ಬೀದರ್‌ | ಮಳೆ ಅವಾಂತರ : ಮಳೆ ಹಾನಿ ಪ್ರದೇಶಕ್ಕೆ ಶಾಸಕ ಬೆಲ್ದಾಳೆ ಭೇಟಿ, ಪರಿಶೀಲನೆ

Date:

ಬೀದರ್ ದಕ್ಷಿಣ ಕ್ಷೇತ್ರದ ಕೋಳಾರ (ಬಿ) ಗ್ರಾಮಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ, ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ಉಂಟಾದ ಹಾನಿಯನ್ನು ಸ್ಥಳವನ್ನು ಪರಿಶೀಲಿಸಿದರು.

- Advertisement -

ಮಳೆಯಿಂದ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವುದು, ಕೃಷಿ ಬೆಳೆಗಳಿಗೆ ಹಾನಿಯಾಗಿರುವುದು ಹಾಗೂ ಕೆಲ ಸಾರ್ವಜನಿಕ ಮೂಲಸೌಕರ್ಯಗಳು ಹಾನಿಗೊಳಗಾಗಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಸ್ಥಳೀಯರ ಅಹವಾಲುಗಳನ್ನು ಆಲಿಸಿದ ಶಾಸಕರು, ಹಾನಿಯ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ, ಅರ್ಹ ಫಲಾನುಭವಿಗಳಿಗೆ ತಕ್ಷಣ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಅಕಾಲಿಕ ಮಳೆಯಿಂದ ರೈತರಿಗೆ ಉಂಟಾದ ಬೆಳೆ ನಷ್ಟದ ಕುರಿತು ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಶೀಘ್ರ ಸಮೀಕ್ಷೆ ನಡೆಸಿ, ಸರ್ಕಾರದ ನಿಯಮಾನುಸಾರ ಪರಿಹಾರ ಕಲ್ಪಿಸಬೇಕು. ಯಾವುದೇ ಕುಟುಂಬ ಸರ್ಕಾರದ ನೆರವಿನಿಂದ ವಂಚಿತವಾಗಬಾರದು” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

WhatsApp Image 2026 05 20 at 7.20.40 PM
ಕೋಳಾರ(ಬಿ) ಗ್ರಾಮದ ಬಾಬಶೆಟ್ಟಿ ಎಂಬುವವರ ಪಪ್ಪಾಯಿ ಮಳೆಯಿಂದ ಧರೆಗುಳಿದು ಅಪಾರ ಹಾನಿಯಾಗಿದೆ.

ಇದೇ ವೇಳೆ ಗಾಳಿ-ಮಳೆಯಿಂದ ನೆಲಕುರುಳಿದ ವಿದ್ಯುತ್ ಕಂಬಗಳು ಹಾಗೂ ಹಾನಿಗೊಂಡ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ತಕ್ಷಣ ಸರಿಪಡಿಸಿ ಗ್ರಾಮದಲ್ಲಿ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆಯಿಂದ ಮರಗಳು ಉರುಳಿ ಹಾನಿಗೊಂಡ ರಸ್ತೆಗಳು ಮತ್ತು ಚರಂಡಿಗಳ ದುರಸ್ತಿ ಕಾರ್ಯ ಕೂಡ ತುರ್ತುವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ತಿಳಿಸಿದರು.

ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಾವು ಸದಾ ನಾವಿದ್ದೇವೆ. ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಮಸ್ಯೆಗಳ ಬಗ್ಗೆ ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತರಬೇಕು ಎಂದು ಶಾಸಕರು ಹೇಳಿದರು.

ಇದನ್ನೂ ಓದಿ : ಬೀದರ್‌ | ಮೆಡಿಕಲ್‌ ಶಾಪ್ ಬಂದ್ ಯಶಸ್ವಿ : ಆನ್‍ಲೈನ್ ಔಷಧ ಮಾರಾಟ ರದ್ದತಿಗೆ ಆಗ್ರಹ

ಈ ಸಂದರ್ಭದಲ್ಲಿ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಸಚೀನ್, ಜೆಸ್ಕಾಂ ಎಇಇ ರಮೇಶ್ ಪಾಟೀಲ ಮುಖಂಡರಾದ ರೇವಣ್ಣಪ್ಪ ಚಿಲ್ಲರ್ಗಿ ರಾಜಶೇಖರ ನೌಬಾದೆ, ಅನೀಲ ಗುನ್ನಳ್ಳಿ, ಬಾಬಶೆಟ್ಟಿ ಅತಿವಾಳ, ಕಾಶಿನಾಥ ಮೇತ್ರೆ, ಸತೀಶ ಹೊಕ್ರಾಣೆ,  ಗ್ರಾಮಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಮಾಜಘಾತುಕರಲ್ಲ, ಅವರಿಗೆ ಹೋರಾಡುವ ಹಕ್ಕಿದೆ’: ಬಾಂಬೆ ಹೈಕೋರ್ಟ್

ಮಹಾರಾಷ್ಟ್ರ ಲೋಕಸೇವಾ ಆಯೋಗದ (ಎಂಪಿಎಸ್‌ಸಿ) ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ...

ಗುಜರಾತ್ | ʼಶುದ್ಧೀಕರಣʼ ಹೆಸರಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅತ್ಯಾಚಾರ; 9 ಮಂದಿ ವಶಕ್ಕೆ

ಶುದ್ಧೀಕರಣ ವಿಧಿ (Purification Ritual) ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಮನಬಂದಂತೆ...

ಪ್ರೀಮಿಯಂ ಲೇಖನ | ಉರ್ದು- ವಿಧಾನಸೌಧದ ಮೆಟ್ಟಿಲುಗಳ ವಿವಾದದಾಚೆ ಭಾರತದ ಭಾಷಾ–ಸಾಂಸ್ಕೃತಿಕ ಪರಂಪರೆಯ ಪ್ರಶ್ನೆ

ವಿಧಾನಸೌಧದ ಮೆಟ್ಟಿಲುಗಳು ಉರ್ದು ಹಬ್ಬಕ್ಕೆ ಸಿಗುತ್ತವೆಯೇ ಇಲ್ಲವೇ ಎಂಬುದು ಆಡಳಿತಾತ್ಮಕ ನಿರ್ಧಾರ....

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ ಕಾರಬಾರು!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ...