ಬೀದರ್‌ | ಅಂಗವಿಕಲರ ಪಿಂಚಣಿ ಬಿಡುಗಡೆ ಆಗ್ರಹಿಸಿ ಧರಣಿ

Date:

ಅಂಗವಿಕಲರ ಪಿಂಚಣಿ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ ಜಿಲ್ಲಾ ಅಂಗವಿಕಲರ ಹಿತರಕ್ಷಣ ಸಮಿತಿಯ ವತಿಯಿಂದ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ಸಮಿತಿಯ ಪ್ರಮುಖರು ಮಾತನಾಡಿ, “ಕಳೆದ ಮೂರು ತಿಂಗಳಿನಿಂದ ಅಂಗವಿಕಲರ ಪಿಂಚಣಿ ಬಿಡುಗಡೆಯಾಗದೇ ಸಾವಿರಾರು ಫಲಾನುಭವಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಾಕಿ ಉಳಿದಿರುವ ಪಿಂಚಣಿ ಹಣವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಅಂಗವಿಕಲರ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ, ಅಭಿವೃದ್ಧಿಗೆ ಶೇ.5ರಷ್ಟು ಅನುದಾನ ಮೀಸಲಿಡುವುದು, ಆದಾಯ ಮಿತಿಯನ್ನು ಹೆಚ್ಚಿಸುವುದು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ಹಾಗೂ ಪ್ರಯಾಣ ಭತ್ಯೆ ನೀಡುವುದು, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅಂಗವಿಕಲರ ಸಮಸ್ಯೆಗಳ ಪರಿಶೀಲನಾ ಸಭೆಗಳನ್ನು ನಿಯಮಿತವಾಗಿ ನಡೆಸುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

ಆಧಾರ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಅನುದಾನ ಜಮಾ ಮಾಡುವುದು, ಬೀದರ ಜಿಲ್ಲೆಯಲ್ಲಿ ಅಂಗವಿಕಲರ ಭವನ ನಿರ್ಮಾಣ, ಮನೆ ಹಾಗೂ ನಿವೇಶನ ಮಂಜೂರು, ಆಧಾರ ಯೋಜನೆಯ ಗುರಿ ಹೆಚ್ಚಳ, ಅಂಗವಿಕಲರ ಅಭಿವೃದ್ಧಿಗೆ ಮೀಸಲಾದ ಶೇ.5ರಷ್ಟು ಅನುದಾನದ ಸಮರ್ಪಕ ಬಳಕೆ, ಸ್ವಯಂಸೇವಾ ಸಂಸ್ಥೆಗಳಿಗೆ ಬಾಕಿ ಅನುದಾನ ಬಿಡುಗಡೆ, ತ್ರಿಚಕ್ರ ವಾಹನಗಳ ವಿತರಣೆ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಾಮನಿರ್ದೇಶಿತ ಸದಸ್ಯರಾಗಿ ಅಂಗವಿಕಲರಿಗೆ ಅವಕಾಶ ಕಲ್ಪಿಸುವುದು ಹಾಗೂ ವಿವಿಧ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಧರಣಿನಿರತರು ಒತ್ತಾಯಿಸಿದರು.

ಬೀದರ ನಗರದ ಶಾಹೀನ್ ನಗರದಲ್ಲಿರುವ ದಿವ್ಯಾಂಗ ದಂಪತಿಯ ಮನೆಗೆ ತೆರಳುವ ರಸ್ತೆಯನ್ನು ತಂತಿ ಹಾಕಿ ಬಂದ್ ಮಾಡಿರುವುದನ್ನು ತಕ್ಷಣ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಸರ್ಕಾರ ಶೀಘ್ರವೇ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಮಿತಿಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಧಕ್ಕೆ ಓದು ನಿಲ್ಲಿಸಿದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ಧರಣಿ ಸತ್ಯಾಗ್ರಹದಲ್ಲಿ ಜಿಲ್ಲಾ ಅಧ್ಯಕ್ಷ ರಾಜಪ್ಪ ಎಂ.ಪಾತರಪಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭು ಕುತ್ತಾಬಾದ್, ಸೇರಿದಂತೆ ಪ್ರಮುಖರಾದ ವಿಠಲ ಕಾಳೆ, ಶಾಂತಕುಮಾರ ಯದಲಾಪೂರ, ಸುನೀಲ ಚಾಂಬೋಳ, ತುಕಾರಾಮ ಬಗದಲ್, ಸಾಲೋಮನ ಚಟ್ನಳ್ಳಿ, ಪ್ರವೀಣ ಚಟ್ನಳ್ಳಿ, ಅರುಣ ಕಾಡವಾದ, ಶ್ರೀನಿವಾಸ ಕ್ಯಾಸ, ಬಸವರಾಜ ನಾವದಗೇರಿ, ಸುನೀಲ ನೇಳಗಿ, ಬೆಂಜುಮ್ಯಾನ್, ದಿಲೀಪ ಕಾಡವಾದ ಸೇರಿದಂತೆ 50ಕ್ಕೂ ಹೆಚ್ಚು ಅಂಗವಿಕಲರು ಹಾಗೂ ವಿಧವೆಯರು ಧರಣಿಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಶಿವಮೊಗ್ಗ | ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಜಾಗೃತಿ ಘೋಷಣೆಗಳೊಂದಿಗೆ ಜಾಥಾ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...