ಬೀದರ್ | ಬೇಸಿಗೆ ಬೆಳಿಗ್ಗೆಯೇ ಮಳೆ ಆರ್ಭಟ : ಸಿಡಿಲು ಬಡಿದು ಯುವಕ ಸಾವು

Date:

ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ.

- Advertisement -

ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ ಹೋಗಿದ್ದರು. ಮಳೆ ಬರುತ್ತಿರುವುದು ಕಂಡು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಅಪ್ಪಳಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ‘ಈದಿನ‘ಕ್ಕೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೃತರಿಗೆ ಪತ್ನಿ, ತಂದೆ-ತಾಯಿ ಸೋದರರು ಇದ್ದಾರೆ.

ಔರಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ಔರಾದ್ ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಜಿಲ್ಲೆಯ ಭಾಲ್ಕಿ , ಕಮಲನಗರ, ಔರಾದ್ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಬೆಳಿಗ್ಗೆಯೇ ಬಿರುಸಿನ ಮಳೆಯಾಗಿದ್ದರಿಂದ ವಾತಾವರಣ ಸಂಪೂರ್ಣ ತಂಪಾಯಿತು.

ಔರಾದ್ ತಾಲ್ಲೂಕಿನ ಕೆಲವೆಡೆ ಸೋಮವಾರ ಸಂಜೆ ಸಣ್ಣ ಮಳೆಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ದಟ್ಟ ಮೋಡ ಮುಸುಕಿದ ವಾತಾವರಣ ಆವರಿಸಿತು.

ಕಮಲನಗರ, ಭಾಲ್ಕಿ ತಾಲೂಕಿನ ಕೆಲವೆಡೆ ಬೆಳಿಗ್ಗೆ 6ರಿಂದ ಆರಂಭಗೊಂಡ ಜೋರು ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಸುರಿಯಿತು.

ಜಿಲ್ಲೆಯ ಹಲವೆಡೆ ಮಂಗಳವಾರ ಬೆಳಿಗ್ಗೆಯಿಂದ ಕಾರ್ಮೋಡ ಕವಿದಿದ್ದು, ಬೇಸಿಗೆಯ ಬಿಸಿಲಿನ ಪ್ರಖರತೆ ಕಣ್ಮರೆಯಾದ ಅನುಭವ ಎನಿಸಿತು.

ಸಿಡಿಲಿಗೆ ಎರಡು ಎಮ್ಮೆ ಸಾವು:

ಸೋಮವಾರ ಸಂಜೆ ಔರಾದ್ ತಾಲೂಕಿನ ಕೆಲವೆಡೆ ಸುರಿದ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ಸಿಡಿಲಿಗೆ ಎರಡು ಎಮ್ಮೆ ಸಾವನ್ನಪ್ಪಿರುವ ಘಟನೆ ನಡೆದಿದೆ.

IMG 20260331 WA0008

ತಾಲೂಕಿನ ದುಡಕನಾಳ ಗ್ರಾಮದ ರೈತ ದೇವಿದಾಸ ವಿಠ್ಠಲರಾವ ಬಿರಾದಾರ ಎಂಬುವರಿಗೆ ಸೇರಿದ ಎರಡು ಎಮ್ಮೆ ಹೊಲದಲ್ಲಿ ಮೇಯಿಸಲು ಕಟ್ಟಿ ಹಾಕಿದ ವೇಳೆ ಸಿಡಿಲಿಗೆ ಬಲಿಯಾಗಿವೆ.

ಇದನ್ನೂ‌ ಓದಿ : ಬೀದರ್‌ | ಅಕಾಲಿಕ ಮಳೆ : ಸಿಡಿಲಿಗೆ ಎಮ್ಮೆ ಬಲಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...