ಬೀದರ್‌ | ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ಕಲ್ಪಿಸಿ : ಸಂಸದ ಸಾಗರ ಖಂಡ್ರೆಗೆ ಮನವಿ

Date:

ಬೀದರ ನಗರದ ನೌಬಾದ್‌ನ ಚೌಳಿ ಕಮಾನ್ ಸಮೀಪ ಕಳೆದ ಎರಡು ದಶಕಗಳಿಂದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ನಗರದ ಹೊರವಲಯದ ಬಾಗೆ ಕಾರಂಜಾ ಗ್ರಾಮದ ಸರ್ವೇ ನಂ.45ರ ಸರ್ಕಾರಿ ಜಮೀನಿನಲ್ಲಿ ತಾತ್ಕಾಲಿಕವಾಗಿ ಗುಡಿಸಲು ನಿರ್ಮಿಸಿಕೊಂಡು ವಾಸಿಸಲು ಅವಕಾಶ ಕಲ್ಪಿಸುವಂತೆ ಬೀದರ ಲೋಕಸಭಾ ಸದಸ್ಯ ಸಾಗರ್ ಖಂಡ್ರೆ ಅವರಿಗೆ ವಿಶ್ವ ಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ನೇತ್ರತ್ವದಲ್ಲಿ ಅಲೆಮಾರಿ ಜನಾಂಗದವರು ಮನವಿ ಸಲ್ಲಿಸಿದ್ದಾರೆ.

- Advertisement -

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಸಾಗರ್ ಖಂಡ್ರೆ ಅವರನ್ನು ಭೇಟಿಯಾದ ಅಲೆಮಾರಿ ಸಮುದಾಯದ ಸಿಂದೋಳ, ಕೋರವ ಹಾಗೂ ಮಾಂಗರವಾಡಿ ಸಮುದಾಯದ ಮಕ್ಕಳು, ವೃದ್ಧರು, ಮಹಿಳೆಯರು ತಮ್ಮ ಸಮಸ್ಯೆಗಳನ್ನು ವಿವರಿಸಿದರು. ಸರ್ವೇ ನಂ.45ರ ಸರ್ಕಾರಿ ಜಮೀನಿನಲ್ಲಿ ತಾತ್ಕಾಲಿಕವಾಗಿ ಗುಡಿಸಲು ಹಾಕಿಕೊಂಡು ಬದುಕಲು ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಅಲೆಮಾರಿ ಸಮುದಾಯದವರು ಕಳೆದ 20–25 ವರ್ಷಗಳಿಂದ ಚೌಳಿ ಕಮಾನ್ ಸಮೀಪ‌ದ ಖಾಸಗಿ ಜಾಗದಲ್ಲಿ ತಾತ್ಕಾಲಿಕ ಜೋಪಡಿಗಳಲ್ಲಿ ವಾಸಿಸುತ್ತಿದ್ದು, ಶುದ್ಧ ಕುಡಿಯುವ ನೀರು, ವಿದ್ಯುತ್, ಶೌಚಾಲಯ ಸೇರಿದಂತೆ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಕೆಲವರಿಂದ ನಿರಂತರ ಕಿರುಕುಳವೂ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಗೆ ಕಾರಂಜಾ (ಬೆಚಿರಾಕ್) ಗ್ರಾಮದ ಸರ್ವೇ ನಂ.45ರ ಸರ್ಕಾರಿ ಜಮೀನಿನಲ್ಲಿ ತಗ್ಗು-ಗುಂಡಿಗಳನ್ನು ಸಮತಟ್ಟುಗೊಳಿಸಿ, ಸರ್ಕಾರದಿಂದ ಶಾಶ್ವತ ಮನೆ ನಿರ್ಮಾಣವಾಗುವವರೆಗೆ ತಾತ್ಕಾಲಿಕವಾಗಿ ಗುಡಿಸಲು ನಿರ್ಮಿಸಿಕೊಂಡು ವಾಸಿಸಲು ಅನುಮತಿ ನೀಡಬೇಕು. ಅಲ್ಲಿ ಅವರಿಗೆ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ತಕ್ಷಣವೇ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ.

WhatsApp Image 2026 07 18 at 4.00.47 PM

ಬಳಿಕ ಸಂಸದ ಸಾಗರ್ ಖಂಡ್ರೆ ಅವರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಅಲ್ಲದೆ, ಸ್ಥಳದಲ್ಲಿದ್ದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ ಅವರಿಗೆ ಚೌಳಿ ಕಮಾನ್ ಸಮೀಪ ವಾಸಿಸುತ್ತಿರುವ ಅಲೆಮಾರಿ ಸಮುದಾಯದ ಜನರಿಗೆ ಯಾವುದೇ ತೊಂದರೆ ಉಂಟಾಗತೆ ರಾತ್ರಿ ವೇಳೆಯಲ್ಲಿ ಪೊಲೀಸ್ ಭದ್ರತೆ ಒದಗಿಸುವಂತೆ ಸೂಚಿಸಿದರು.

ಇದನ್ನೂ ಓದಿ : ಔರಾದ-ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಶಾಸಕ ಪ್ರಭು ಚವ್ಹಾಣ ಆಗ್ರಹ

ಸರ್ವೇ ನಂ.45ರ ಸರ್ಕಾರಿ ಜಮೀನಿನಲ್ಲಿ ತಾತ್ಕಾಲಿಕವಾಗಿ ಗುಡಿಸಲು ಹಾಕಿಕೊಂಡು ವಾಸಿಸಲು ಅನುಮತಿ ದೊರೆಯುವವರೆಗೆ ಜುಲೈ 20ರಿಂದ ವಿಶ್ವ ಕ್ರಾಂತಿ ದಿವ್ಯ ಪೀಠದ ವತಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಓಂಪ್ರಕಾಶ್ ರೊಟ್ಟೆ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...