ಬೀದರ್ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಶ್ವವಿದ್ಯಾಲಯ ಎದುರು ಪ್ರತಿಭಟನೆ

Date:

ಪರೀಕ್ಷೆ ಹಾಗೂ ಪ್ರವೇಶ ಶುಲ್ಕ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪರಿವರ್ತನಾ ಸಂಘ ನೇತೃತ್ವದಲ್ಲಿ ಬೀದರ್ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಯಿತು.

- Advertisement -

ಬೀದರ್ ವಿಶ್ವವಿದ್ಯಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿದರು. ಬಳಿಕ ವಿವಿ ಕುಲಪತಿ ಪ್ರೊ.ಬಿ.ಎಸ್.ಬಿರಾದರ್, ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಯಾವುದೇ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸದೆ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಎರಡರಷ್ಟು ಹೆಚ್ಚಿಸಿರುವುದರಿಂದ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಉಂಟಾಗಿದ್ದು, ಕೂಡಲೇ ಶುಲ್ಕವನ್ನು ಕಡಿತಗೊಳಿಸಬೇಕು” ಎಂದು ಒತ್ತಾಯಿಸಿದರು.

“ಪರೀಕ್ಷೆ ವೆಚ್ಚಕ್ಕೆ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸದೇ, ಕೆಲವು ಕಾಲೇಜುಗಳಿಗೆ ಗುಣಮಟ್ಟದ ಉತ್ತರ ಪತ್ರಿಕೆಗಳ ಬದಲಿಗೆ ಬಿಳಿ ಹಾಳೆ ಹಾಗೂ ಝೆರಾಕ್ಸ್ ಹಾಳೆಗಳನ್ನು ನೀಡಲಾಗುತ್ತಿದೆ. ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆಯಾದರೂ, ಮುದ್ರಿತ ಪ್ರಶ್ನೆ ಪತ್ರಿಕೆಗಳು ಕಾಲೇಜುಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಆರೋಪಿಸಿದರು.

“ಕ್ರೀಡಾ ವಿಭಾಗಕ್ಕೆ ಅಗತ್ಯ ಸೌಲಭ್ಯ ಮತ್ತು ಪ್ರೋತ್ಸಾಹದ ಕೊರತೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಆಗ್ರಹಿಸಿದರು.

1005822531

“ವಿಶ್ವವಿದ್ಯಾಲಯದ ವ್ಯಾಪ್ತಿಯ ಸುಮಾರು 24 ಬಿ.ಇಡ್ ಕಾಲೇಜುಗಳಲ್ಲಿ ಹಲವು ಕಾಲೇಜು ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ನಿಯಮಿತ ತರಗತಿಗಳಿಗೆ ಹಾಜರಾಗದೆ ನೇರವಾಗಿ ಪರೀಕ್ಷೆ ಬರೆಯುತ್ತಿರುವ ಕುರಿತು ತನಿಖೆ ನಡೆಸಬೇಕು” ಎಂದರು.

“ಬಿ.ಇಡ್ ಪರೀಕ್ಷೆಗಳಲ್ಲಿ ಕೆಲವು ಕಾಲೇಜುಗಳಲ್ಲಿ ಗೈರುಹಾಜರಾಗಿದ್ದ ವಿದ್ಯಾರ್ಥಿಗಳ ಹೆಸರಿನಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಲಾಗಿದೆ.

“ವಿದ್ಯಾರ್ಥಿಗಳ ಹಿತಾಸಕ್ತಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಎರಡು ದಿನಗಳಲ್ಲಿ ಬಗೆಹರಿಸಬೇಕು. ಇಲ್ಲದಿದ್ದರೆ ವಿಶ್ವವಿದ್ಯಾಲಯ ಎದುರುಗಡೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಪವನ ಮಿಠಾರೆ, ಸಂಘಟನೆ ಸಲಹೆಗಾರ ಸೂರ್ಯಕಾಂತ ಸಾಧುರೆ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾವ ಮಾಲಗತ್ತಿ ಸೇರಿದಂತೆ ಪ್ರಮುಖರಾದ ಗೋಪಾಲ ಸಾಗರ್, ನಾಗಸೇನ್ ಗಾಯಕವಾಡ, ಸಂತೋಷ ಏಣಕುರೆ, ಶಿವುಸಾಗರ, ಜೈಪಾಲ್, ಹರ್ಷಿತ್ ದಾಂಡೇಕರ್, ರಾಹುಲ್ ಡಾಂಗೆ, ಪ್ರಕಾಶ್ ರಾವಣ್, ಸಿದ್ಧಾರ್ಥ ಭಾವಿದೊಡ್ಡಿ, ಹರೀಶ ಖಂಡೆ, ನಿತೀಶ ಶಿಂಧೆ, ಮಹೇಶ ಭಾವಿದೊಡ್ಡಿ, ಗೌತಮ್ಮ ಮುತ್ತಂಗಿರ್, ಗೋಪಾಲ್ ದೊಡ್ಡಿ, ಲೋಕೇಶ ಕಾಂಬಳೆ, ಉತ್ತಮ ಕೆಂಪೇ, ಶ್ರೀಕಾಂತ, ಹರೀಶ ಚಕ್ರವರ್ತಿ, ರಾಜಶೇಖರ್ ವರ್ಮಾ , ಸುನೀಲ್ ಕುಮಾರ, ಕೃಷ್ಣ, ನೀಲಕಂಠ ಕಾಂಬಳೆ, ಸಾಯಿನಾಥ್ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...