ಬೀದರ್‌ | ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವೈಷ್ಣವಿಗೆ ಸನ್ಮಾನ

Date:

ಔರಾದ್‌ ತಾಲೂಕಿನ ಸಂತಪೂರ ಗ್ರಾಮದ ಸಿದ್ದರಾಮೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾರೆ.

- Advertisement -

ವಾಣಿಜ್ಯ ವಿಭಾಗದಲ್ಲಿ ಜೋಜನಾ ಗ್ರಾಮದ ವೈಷ್ಣವಿ ಸಿದ್ದಪ್ಪ ಸಿದ್ದೆಸೂರೆ 588 ಅಂಕಗಳೊಂದಿಗೆ ಶೇ 98 ರಷ್ಟು ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ವೈಷ್ಣವಿ ಅವರ ತಂದೆ ಗ್ರಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದು, ತಾಯಿ ಮಧುಮತಿ ಗೃಹಣಿಯಾಗಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ ವೈಷ್ಣವಿ ಶ್ರದ್ಧೆಯಿಂದ ಅಧ್ಯಯನ ನಡೆಸಿ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಸಾಧನೆಗೆ ಬಡತನ ಅಡ್ಡಿಯಾಗಲಾರದು ಎಂಬುದನ್ನು ವಿದ್ಯಾರ್ಥಿನಿ ಸಾಧಿಸಿ ತೋರಿಸಿದ್ದಾಳೆ ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಸಾಧನೆಗೈದ ವಿದ್ಯಾರ್ಥಿನಿ ವೈಷ್ಣವಿ ಹಾಗೂ ಅವರ ಪಾಲಕರಿಗೆ ಕಾಲೇಜು ವತಿಯಿಂದ ಗೌರವಿಸಿ ಸಿಹಿ ತಿನಿಸಿ ಸಂಭ್ರಮಿಸಿದರು.

ಕಾಲೇಜಿನ ಉಪನ್ಯಾಸಕರಾದ ಮಹಾಂತೇಶ್ ಪಾಂಚಾಳ, ಸುಧೀರ್ ಅಲೂರೆ, ರಾಜಕುಮಾರ ಹಳ್ಳಿಕರ್, ಸಂತೋಷ್ ಧೂಳ್ಗೆಂಡೆ, ಶಿವಪುತ್ರ ಧರಣಿ, ಸುಧಾ ಕೌಟಿಗೆ, ಪ್ರಿಯಾಂಕಾ ಗೊನ್ನಳ್ಳಿಕರ, ಅಶ್ವಿನಿ ಹಿಂದೊಡ್ಡಿ, ಮೀರಾತಾಯಿ ಕಾಂಬಳೆ, ವನದೇವಿ ಎಕ್ಕಳೆ ಹಾಗೂ ದತ್ತಾತ್ರಿ ಮಡಿವಾಳ ಮತ್ತಿತರರು ಇದ್ದರು.

ಕಾಲೇಜಿಗೆ ಶೇ 100ರಷ್ಟು ಫಲಿತಾಂಶ :

ಸಂತಪೂರ ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜು ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಂದ ಒಟ್ಟು 105 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು . ಈ ಪೈಕಿ 71 ಅಗ್ರ ಶ್ರೇಣಿ, 34 ಪ್ರಥಮ ದರ್ಜೆ ಉತ್ತೀರ್ಣರಾಗಿದ್ದು, ಒಟ್ಟಾರೆ ಕಾಲೇಜು ಶೇ 100ರಷ್ಟು ಫಲಿತಾಂಶ ಪಡೆದುಕೊಂಡಿದೆ.

ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಸಿದ್ದಪ್ಪ 588 (ಶೇ 98), ಕಲಾ ವಿಭಾಗದ ವಿದ್ಯಾರ್ಥಿನಿ ವೈಶಾಲಿ ಸಂತೋಷ್ 586 (ಶೇ97.66) ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗೀತಾ ನರಸಪ್ಪ 566 (ಶೇ 94.33) ರಷ್ಟು ಅಂಕ ಪಡೆದಿದ್ದಾರೆ ಎಂದು ಪ್ರಾಚಾರ್ಯ ನವೀಲಕುಮಾರ ಉತ್ಕಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ನಾಗರಿಕ ವಿಮಾನಯಾನ ಸೇವೆ ಮುಂದುವರಿಸಲು ಸಚಿವ ಈಶ್ವರ ಖಂಡ್ರೆ ಮನವಿ

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು, ಆಡಳಿತ ಅಧಿಕಾರಿ ಮೋಹನ್ ರೆಡ್ಡಿ, ಬಸವರಾಜ ಮೊಳಕೆರೆ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...