ಬೀದರ್‌ | ಶೋಷಿತರಲ್ಲಿ ಸ್ವಾಭಿಮಾನ ಪ್ರಜ್ಞೆ ಮೂಡಿಸಿದವರು ಪ್ರೊ.ಬಿ.ಕೃಷ್ಣಪ್ಪ : ರಮೇಶ ಡಾಕುಳಗಿ

Date:

1970ರ ದಶಕದಲ್ಲಿ ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ ಮತ್ತು ಸ್ವಾವಲಂಬನೆಯ ಪ್ರಜ್ಞೆ ಮೂಡಿಸಿ, ಶೋಷಣೆಮುಕ್ತ ಸಮಾಜ ನಿರ್ಮಾಣಕ್ಕಾಗಿ ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕಿದವರು ಪ್ರೊ. ಬಿ. ಕೃಷ್ಣಪ್ಪ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರವಾದ) ರಾಜ್ಯ ಸಂಘಟನಾ ಸಂಚಾಲಕ ರಮೇಶ್ ಡಾಕುಳಗಿ ಹೇಳಿದರು.

- Advertisement -

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ಬೀದರ್ ಜಿಲ್ಲಾ ಸಮಿತಿ ವತಿಯಿಂದ ದಲಿತ ಚಳುವಳಿಯ ಪ್ರೇರಕ ಶಕ್ತಿ, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮದಿನದ ಅಂಗವಾಗಿ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ಆಯೋಜಿಸಿದ ಶೋಷಿತ ಸಮುದಾಯಗಳ ಐಕ್ಯತೆ ದಿವಸ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ದಲಿತ ಚಳುವಳಿಯ ಸೈದ್ಧಾಂತಿಕ ಗುರಿ ಹಾಗೂ ಮಾರ್ಗದಲ್ಲಿದ್ದ ತಾತ್ವಿಕ ವೈರುಧ್ಯಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿದ ಅವರು, 1976ರಲ್ಲಿ ದಲಿತ ಸಾಹಿತ್ಯ ಸಮಾವೇಶವನ್ನು ಸಂಘಟಿಸುವ ಮೂಲಕ ಸಾಹಿತಿಗಳು, ಚಿಂತಕರು ಮತ್ತು ಬರಹಗಾರರನ್ನು ಒಂದೇ ವೇದಿಕೆಗೆ ಕರೆತಂದು ಹೊಸ ಚಿಂತನೆಗೆ ನಾಂದಿ ಹಾಡಿದರು” ಎಂದು ತಿಳಿಸಿದರು.

“ಜಾತಿ ಆಧಾರಿತ ದೌರ್ಜನ್ಯ ಮತ್ತು ಅಸ್ಪೃಶ್ಯತೆಗೆ ಒಳಗಾಗುತ್ತಿದ್ದ ಹೊಲೆಯ ಹಾಗೂ ಮಾದಿಗ ಸಮುದಾಯಗಳ ನಡುವೆ ಸೋದರತ್ವ ಬೆಳೆಸಿದ ಪ್ರೊ. ಬಿ. ಕೃಷ್ಣಪ್ಪ ಅವರು, ಇತರೆ ತಳ ಸಮುದಾಯಗಳಿಗೂ ನಾಯಕತ್ವ ನೀಡಿ ಸಮಸ್ತ ಶೋಷಿತ ಸಮುದಾಯಗಳ ಐಕ್ಯತೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಮಹಾನ್ ಹೋರಾಟಗಾರರಾಗಿದ್ದರು” ಎಂದು ಸ್ಮರಿಸಿದರು.

ದಸಂಸ ಜಿಲ್ಲಾಧ್ಯಕ್ಷ ರಮೇಶ ಮಂದಕನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಅನಿಲಕುಮಾರ್ ಬೆಲ್ದಾರ್, ಸುಮಂತ್ ಕಟ್ಟಿಮನಿ, ರಮೇಶ ಕಟ್ಟಿತೂಗಾವ್, ಶ್ರೀಪಾತರಾವ್ ದೀನೆ, ಶಿವಕುಮಾರ್ ನೀಲಿಕಟ್ಟಿ, ರಾಜಕುಮಾರ್ ಬನ್ನೇರ್, ಕೃಷ್ಣಪ್ಪ ಹಾಳಗೊರ್ಟೆ, ಪ್ರಭುರಾವ ಚಿತ್ತಕೋಟ, ಶಂಕರ ಮೊಳಕೆರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವ ಆಚರಣೆ

ಕಾರ್ಯಕ್ರಮದಲ್ಲಿ ಪ್ರಮುಖರಾದ ಬಾಬುರಾವ್ ಮಾಳೆ, ತುಕಾರಾಮ ಲಾಡಕರ್, ಕೈಲಾಸ ಮೇಟಿ, ವಿಠ್ಠಲ್ ಲಾಡಕರ್, ಜಗದೇವಿ ಭಂಡಾರಿ, ಅಂಬೇಡ್ಕರ್ ಸಾಗರ್, ಅಂಬಾದಾಸ ಗಾಯಕವಾಡ, ಸುಧಾಕರ್ ಮಾಳಗೆ, ಗೋಪಾಲ್ ಸಾಗರ್, ಶಾಹುರಾಜ ಡಾಕುಳಗಿ, ರಾಜಕುಮಾರ್ ಕಾಳೇಕರ್, ರಾಹುಲ ಉದ್ದಾ, ಅಮೂಲ ಸೂರ್ಯವಂಶಿ, ಮಾಣಿಕ್ ಮಾಡಗುಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಕ್ಕಳಿಗೆ ಇಂಟರ್ನೆಟ್‌ ನಿರ್ಬಂಧ | ಸ್ವಾತಂತ್ರ್ಯಕ್ಕೆ ಕಡಿವಾಣವಲ್ಲ, ಡಿಜಿಟಲ್ ಜಗತ್ತಿಗೆ ಹೊಣೆಗಾರಿಕೆಯ ಚೌಕಟ್ಟು ಅಗತ್ಯ

ಇಂಟರ್ನೆಟ್ ಪ್ರವೇಶವನ್ನು ಕೇವಲ ತಾಂತ್ರಿಕ ಸೌಲಭ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಇದೇ ಡಿಜಿಟಲ್...

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...