ಬೀದರ್‌ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಖಂಡಿಸಿ ನಾಳೆ ಪ್ರತಿಭಟನೆ

Date:

ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿದ ಘಟನೆಯನ್ನು ಖಂಡಿಸಿ ನಾಳೆ (ಆ.25) ಬೀದರ್‌ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ನಾಗರಿಕರ ವೇದಿಕೆ ಅಧ್ಯಕ್ಷ ಶಂಕರ ದೊಡ್ಡಿ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 11ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಬೇಕೆಂದು ಆಗ್ರಹಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ವೇದಿಕೆ ಗೌರವಾಧ್ಯಕ್ಷ ಅರವಿಂದಕುಮಾರ ಅರಳಿ ಮಾತನಾಡಿ, “ಇದು ಖರ್ಗೆಯವರಿಗಾದ ಅವಮಾನ ಮಾತ್ರವಲ್ಲ, ಸಂವಿಧಾನದ ಸಾಮಾಜಿಕ ಸಮಾನತೆಯ ಆಶಯಕ್ಕೆ ಮಾಡಿದ ಅಪಚಾರ: ಎಂದು ಆರೋಪಿಸಿದರು.

ಇದನ್ನೂ ಓದಿ : ಬೀದರ್‌ | ಅಂಬೇಡ್ಕರವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ : ಸಿದ್ರಾಮ ಸಿಂಧೆ

ವೇದಿಕೆಯ ಉಪಾಧ್ಯಕ್ಷ ಶ್ರೀಕಾಂತ ಸ್ವಾಮಿ ಹೆಡಗಾಪುರ, ಕಾರ್ಯಾಧ್ಯಕ್ಷ ಡಾ.ಮಕ್ಸುದ್ ಚಂದಾ ಸೇರಿದಂತೆ ಪದಾಧಿಕಾರಿಗಳು ಮಾತನಾಡಿದರು. ಕಾರ್ಯದರ್ಶಿ ಪಂಡಿತ ಚಿದ್ರಿ, ಚಂದ್ರಕಾಂತ ಹಿಪ್ಪಳಗಾಂವ, ಮಾರುತಿ ಶಾಖಾ, ಶಿವಮೂರ್ತಿ ಸುಭಾನೆ, ಜಗದೀಶ್ವರ ಬಿರಾದಾರ, ಧನರಾಜ ಮುಸ್ತಾಪುರೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...