ಬೀದರ್‌ | ದಲಿತ ಯುವಕ ಭೂಮಾನಂದ ಹತ್ಯೆ ಖಂಡಿಸಿ ನಾಳೆ ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ 32 ವರ್ಷದ ದಲಿತ ಯುವಕ ಭೂಮಾನಂದ ಹತ್ಯೆಯನ್ನು ಖಂಡಿಸಿ ಬೀದರ್ ದಕ್ಷಿಣ ಕ್ಷೇತ್ರದ ದಲಿತ ಸಂಘಟನೆಗಳ ಸಮನ್ವಯ ಹೋರಾಟ ಸಮಿತಿ ವತಿಯಿಂದ ನಾಳೆ (ಆ.12) ಚಿಟಗುಪ್ಪ ತಾಲೂಕಿನ ಮನ್ನಾಏಖೆಳ್ಳಿ ಸಮೀಪದ ಚೀನಕೇರಾ ಕ್ರಾಸ್‌ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ದಯಾನಂದ ರೇಕುಳಗಿ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂದು ಬೆಳಿಗ್ಗೆ 11 ಗಂಟೆಗೆ ಚೀನಕೇರಾ ಕ್ರಾಸ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಮನ್ನಾಏಖೆಳ್ಳಿ ಗ್ರಾಮದ ಅಂಬೇಡ್ಕರ್ ವೃತ್ತದವರೆಗೆ ಸಾಗಲಿದೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಚಿಟಗುಪ್ಪ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ದೇಶ ಸ್ವಾತಂತ್ರ್ಯ ಪಡೆದು 78 ವರ್ಷಗಳು ಕಳೆದಿದ್ದರೂ, ಡಾ.ಬಿ.ಆರ್.ಅಂಬೇಡ್ಕರ್ ಅವರು ರೂಪಿಸಿದ ಬಲಿಷ್ಠ ಸಂವಿಧಾನ ಅಸ್ತಿತ್ವದಲ್ಲಿದ್ದರೂ ದಲಿತರ ಮೇಲಿನ ಕೊಲೆ, ಶೋಷಣೆ, ದಬ್ಬಾಳಿಕೆ ಹಾಗೂ ಅತ್ಯಾಚಾರದಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿರುವುದು ವಿಷಾದನೀಯ. ಭೂಮಾನಂದ ಹತ್ಯೆ ಪ್ರಕರಣದಲ್ಲಿ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಭೂಮಾನಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಸಂಕ್ರಾಂತಿ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಯುವಕ ಸಂಜುಕುಮಾರ ಮೃತಪಟ್ಟಿದ್ದರೂ ಸರ್ಕಾರದಿಂದ ಸೂಕ್ತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದ ಅವರು, ಕೊಲೆ, ಅಪಘಾತ ಸೇರಿದಂತೆ ಘಟನೆಗಳು ನಡೆದಾಗ ಜನಪ್ರತಿನಿಧಿಗಳು ಸವರ್ಣೀಯರ ಮನೆಗಳಿಗೆ ತೆರಳಿ ಸಾಂತ್ವನ ಹೇಳುತ್ತಾರೆ. ಆದರೆ ಬಡ ದಲಿತರ ಮನೆಗಳಿಗೆ ಭೇಟಿ ನೀಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜನರ ಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ರಾಜಕುಮಾರ ಶಿಂಧೆ ಮಾತನಾಡಿ, “ಹತ್ಯೆಗೊಳಗಾದ ಭೂಮಾನಂದ ಅವರ ಕುಟುಂಬಕ್ಕೆ 5 ಎಕರೆ ಭೂಮಿ ಹಾಗೂ ₹5 ಕೋಟಿ ಪರಿಹಾರ ನೀಡಬೇಕು. ಎಂಟು ತಿಂಗಳ ಗರ್ಭಿಣಿಯಾಗಿರುವ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಒದಗಿಸಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ : ಕಮಲನಗರ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಸಮಿತಿಯ ಗೌರವಾಧ್ಯಕ್ಷ ವೀರಾಶೆಟ್ಟಿ ಬಂಬುಳಗಿ ಮಾತನಾಡಿ, “ಭೂಮಾನಂದ ಅವರ ಹತ್ಯೆ ಕೇವಲ ಒಬ್ಬ ದಲಿತ ಯುವಕನ ಮೇಲಿನ ದೌರ್ಜನ್ಯವಲ್ಲ; ಇಡೀ ದಲಿತ ಸಮುದಾಯದ ಮೇಲೆ ನಡೆದಿರುವ ಕ್ರೌರ್ಯವಾಗಿದೆ. ಘಟನೆಯನ್ನು ಎಲ್ಲರೂ ಖಂಡಿಸಿ, ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಸಮಿತಿಯ ಸಲಹೆಗಾರ ಗೌತಮ ಬಗದಲಕರ್, ಪ್ರಚಾರ ಸಮಿತಿ ಅಧ್ಯಕ್ಷ ವಿನೋದ ಮಂಗಲಗಿ, ಖಜಾಂಚಿ ಲಾಲಪ್ಪ ರಾಂಪುರೆ, ಸಮಿತಿಯ ಪ್ರಮುಖರಾದ ರಿತೀಕ ಕೋಟೆ ರೇಕುಳಗಿ, ಶ್ರೀಕಾಂತ ಬೋರೊಳ, ರಾಜಶೇಖರ ಕಮಠಾಣ, ರಜನಿಕಾಂತ ನಿಡವಂಚಾ, ಝರೆಪ್ಪ ಕಮಠಾಣ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...