಸೇವಕನಾಗಿ ಸೇವೆ : ಸಚಿವ ಈಶ್ವರ ಖಂಡ್ರೆ

ಒಕ್ಕೂಟದ ವಿಭಾಗೀಯ ಉಪಾಧ್ಯಕ್ಷ ಓಂಕಾರೇಶ್ವರ ವಿಶ್ವನಾಥಪ್ಪ, ಖಜಾಂಚಿ ಮಂಜೂರ್ ಇರ್ಫಾನ್, ವಿಭಾಗೀಯ ಕಾರ್ಯದರ್ಶಿ ಅರುಣಕುಮಾರ ಪೋಚಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುನಾಥ ರಡ್ಡಿ, ಜಿಲ್ಲಾ ಉಪಾಧ್ಯಕ್ಷ ಮುಕ್ರಂ ಪಟೇಲ್, ಜಿಲ್ಲಾ ಖಜಾಂಚಿ ಗಣಪತಿ ಸೋಲಪುರೆ, ಬಸವಕಲ್ಯಾಣ ತಾಲೂಕಾಧ್ಯಕ್ಷ ಧನರಾಜ ದೊಡಮನಿ, ಬೀದರ್ ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸಯ್ಯದ್ ಅಹ್ಮದ್ ಮುದ್ದೆ, ಹಿರಿಯ ಮುಖಂಡರಾದ ಗುಂಡಯ್ಯ ತೀರ್ಥಾ, ಔರಾದ್ ತಾಲೂಕಾಧ್ಯಕ್ಷ ಗುರುನಾಥ ದೇಶಮುಖ, ಕಮಲನಗರ ತಾಲೂಕಾಧ್ಯಕ್ಷ ರಾಜಕುಮಾರ ಹಮಿಲಪುರೆ, ಭಾಲ್ಕಿ ತಾಲೂಕಾಧ್ಯಕ್ಷ ಸುಭಾಷ ಹುಲಸುರೆ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲು ನಮ್ಮ ಕರ್ನಾಟಕ ಸೇನೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಅಂಗಡಿ, ಮುಂಗಟ್ಟುಗಳು ಸೇರಿದಂತೆ ಎಲ್ಲ ವ್ಯಾಪಾರ ಸಂಸ್ಥೆಗಳು,...

ಈ ದಿನ ಸಂಪಾದಕೀಯ | ಅಮೆರಿಕದ ದಬ್ಬಾಳಿಕೆ-ಮೋದಿ ಸರ್ಕಾರದ ಮೌನ; ಭಾರತದ ಸಾರ್ವಭೌಮತ್ವಕ್ಕೆ ಶೋಭೆಯಲ್ಲ!

ತನ್ನ ಹಿತಾಸಕ್ತಿಗಾಗಿ ಭಾರತದ ಇಂಧನ, ವ್ಯಾಪಾರ ಹಾಗೂ ವಿದೇಶಾಂಗ ನೀತಿಗಳನ್ನು ನಿಯಂತ್ರಿಸಲು...

ಬಾಡಿಗೆ ಕಾರು, ಇನ್‌ಸ್ಟಾಗ್ರಾಮ್ ಬಿಲ್ಡಪ್: ಉದ್ಯಮಿ ಸೋಗಿನಲ್ಲಿ ಮಹಿಳಾ ಪೊಲೀಸರಿಗೆ 24 ಲಕ್ಷ ರೂ. ವಂಚನೆ

ಮದುವೆಯಾಗುವ ಆಮಿಷವೊಡ್ಡಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ಗಳಿಂದ ಬರೋಬ್ಬರಿ 24 ಲಕ್ಷ ರೂಪಾಯಿ...