ಬೀದರ್‌ | ಬ್ರಿಮ್ಸ್ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Date:

ಬೀದರ ನಗರದ ಬ್ರಿಮ್ಸ್ ಆಸ್ಪತ್ರೆ ಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ರೋಗಿಗಳಿಗೆ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಯುವರಕ್ಷಣಾ ವೇದಿಕೆ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.

- Advertisement -

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ʼಆಸ್ಪತ್ರೆಗಳಿಗೆ ತೆರಳುವ ರೋಗಿಗಳು ಬಳಸುವ ಶೌಚಾಲಯಗಳಿಗೆ ಬೀಗ ಹಾಕಲಾಗುತ್ತಿದೆ. ಔಷಧಿ, ರಕ್ತಪರೀಕ್ಷೆ ಆಸ್ಪತ್ರೆಯಲ್ಲಿ ಮಾಡದೆ ಖಾಸಗಿ ಅಂಗಡಿಗಳಿಗೆ ಕಳುಹಿಸಲಾಗುತ್ತಿದೆ. ಖಾಸಗಿ ಆಂಬುಲೆನ್ಸ್‌ ಅವರು ಹಾವಳಿ ಹೆಚ್ಚಾಗಿದ್ದು, ಬಡ ರೋಗಿಗಳಿಂದ ಹೆಚ್ಚಿನ ಹಣದ ಬೇಡಿಕೆ ಇಡುತ್ತಿದ್ದಾರೆ. ವೈದ್ಯರು, ಸಿಬ್ಬಂದಿ ಸಕಾಲಕ್ಕೆ ಆಸ್ಪತ್ರೆಗೆ ಹಾಜರಾಗುತ್ತಿಲ್ಲʼ ಎಂದು ಸಂಘಟನೆ ದೂರಿದೆ.

ಆಸ್ಪತ್ರೆಯಲ್ಲಿ ಪದೇ ಪದೇ ಹಲವು ಸಮಸ್ಯೆಗಳು ಕಂಡು ಬಂದರೂ ಆಸ್ಪತ್ರೆ ಆಡಳಿತ ಮಂಡಳಿ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ. ಇನ್ನು ಐಸಿಯು ಘಟಕದ ವೈದ್ಯ ಶಿವಕುಮಾರ ಪಾಟೀಲ ಅವರು ದುರ್ವರ್ತನೆ ತೋರಿದ್ದಾರೆʼ ಎಂದು ಸಂಘಟನೆ ಗಂಭೀರ ಆರೋಪಿಸಿದೆ.

ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಕೇಜ್ರೀವಾಲ್ ಖುಲಾಸೆ, ಒಂದೊಂದಾಗಿ ಕುಸಿಯುತ್ತಿರುವ ಬಿಜೆಪಿ ಹುನ್ನಾರಗಳು

ಕರ್ನಾಟಕ ಯುವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸುನೀಲ ಎಂ.ಎಸ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಕೇಶ.ಡಿ, ಜಿಲ್ಲಾಧ್ಯಕ್ಷ ವಿಲ್ಸನ್ ದೊಡ್ಡಮನಿ ಸೇರಿದಂತೆ ವೇದಿಕೆಯ ಪ್ರಮುಖರಾದ ಪರಮೇಶ ರಾಜಗೀರಾ, ಸಚಿನ್ ಕಲಾಲ, ಗುರುದಾಸ ಅಮದಲಪಾಡ, ಶಿವಕುಮಾರ ರೆಡ್ಡಿ ಮತ್ತಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...

ಬಸವಕಲ್ಯಾಣ | ಫುಲೆ, ಶಾಹು, ಅಂಬೇಡ್ಕರ್ ವಿಚಾರ ಮಂಚ್ ಉದ್ಘಾಟನೆ

ಮಹಾತ್ಮ ಜ್ಯೋತಿಬಾ ಫುಲೆ, ರಾಜರ್ಷಿ ಶಾಹು ಮಹಾರಾಜ್ ಹಾಗೂ ಡಾ. ಬಿ.ಆರ್....

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...