ಬೀದರ್‌ | ರಹೀಂ ಖಾನ್‍ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

Date:

ಬೀದರ್ ಶಾಸಕ ರಹೀಂ ಖಾನ್‍ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆಕ್ಯಾನಿಕ್‍ಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಹೀಂಖಾನ್ ಅವರ ಬೆಂಬಲಿಗರು ನಗರದಲ್ಲಿ ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

- Advertisement -

ನೌಬಾದ್‍ನ ಆಟೊನಗರದಲ್ಲಿ ಮೊಹಮ್ಮದಾಬಾದ್ ಆಟೋ ನಗರ ಅಸೋಸಿಯೇಷನ್ ಮುಂದಾಳತ್ವದಲ್ಲಿ ಮೆಕ್ಯಾನಿಕ್‍ಗಳು ಪ್ರತಿಭಟನೆ ಮಾಡಿದರು. ರಹೀಂಖಾನ್ ಅವರ ಭಾವಚಿತ್ರ ಹಾಗೂ ರಹೀಂಖಾನ್ ಅವರಿಗೆ ಸಚಿವ ಸ್ಥಾನ ಕೊಡಿ ಎಂಬ ಬರಹವಿದ್ದ ಫಲಕ ಕೈಯಲ್ಲಿ ಹಿಡಿದಿದ್ದರು. ʼಕೊಡಲೇ ಬೇಕು ಕೊಡಲೇ ಬೇಕು, ರಹೀಂಖಾನ್ ಅವರಿಗೆ ಸಚಿವ ಸ್ಥಾನ ಕೊಡಲೇ ಬೇಕುʼ ಎಂದು ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಪ್ರಮುಖರು ಮಾತನಾಡಿ, “ರಹೀಂ ಖಾನ್ ಅವರು ಕಲ್ಯಾಣ ಕರ್ನಾಟಕ ಭಾಗದ ಅಲ್ಪಸಂಖ್ಯಾತರ ಸಮುದಾಯದ ಹಿರಿಯ ಮುಖಂಡರಾಗಿದ್ದಾರೆ. ಹಿಂದೆ ಎರಡು ಬಾರಿ ಸಚಿವರಾಗಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ನಾಲ್ಕು ಸಲ ಶಾಸಕರಾದ ಅವರು ಜನ ಪರ ಕಾಳಜಿ ಹೊಂದಿದ್ದಾರೆ. ಅವರಂಥ ನಾಯಕರು ಸಚಿವ ಸಂಪುಟದಲ್ಲಿ ಇರುವುದು ಬಹಳ ಅವಶ್ಯಕವಾಗಿದೆ. ಹೀಗಾಗಿ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದರು.

ಮೊಹಮ್ಮದಾಬಾದ್ ಆಟೋನಗರ ಅಸೋಸಿಯೇಷನ್ ಅಧ್ಯಕ್ಷ ಬಾಬಾಭಾಯಿ ಶೇರಿಕಾರ್, ಉಪಾಧ್ಯಕ್ಷ ಶಬ್ಬರ್, ಕಾರ್ಯದರ್ಶಿ ಮುಬಾಶಿರ್ ಉಲ್ಲಾ, ಖಜಾಂಚಿ ಅಜೀಂಖಾನ್, ಜಂಟಿ ಖಜಾಂಚಿ ಗೋರೆಭಾಯಿ, ನಿರ್ದೇಶಕ ಅಬ್ದುಲ್ ಶಹಬ್ಬಾಸ್ ಮತ್ತಿತರರು ಪಾಲ್ಗೊಂಡಿದ್ದರು.

ಗಾಂಧಿಗಂಜ್ : ನಗರದ ಗಾಂಧಿಗಂಜ್‍ನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು, ಕೃಷಿ ಕಾರ್ಮಿಕರು, ಹಮಾಲರು ಹಾಗೂ ಶಾಸಕ ರಹೀಂಖಾನ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ ಗಮನ ಸೆಳೆದರು. ರಹೀಂ‌ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಜನರ ಭಾವನೆಗೆ ಸ್ಪಂದಿಸಿ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಕನೇರಿ ಶ್ರೀ ಪ್ರವೇಶ ನಿಷೇಧಿಸದಿದ್ದರೆ ಬಸವಕಲ್ಯಾಣ ಬಂದ್ : ಎಚ್ಚರಿಕೆ

ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿಜೇಂದ್ರ ರಾಜಪುರೆ, ಪ್ರಮುಖರಾದ ದತ್ತಾತ್ರಿ ಜಮಾದಾರ್, ಫಿರೋಜ್‍ಖಾನ್, ಮುಕೇಶ್ ಗಂಗೆನೋರ್ ಮತ್ತಿತರರು ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...