ಬೀದರ್‌ | ಜೂ.28 ರಿಂದ 31ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ಡಿಸಿ ಶಿಲ್ಪಾ ಶರ್ಮಾ

Date:

ಬೀದರ್ ಜಿಲ್ಲೆಯಲ್ಲಿ ಜೂನ್ 28 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚಿಸಿದರು.

- Advertisement -

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ʼ ಜಿಲ್ಲೆಯ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಸಕ್ಕರೆ ಕಾರ್ಖಾನೆಗಳು, ಇಟ್ಟಿಗೆ ಭಟ್ಟಿಗಳು ಹಾಗೂ ವಲಸೆ ಕಾರ್ಮಿಕರು ವಾಸಿಸುವ ಹೈರಿಸ್ಕ್ (ಅಪಾಯದ ಅಂಚಿನಲ್ಲಿರುವ) ಪ್ರದೇಶಗಳು ಮತ್ತು ಕೊಳಚೆ ಪ್ರದೇಶಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಯಾವುದೇ ಒಂದು ಮಗುವೂ ಲಸಿಕೆಯಿಂದ ವಂಚಿತರಾಗಬಾರದುʼ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ʼಮನೆ-ಮನೆ ಭೇಟಿ ಸಂದರ್ಭದಲ್ಲಿ ಯಾವುದೇ ತಪ್ಪು ಮಾಹಿತಿ ಬರದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದ ಅವರು, ಜಿಲ್ಲೆಯಲ್ಲಿ ಡಿಸೆಂಬರ್ 2025 ರೊಳಗೆ ಜನಿಸಿದ 0 ಯಿಂದ 5 ವರ್ಷದೊಳಗಿನ ಒಟ್ಟು 2,13,213 ಮಕ್ಕಳಿಗೆ (ಗ್ರಾಮೀಣ ಮತ್ತು ನಗರ ಪ್ರದೇಶ ಸೇರಿ) ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜೂನ್ 29 ರಿಂದ ಜೂನ್ 31 ರವರೆಗೆ ಜಿಲ್ಲೆಯ ಒಟ್ಟು 3,35,347 ಮನೆಗಳಿಗೆ ಆರೋಗ್ಯ ಕಾರ್ಯಕರ್ತರ ತಂಡಗಳು ಭೇಟಿ ನೀಡಿ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ನೀಡಲಿದ್ದಾರೆʼ ಎಂದರು.

ʼಪೋಲಿಯೋ ಲಸಿಕೆ ಕಾರ್ಯಕ್ರಮಕ್ಕಾಗಿ ಜಿಲ್ಲಾದ್ಯಂತ ಒಟ್ಟು 1,077 ತಂಡಗಳನ್ನು ರಚಿಸಲಾಗಿದೆ. ಇದರಲ್ಲಿ ಜೂ.28 ರಂದು 996 ಬೂತ್‌ಗಳು, 11 ಸಂಚಾರಿ ತಂಡಗಳು ಹಾಗೂ 70 ಟ್ರಾನ್ಸಿಟ್ ತಂಡಗಳು ಕಾರ್ಯನಿರ್ವಹಿಸಲಿವೆ. ಈ ಬೃಹತ್ ಕಾರ್ಯಕ್ಕಾಗಿ 2,154 ಲಸಿಕೆದಾರರನ್ನು ಹಾಗೂ ಮೇಲ್ವಿಚಾರಣೆಗಾಗಿ 216 ಜನರನ್ನು ನಿಯೋಜಿಸಲಾಗಿದೆʼ ಎಂದು ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಹಾಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಿವಶಂಕರ ಬಿ. ಮಾತನಾಡಿ, “ಭಾರತವು 2014 ರಲ್ಲೇ ಪೋಲಿಯೋ ಮುಕ್ತ ದೇಶವೆಂದು ಘೋಷಿಸಲ್ಪಟ್ಟಿದ್ದರೂ, ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಲ್ಲಿ ಪೋಲಿಯೋ ಪ್ರಕರಣಗಳು ವರದಿ ಆಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದರು.

ಇದನ್ನೂ ಓದಿ : ಬೀದರ್‌ | ಮೇ 30ರಂದು ಎಸ್‌ಐಆರ್ ವಿರೋಧಿಸಿ ಬೃಹತ್ ಪ್ರತಿಭಟನೆ

ಸಭೆಯಲ್ಲಿ ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ. ರಾಜಶೇಖರ ಪಾಟೀಲ, ಡಾ.ಶಂಕ್ರೆಪ್ಪಾ ಬೊಮ್ಮಾ, ಡಾ. ಅನೀಲ ಚಿಂತಾಮಣಿ, ಡಾ.ದಿಲಿಪ್ ಡೊಂಗರೆ, ಸಾವಿತ್ರಿಬಾಯಿ, ಉಮೇಶ ಬಿರಾದರ, ಲೋಕೇಶ ಸಲಗರ, ಶಿವಶಂಕರ ಬೇಮಳಗಿ, ಗುರುನಾಥ ಕವಳೆ, ದೇವಿದಾಸ ಸೇರಿದಂತೆ ಎಲ್ಲಾ ತಾಲೂಕಾ ಆರೋಗ್ಯ ಅಧಿಕಾರಿಗಳು, ಅಂತರ ಇಲಾಖೆಯ ಅಧಿಕಾರಿಗಳು ಜಿಲ್ಲಾ ಆರ್‌ಸಿಎಚ್ ಕಚೇರಿಯ ಸಿಬ್ಬಂದಿ ವರ್ಗದವರು ಸಮನ್ವಯ ಸಮಿತಿಯ ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರ್ಮ್‌ 6 ಸುಳ್ಳು ಘೋಷಣೆಗೆ ಒತ್ತು ನೀಡುತ್ತಿದೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ಮತದಾರರ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿಲ್ಲದು: ‘ಇಂಡಿಯಾ’ ಒಕ್ಕೂಟ ನಾಯಕರೊಂದಿಗೆ ರಾಹುಲ್ ಗಾಂಧಿ ಚಹಾಕೂಟ

ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೊಡ್ಡ...