ಬೀದರ್‌ | ಬ್ರಿಮ್ಸ್‌ನಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಗುಣಮಟ್ಟ ಔಷಧಿ ನೀಡಿ : ಕರವೇ ಪ್ರತಿಭಟನೆ

Date:

ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಹಾಗೂ ಗುಣಮಟ್ಟದ ಔಷಧಿ ನೀಡಲಾಗುತ್ತಿಲ್ಲ ಎಂಬ ದೂರುಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾ ಸಮಿತಿ ಒತ್ತಾಯಿಸಿದೆ.

- Advertisement -

ಕರವೇ ಜಿಲ್ಲಾ ಅಧ್ಯಕ್ಷ ಪೀಟರ್ ಚಿಟಗುಪ್ಪಾ ಅವರ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಮನವಿಯನ್ನು ಬ್ರಿಮ್ಸ್ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೀದರ್ ಜಿಲ್ಲೆ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ವಿವಿಧ ತಾಲೂಕುಗಳಿಂದ ಪ್ರತಿನಿತ್ಯ ಸಾವಿರಾರು ಬಡ ರೋಗಿಗಳು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆ, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗುತ್ತಿದ್ದರೂ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಔಷಧಿಗಳನ್ನು ಖರೀದಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ಆಸ್ಪತ್ರೆಯಲ್ಲಿ ಬಳಕೆಯಾಗುತ್ತಿರುವ ಔಷಧಿಗಳ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಆಸ್ಪತ್ರೆಯ ಸ್ವಚ್ಛತೆ ಹಾಗೂ ನಿರ್ವಹಣೆಯಲ್ಲಿಯೂ ನಿರ್ಲಕ್ಷ್ಯ ಕಂಡುಬರುತ್ತಿದೆ ಎಂಬ ದೂರುಗಳಿದ್ದು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ಅನುಮತಿ ಪಡೆಯದೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳ ಬಗ್ಗೆಯೂ ತನಿಖೆ ನಡೆಸಬೇಕು. ಬ್ರಿಮ್ಸ್ ಆಡಳಿತದ ಕಾರ್ಯವೈಖರಿಯನ್ನು ಉನ್ನತ ಮಟ್ಟದ ಅಧಿಕಾರಿಗಳಿಂದ ಪರಿಶೀಲಿಸಿ, ಆರೋಪಗಳು ಸಾಬೀತಾದಲ್ಲಿ ಸಂಬಂಧಿಸಿದ ನಿರ್ದೇಶಕರು, ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬ್ರಿಮ್ಸ್‌ನಲ್ಲಿ ಬಳಸಲಾಗುತ್ತಿರುವ ಔಷಧಿಗಳ ಗುಣಮಟ್ಟ ಪರಿಶೀಲನೆ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೇಮಕಾತಿ ಸೇರಿದಂತೆ ವಿವಿಧ ಆರೋಪಗಳ ಕುರಿತು ಒಂದು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬ್ರಿಮ್ಸ್ ಆಸ್ಪತ್ರೆ ಎದುರು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಿ : ನಾಗಪ್ಪ ಜಂಬಗಿ

ಕರವೇ ಜಿಲ್ಲಾ ಕಾರ್ಯಾಧ್ಯಕ್ಷ ಜಗನ್ನಾಥ ಕೌಠಾ, ಜಿಲ್ಲಾ ಸಂಚಾಲಕ ಬಸವರಾಜ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಚಂದ್ರಕಾಂತ ಪೋಲಾ, ಬೀದರ್ ದಕ್ಷಿಣ ತಾಲೂಕು ಅಧ್ಯಕ್ಷ ನಿಲೇಶ ಠಾಠೋಡ್, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಮೊಜೆಸ್ ಅಣದೂರಕರ್, ಮೈಕಲ್ ಕಡ್ಯಾಳ ಹಾಗೂ ಅಶೋಕ್ ಕಡ್ಯಾಳ, ಜಿಲ್ಲಾ ಮುಖಂಡರಾದ ದಿನೇಶ್ ಕಮಠಾಣ, ರಾಜು ಮೇಲ್ದೊಡ್ಡಿ, ಜಾನ್ ಕಮಠಾಣ, ಪಿಂಟು ಸಿರ್ಸಿ, ನಗರ ಉಪಾಧ್ಯಕ್ಷ ಪ್ರಸಾದ ಘೋಡಂಪಳಿಕರ್, ನಗರ ಪ್ರಧಾನ ಕಾರ್ಯದರ್ಶಿ ಗಿರೀಶ್ ಓಂಕಾರ್, ಬೀದರ್ ಉತ್ತರ ಅಧ್ಯಕ್ಷ ಅಬ್ದುಲ್ ರಹೀಮ್, ಬೀದರ್ ದಕ್ಷಿಣ ತಾಲೂಕು ಉಪಾಧ್ಯಕ್ಷ ಧನರಾಜ ಚಿಟ್ಟಾವಾಡಿ, ಸಹ ಕಾರ್ಯದರ್ಶಿ ರಾಜಗೊಂಡ ಅಣದೂರಕರ್ ಸೇರಿದಂತೆ ಅಜಯ್ ಮೈಲೂರ್, ಸುಧಾಕರ್, ವೀರೇಶ್, ಶಿವಾನಂದ, ಪಾಸಿಲ್ ಅಹಮದ್, ಅಭಿಷೇಕ್ ಹಾಗೂ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇವೆ ಮೊದಲು, ಪರಿಶೀಲನೆ ಆಮೇಲೆ: ಫಲಾನುಭವಿಗಳಿಗೆ ತ್ವರಿತ ಸೇವೆ ನೀಡಲು ರಾಜ್ಯ ಸರ್ಕಾರದ ಹೊಸ ಆದೇಶ

ರಾಜ್ಯ ಸರ್ಕಾರವು ನಾಗರಿಕರಿಗೆ ಮುಂಚಿತವಾಗಿ ಅರ್ಹತೆಯ ಪರಿಶೀಲನೆಯಿಲ್ಲದೆ ಸೇವೆಗಳು ಮತ್ತು ಯೋಜನೆಯ...

ಅವಳ ಕಣ್ಣೋಟ | ‘ಉಯರೆ’- ಸುಟ್ಟದ್ದು ಮುಖವಷ್ಟೇ, ಬದುಕಿನ ಮೇಲಿನ ಹಕ್ಕಲ್ಲ…

ಒಬ್ಬ ಮಹಿಳೆ ತನ್ನನ್ನು ನಿರಾಕರಿಸಿದಳೆಂಬ ಕಾರಣಕ್ಕೆ ಆಕೆಯ ಬದುಕನ್ನೇ ನಾಶಮಾಡುವ ಹಕ್ಕು...

ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...