ಬೀದರ್‌ | ಹುಬ್ಬಳಿಯಲ್ಲಿ ನ.17ರಂದು ಖಾಸಗಿ ಶಾಲೆಗಳ ಪ್ರತಿಭಟನೆ

Date:

ರಾಜ್ಯ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ಬೇಡಿಕೆಗಳ ಈಡೇರಿಕೆಯಲ್ಲಿ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ, ನವೆಂಬರ್ 17ರಂದು ಧಾರವಾಡದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘ ನಿರ್ಧರಿಸಿದೆ ಎಂದು ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಯ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಎಚ್ಚರಿಕೆ ನೀಡಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ‘ಕನ್ನಡ ಶಾಲೆಗಳನ್ನು ಉಳಿಸಿ, ಶಿಕ್ಷಣವನ್ನು ಉಳಿಸಿ’ ಅಭಿಯಾನದಡಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ನ.18ರಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಿ ಹೋರಾಟ ನಡೆಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಇಸ್ರೇಲ್ ಚುಕ್ಕಾಣಿ ಹಿಡಿಯಲು ಮುಂದಾದ ‘ಗಾಡಿ ಐಸೆನ್‌ಕೋಟ್’; ಗಾಜಾ...

ಇಡೀ ಜಗತ್ತು ಕಾತರದಿಂದ ಕೇಳುತ್ತಿರುವ ಅತಿದೊಡ್ಡ ಪ್ರಶ್ನೆಯೆಂದರೆ, ಐಸೆನ್‌ಕೋಟ್‌ ಆಡಳಿತದಲ್ಲಿ ಗಾಜಾ ಬಿಕ್ಕಟ್ಟು ಶಾಶ್ವತವಾಗಿ ಪರಿಹಾರವಾಗುತ್ತದೆಯೇ ಎಂಬುದು. ಆದರೆ, ಇದು ವಾಸ್ತವಕ್ಕೆ ತೀರಾ ದೂರವಾದ ನಿರೀಕ್ಷೆಯಾಗಿದೆ. ಐಸೆನ್‌ಕೋಟ್‌ ಅವರು ವಾಸ್ತವಿಕವಾದಿ ನಾಯಕನೇ ಹೊರತು,...

50ನೇ ವರ್ಷಕ್ಕೆ ದಾಪುಗಾಲು | ಜನಮಾನಸ ಗೆದ್ದ ‘ಜನತಾ...

ಹಾಸನದ ಸಮಾನಾಸಕ್ತ ಗೆಳೆಯರು 1977ರಲ್ಲಿ ಹುಟ್ಟುಹಾಕಿದ ಜನತಾ ಮಾಧ್ಯಮ ಪತ್ರಿಕೆ, ತನ್ನ ನಿಲುವಿನಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ, ಜನಪರ ಧೋರಣೆಯನ್ನು ಉಳಿಸಿಕೊಂಡು ಬಂದಿದೆ. ಸಾರ್ಥಕ 49 ವರ್ಷಗಳನ್ನು ಪೂರೈಸಿ, ಈಗ 50ನೇ ವರ್ಷಕ್ಕೆ...

1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕು. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯಲ್ಲಿನ ಕ್ಲಿಷ್ಟಕರ ನಿಯಮಗಳನ್ನು ಸರಳೀಕರಿಸಬೇಕು. ಕಳೆದ ಆರು ವರ್ಷಗಳಿಂದ ಸ್ಥಗಿತಗೊಂಡಿರುವ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯ ಉಚಿತ ಶಿಕ್ಷಣ ಸೌಲಭ್ಯವನ್ನು ಮರುಜಾರಿಗೊಳಿಸಬೇಕು. ನಿವೃತ್ತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜತೆಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

“ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯು ಆಡಳಿತ ಮಂಡಳಿಗಳಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದೆ. ಅನಗತ್ಯ ನಿಯಮಗಳು ಹಾಗೂ ಷರತ್ತುಗಳಿಂದ ಶಾಲೆಗಳ ನಿರ್ವಹಣೆ ಕಷ್ಟಕರವಾಗಿದ್ದು, ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಿ ಶಿಕ್ಷಣ ಸಂಸ್ಥೆಗಳಿಗೆ ಅನುಕೂಲ ಕಲ್ಪಿಸಬೇಕು. ಬಡ, ದಲಿತ ಹಾಗೂ ಶೋಷಿತ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ನೆರವಾಗಿದ್ದ ಆರ್‌ಟಿಇ ಸೌಲಭ್ಯವನ್ನು ಸ್ಥಗಿತಗೊಳಿಸಿರುವುದು ಸರಿಯಲ್ಲ. ಈ ಯೋಜನೆಯನ್ನು ಮರುಜಾರಿಗೊಳಿಸುವ ಮೂಲಕ ಎಲ್ಲ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣದ ಅವಕಾಶ ಕಲ್ಪಿಸಬೇಕು” ಎಂದರು.

WhatsApp Image 2026 10 10 at 7.46.08 PM 39

1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳು, ಅದರಲ್ಲೂ ವಿಶೇಷವಾಗಿ ಗಡಿ ಭಾಗದ ಶಾಲೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಇಂತಹ ಶಾಲೆಗಳಿಗೆ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ನವೆಂಬರ್ 1ರಂದು ಮುಖ್ಯಮಂತ್ರಿ ಅವರು ಅನುದಾನ ನೀಡುವ ಭರವಸೆ ನೀಡಿದ್ದರೂ ಈವರೆಗೆ ಅಧಿಕೃತ ಘೋಷಣೆ ಹೊರಬಿದ್ದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ಮುಖ್ಯಮಂತ್ರಿ ಅವರು ಇಂಗ್ಲಿಷ್ ಮಾಧ್ಯಮ ಶಾಲೆಗಳ ಪ್ರತಿನಿಧಿಗಳೊಂದಿಗೆ ಮಾತ್ರ ಸಭೆ ನಡೆಸಿ, ಕನ್ನಡ ಮಾಧ್ಯಮ ಶಾಲೆಗಳ ಸಮಸ್ಯೆಗಳನ್ನು ಕಡೆಗಣಿಸಿದ್ದಾರೆ. ನಾವು ಇಂಗ್ಲಿಷ್ ಭಾಷೆಯ ವಿರೋಧಿಗಳಲ್ಲ. ಆದರೆ ಕನ್ನಡ ಶಾಲೆಗಳು ಉಳಿಯಬೇಕು. ಕನ್ನಡ ನಮ್ಮ ಉಸಿರು, ನೆಲ ಮತ್ತು ಜಲವಾಗಿದ್ದು, ಅವುಗಳ ಉಳಿವಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಜಲಾದೆ ಒತ್ತಾಯಿಸಿದರು.

ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಮಣಗೀರೆ ಮಾತನಾಡಿ, “ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಸರ್ಕಾರದ ಚಿಂತನೆಗೆ ವಿರೋಧ ವ್ಯಕ್ತಪಡಿಸಿದ ಅವರು, ಸರ್ಕಾರಿ ಶಾಲೆಗಳ ನಿರ್ವಹಣೆ ಹಾಗೂ ಶಿಕ್ಷಣದ ಗುಣಮಟ್ಟ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಖಾಸಗಿ ಸಂಸ್ಥೆಗಳಿಗೆ ವಹಿಸುವ ಬದಲು ಅಗತ್ಯ ಶಿಕ್ಷಕರ ನೇಮಕಾತಿ ಮತ್ತು ಮೂಲಸೌಕರ್ಯ ಒದಗಿಸಬೇಕು” ಎಂದರು.

ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಬೋಧನೆ ಜತೆಗೆ ಬಿಸಿಯೂಟ ಸೇರಿದಂತೆ ಹಲವು ಆಡಳಿತಾತ್ಮಕ ಹಾಗೂ ಲೆಕ್ಕಪತ್ರಗಳ ಜವಾಬ್ದಾರಿಗಳನ್ನು ವಹಿಸಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಸಾವಿರಾರು ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ವೇಳೆ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯ ಒದಗಿಸುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ. ಸರ್ವಶಿಕ್ಷಣ ಅಭಿಯಾನದ ಆಶಯದಂತೆ ಎಲ್ಲರಿಗೂ ಉಚಿತ ಶಿಕ್ಷಣ ಕಲ್ಪಿಸುವ ಜವಾಬ್ದಾರಿಯನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸಬೇಕು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಖಾಸಗಿ ಶಾಲೆಗಳು ಉತ್ತಮ ಫಲಿತಾಂಶ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ. ಇಂತಹ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ವಹಿಸುವ ಕುರಿತು ಚಿಂತಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.

WhatsApp Image 2026 10 10 at 6.59.42 PM 20

ನವೆಂಬರ್ 17ರಂದು ಹುಬ್ಬಳ್ಳಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಹಾಗೂ ನೌಕರರ ಹೋರಾಟ ಸಮನ್ವಯ ಸಮಿತಿ ಮತ್ತು ರಾಜ್ಯ ಸಂಘಟನೆಯ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಬೀದರ್ ಜಿಲ್ಲೆಯ ಎಂಟು ತಾಲ್ಲೂಕುಗಳಿಂದ ಒಂದು ಸಾವಿರಕ್ಕೂ ಹೆಚ್ಚು ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಭಾಗವಹಿಸಲಿದ್ದಾರೆ. ಶಿಕ್ಷಣ ವ್ಯವಸ್ಥೆಯ ಉಳಿವಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸಾಹಿತಿಗಳು, ಶಿಕ್ಷಣ ತಜ್ಞರು, ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳು ಬೆಂಬಲ ನೀಡಬೇಕು ಎಂದು ಮಣಗೀರೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಗುರುನಾಥ ರಡ್ಡಿ, ಜಿಲ್ಲಾ ಘಟಕದ ಸಲಹಾ ಸಮಿತಿ ಸದಸ್ಯ ಗುಂಡಯ್ಯ ತೀರ್ಥ, ಸಂಘದ ಔರಾದ್ ತಾಲೂಕು ಅಧ್ಯಕ್ಷ ಗುರುನಾಥ ದೇಶಮುಖ, ಕಮಲನಗರ ತಾಲೂಕಾಧ್ಯಕ್ಷ ರಾಜಕುಮಾರ ಹಮಿಲಪುರೆ, ದೇವಿದಾಸ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಭಾಲ್ಕಿ | ಕನ್ನಡ ಸೇವೆಗೆ ಸಂದ ಗೌರವ ಸಂತಸ ತಂದಿದೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಅಂಗನವಾಡಿ ನೌಕರರ ಬಾಕಿ ವೇತನಕ್ಕೆ ಆಗ್ರಹ; ಹೋರಾಟದ ಎಚ್ಚರಿಕೆ

ಅಂಗನವಾಡಿ ನೌಕರರ ದ.ಕ. ಜಿಲ್ಲಾ ಸಮಿತಿ ಸಭೆಯು ಬಿಸಿರೋಡ್ ರಿಕ್ಷಾ ಭವನದಲ್ಲಿ...

ಹಾಸನ ಡಿಸಿ ಕಚೇರಿಯಲ್ಲಿ ಲಂಚಾವತಾರ ಆರೋಪ: ಎಚ್‌ಡಿಕೆ ಕೈಯಲ್ಲಿ 15 ಪುಟಗಳ ವಾಟ್ಸ್‌ಆ್ಯಪ್‌ ಚಾಟ್; ಸಿಕ್ಕಿದ್ದು ಹೇಗೆ?

ಕರ್ನಾಟಕದ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಮುನ್ನೆಲೆಗೆ ಬಂದಿವೆ....

50ನೇ ವರ್ಷಕ್ಕೆ ದಾಪುಗಾಲು | ಜನಮಾನಸ ಗೆದ್ದ ‘ಜನತಾ ಮಾಧ್ಯಮ’

ಹಾಸನದ ಸಮಾನಾಸಕ್ತ ಗೆಳೆಯರು 1977ರಲ್ಲಿ ಹುಟ್ಟುಹಾಕಿದ ಜನತಾ ಮಾಧ್ಯಮ ಪತ್ರಿಕೆ, ತನ್ನ...

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ ಆಗ್ರಹ

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ...