ಬೀದರ್‌ | ಒಳಮೀಸಲಾತಿ ವರ್ಗೀಕರಣ ಅನ್ಯಾಯ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Date:

ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ತಾಲೂಕು ಭೋವಿ, ವಡ್ಡರ, ಬಂಜಾರ, ಕೊರಮ, ಕೊರಚ ಸಮಾಜದವರು ಮಂಗಳವಾರ ಚಿಟಗುಪ್ಪ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪಟ್ಟಣದಲ್ಲಿ ಹೊಸ ಬಸ್‌ ನಿಲ್ದಾಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧೀಜಿ ವೃತ್ತದ ಮಾರ್ಗವಾಗಿ ತಹಸೀಲ್‌ ಕಚೇರಿವರೆಗೆ ನಡೆಯಿತು. ಬಳಿಕ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಗ್ರೇಡ್-‌2 ತಹಸೀಲ್ದಾರ್‌ ಸುಭಾಷ ಚಂದ್ರ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ತಹಸೀಲ್ದಾರ್ ಕಚೇರಿ ಎದುರು ಜಮಾಯಿಸಿ ಸಮುದಾಯಗಳ ಪ್ರಮುಖರು ಒಳ ಮೀಸಲಾತಿ ಅನ್ಯಾಯ ಸರಿಪಡಿಸಿ, ಮೀಸಲಾತಿ ಇರಲಿ–ಒಳಮೀಸಲಾತಿ ಬೇಡ, ರೋಸ್ಟರ್ ಬಿಂದು ರದ್ದುಗೊಳಿಸಬೇಕು, ಭೋವಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂಬ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರು ಮಾತನಾಡಿ, “ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರ ‘ಎ’, ‘ಬಿ’ ಮತ್ತು ‘ಸಿ’ ಎಂದು ಗುಂಪುಗಳನ್ನು ರಚಿಸಿದೆ. ‘ಸಿ’ ಗುಂಪಿನಲ್ಲಿ ಒಟ್ಟು 63 ಸಮುದಾಯಗಳಿದ್ದು, ಅದರಲ್ಲಿರುವ ಬಂಜಾರ, ಕೊರಮ, ಕೊರಚ ಹಾಗೂ ಭೋವಿ ಸಮುದಾಯಗಳಿಗೆ ಶೇ.80ರಷ್ಟು ಮತ್ತು 59 ಅಲೆಮಾರಿ ಸಮುದಾಯಗಳಿಗೆ ಶೇ.20ರಷ್ಟು ಪಾಲು ನಿಗದಿಪಡಿಸಲಾಗಿದೆ” ಎಂದು ಹೇಳಿದರು.

ಪ್ರಸ್ತುತ ಜಾರಿಯಲ್ಲಿರುವ ನೇಮಕಾತಿ ರೋಸ್ಟರ್ ವ್ಯವಸ್ಥೆಯಲ್ಲಿ 59 ಅಲೆಮಾರಿ ಸಮುದಾಯಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಇದರಿಂದ ‘ಸಿ’ ಗುಂಪಿನಲ್ಲಿ ಶೇ.80ರಷ್ಟು ಪಾಲು ಹೊಂದಿರುವ ಬಂಜಾರ, ಕೊರಮ, ಕೊರಚ ಹಾಗೂ ಭೋವಿ ಸಮುದಾಯಗಳಿಗೆ ಶೈಕ್ಷಣಿಕ ಅನ್ಯಾಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿ ವರ್ಗೀಕರಣವು ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ. ಈ ವರ್ಗೀಕರಣದಿಂದ ಶೈಕ್ಷಣಿಕ, ಉದ್ಯೋಗದಲ್ಲಿ ಮೊದಲಿನಿಂದಲೂ ವಂಚಿತರಾಗಿರುವ ನಮಗೆ ಅವೈಜ್ಞಾನಿಕ ಒಳಮೀಸಲಾತಿ ನಮ್ಮ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದರು.

WhatsApp Image 2026 08 14 at 11.58.13 AM 6

ಒಳಮೀಸಲಾತಿ ವರ್ಗೀಕರಣವನ್ನು ಸರಿಪಡಿಸಿ, ನೇಮಕಾತಿ ರೋಸ್ಟರ್ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸಬೇಕು. ಇಲ್ಲದಿದ್ದರೆ ಹಳೆ ಮೀಸಲಾತಿಯನ್ನೇ ನೀಡಿ ಸಾಮಾಜಿಕ ನ್ಯಾಯವನ್ನು ಕಾಪಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಅಧಿಕ ಶುಲ್ಕ: ಖಾಸಗಿ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

ಈ ಸಂದರ್ಭದಲ್ಲಿ ಭೋವಿ ವಡ್ಡರ ಸಮಾಜದ ಜಿಲ್ಲಾಧ್ಯಕ್ಷ ಹಣಮಂತ ಮಾಳಗಿಮನಿ, ಬಂಜಾರ ಸಮಾಜದ ಶ್ರೀಗಳಾದ ರಾಜು ಮಹಾರಾಜ. ಭೋವಿ ವಡ್ಡರ ಸಮಾಜ ತಾಲೂಕ ಅಧ್ಯಕ್ಷ ಲಕ್ಷ್ಮಣ ಭೋವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿಷೇಕ ವಾಡೇಕರ್. ಹುಮನಾಬಾದ ತಾಲೂಕ ಅಧ್ಯಕ್ಷ ಸಂಜು ವಾಡೇಕರ್, ಬಂಜಾರ ಸಮಾಜ ತಾಲೂಕ ಅಧ್ಯಕ್ಷ ಬಾಬುರಾವ್ ಚವ್ಹಾಣ, ಕೊರಮ ಸಮಾಜ ತಾಲೂಕ ಅಧ್ಯಕ್ಷ ವಾಮನ ಮಾನೆ ಸೇರಿದಂತೆ ಭೋವಿ, ವಡ್ಡರ, ಬಂಜಾರ, ಕೊರಮ, ಕೊರಚ ಸಮುದಾಯಗಳ ಮಹಿಳೆಯರು, ಯುವಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಹುಮನಾಬಾದ್ ತಾಲೂಕು ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷರಾಗಿ ಸಂತೋಷ ಸಂಗಮ ಆಯ್ಕೆ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕು ಎಸ್‌ಟಿ ಟೋಕರೆ ಕೋಳಿ ಸಮಾಜ ಸಂಘದ...

ಬೀದರ್‌ | ಹೆಕ್ಟೇರ್‌ಗೆ ₹35 ಸಾವಿರ ಬರ ಪರಿಹಾರ ನೀಡಲು ಆಗ್ರಹ

ಬರದಿಂದಾಗಿ ಬೆಳೆ ಹಾನಿಗೊಳಗಾದ ಬೀದರ್ ಜಿಲ್ಲೆಯ ರೈತರಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಹೆಕ್ಟೇರ್‌ಗೆ...