ಬೀದರ್‌ ಜಿಲ್ಲೆಯ ಇಬ್ಬರು ಕಲಾ ಸಾಧಕರಿಗೆ ರಾಜೋತ್ಸವ ಪ್ರಶಸ್ತಿ

Date:

ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ ಶಾಂತಾಬಾಯಿ ಮೋಹನರಾವ್ ಕಾಂಬಳೆ ಅವರು 2026ನೇ ಸಾಲಿನ ಪ್ರತಿಷ್ಠಿತ ರಾಜೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

- Advertisement -

ರಾಜ್ಯ ಸರ್ಕಾರ ಶುಕ್ರವಾರ ಪ್ರಕಟಿಸಿರುವ 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಒಟ್ಟು 71 ಸಾಧಕರು ಸ್ಥಾನ ಪಡೆದಿದ್ದಾರೆ. ಈ ಪೈಕಿ ಬೀದರ್ ಜಿಲ್ಲೆಯ ಇಬ್ಬರು ಹಿರಿಯ ಕಲಾವಿದರಿಗೆ ಪ್ರಶಸ್ತಿ ಒಲಿದಿರುವುದು ಜಿಲ್ಲೆಯ ಹೆಮ್ಮೆಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಬಸವಣ್ಣನವರ ಜೀವನವನ್ನು ಕುಂಚದಲ್ಲಿ ಕಟ್ಟಿಕೊಟ್ಟ ಸೋಮಶೆಟ್ಟಿ

ಬಾಲ್ಯದಿಂದಲೇ ಚಿತ್ರಕಲೆಯಲ್ಲಿ ಆಸಕ್ತಿ ಬೆಳೆಸಿಕೊಂಡಿರುವ ಸಿ.ಬಿ.ಸೋಮಶೆಟ್ಟಿ ಅವರು ಮೂಲತಃ ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದವರು. ಪ್ರಸ್ತುತ ಬೀದರ್ ನಗರದ ಬಸವನಗರದಲ್ಲಿ ನೆಲೆಸಿದ್ದಾರೆ. ಬೀದರ್‌ನ ಕರ್ನಾಟಕ ಪ್ರೌಢ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸುಮಾರು 32 ವರ್ಷಗಳ ಕಾಲ ಸೇವೆ ಸಲ್ಲಿಸಿ, 2006ರಲ್ಲಿ ನಿವೃತ್ತರಾಗಿದ್ದಾರೆ.

ಬಸವಣ್ಣನವರ ಜನನದಿಂದ ಹಿಡಿದು ಐಕ್ಯವಾಗುವವರೆಗಿನ ಜೀವನದ ಪ್ರಮುಖ ಘಟನೆಗಳನ್ನು ಜಲವರ್ಣದಲ್ಲಿ 124 ಚಿತ್ರಗಳ ಮೂಲಕ ಅದ್ಭುತವಾಗಿ ಚಿತ್ರಿಸಿದ್ದಾರೆ. ಬಸವಣ್ಣನವರ ಬದುಕು ಮತ್ತು ಸಾಧನೆಯನ್ನು ತಮ್ಮ ಕುಂಚದ ಮೂಲಕ ಸುದೀರ್ಘ ತಪಸ್ಸಿನಂತೆ ಕಲಾಕೃತಿಗಳಲ್ಲಿ ಕಟ್ಟಿಕೊಟ್ಟಿರುವ ಅವರು, ತಮ್ಮ ಮನೆಯಲ್ಲಿಯೇ ಈ ಚಿತ್ರಗಳ ಪ್ರದರ್ಶನಕ್ಕಾಗಿ ಪ್ರತ್ಯೇಕ ಗ್ಯಾಲರಿ ನಿರ್ಮಿಸಿದ್ದಾರೆ.

124 ಕಲಾಕೃತಿಗಳನ್ನು ಒಳಗೊಂಡ 330 ಪುಟಗಳ ‘ಶ್ರೀ ಗುರು ಬಸವಚಿತ್ರ ಚರಿತ’ ಎಂಬ ಚಿತ್ರ ಸಂಪುಟವನ್ನು ಹೊರತಂದಿದ್ದಾರೆ. ಈ ಕಲೆ, ಕೃತಿಯ ರಚನೆಗಾಗಿ ಆಳವಾದ ಅಧ್ಯಯನ ನಡೆಸಿ, ವಚನ ಸಾಹಿತ್ಯದ ವಿದ್ವಾಂಸರೊಂದಿಗೆ ಚರ್ಚಿಸಿದ್ದಾರೆ. ಅಲ್ಲದೆ, 770 ಅಮರಗಣಂಗಳ ರೇಖಾಚಿತ್ರಗಳನ್ನು ಬಿಡಿಸಿದ್ದು, ಅವುಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸುವ ಯೋಜನೆ ಹೊಂದಿದ್ದಾರೆ. ಚಿತ್ರಕಲೆ ಹಾಗೂ ಬಸವಣ್ಣನವರ ಜೀವನ ಚರಿತ್ರೆಯನ್ನು ಕಲಾಕೃತಿಗಳ ಮೂಲಕ ಜನರಿಗೆ ಪರಿಚಯಿಸುವ ಅವರ ಗಣನೀಯ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಬಿದ್ರಿ ಕಲೆಯ ಉಳಿವಿಗೆ ಶ್ರಮಿಸಿದ ಶಾಂತಾಬಾಯಿ ಕಾಂಬಳೆ

ವಿಶ್ವವಿಖ್ಯಾತ ಬಿದ್ರಿ ಕಲೆಯನ್ನು ಬದುಕಿನ ಕಾಯಕವನ್ನಾಗಿಸಿಕೊಂಡಿರುವ ಶಾಂತಾಬಾಯಿ ಮೋಹನರಾವ್ ಕಾಂಬಳೆ ಅವರು ಬೀದರ್ ನಗರದ ಮೈಲೂರ ಸಮೀಪದ ಬಿದ್ರಿ ಕಾಲೋನಿಯಲ್ಲಿ ನೆಲೆಸಿದ್ದಾರೆ. ಚಿಕ್ಕಂದಿನಿಂದಲೇ ಕರಕುಶಲ ಕಲೆಯಲ್ಲಿ ಆಸಕ್ತಿ ಹೊಂದಿದ್ದ ಅವರು, ತಮ್ಮ ಮಾವ ದಿವಂಗತ ರಾಮಚಂದ್ರರಾವ್ ಕಾಂಬಳೆ ಅವರಿಂದ ಬಿದ್ರಿ ಕಲೆಯನ್ನು ಕಲಿತು ಕರಗತ ಮಾಡಿಕೊಂಡಿದ್ದಾರೆ.

72 ವರ್ಷ ವಯಸ್ಸಿನ ಶಾಂತಾಬಾಯಿ ಅವರು ಇಂದಿಗೂ ಬಿದ್ರಿ ಕಲಾಕೃತಿಗಳ ತಯಾರಿಕೆಯಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಏಳು ಮಕ್ಕಳ ಪೈಕಿ ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯೂ ಬಿದ್ರಿ ಕಲಾಕೃತಿಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಕುಟುಂಬದ ಸದಸ್ಯರೊಂದಿಗೆ ಬಿದ್ರಿ ಕಲೆಯ ಪರಂಪರೆಯನ್ನು ಮುಂದುವರಿಸುವುದರ ಜತೆಗೆ ಅನೇಕ ಕಲಾಸಕ್ತರಿಗೆ ಮಾರ್ಗದರ್ಶನ ನೀಡಿದ್ದಾರೆ.

2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಬೀದರ್ ಜಿಲ್ಲೆಯ ಹಿರಿಯ ಸಾಧಕರಾದ ಸಿ.ಬಿ. ಸೋಮಶೆಟ್ಟಿ ಅವರಿಗೆ ಚಿತ್ರಕಲೆ ಕ್ಷೇತ್ರದಲ್ಲಿನ ಅಮೂಲ್ಯ ಕೊಡುಗೆಗಾಗಿ ಹಾಗೂ ಕರಕುಶಲಕಲೆ (ಬಿದ್ರಿ ಕಲೆ) ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಆಯ್ಕೆಯಾದ ಶಾಂತಾಬಾಯಿ ಕಾಂಬಳೆ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಪ್ರತಿಭೆ, ಪರಿಶ್ರಮ ಹಾಗೂ ನಿರಂತರ ಸೇವೆಯ ಮೂಲಕ ನಾಡಿನ ಕೀರ್ತಿಯನ್ನು ಹೆಚ್ಚಿಸಿರುವ ನಿಮ್ಮ ಸಾಧನೆಗಳು ಎಲ್ಲರಿಗೂ ಸ್ಫೂರ್ತಿದಾಯಕವಾಗಿವೆ. ಬೀದರ್ ಜಿಲ್ಲೆಯ ಇಬ್ಬರು ಗಣ್ಯರಿಗೆ ರಾಜ್ಯದ ಅತ್ಯುನ್ನತ ಗೌರವಗಳಲ್ಲಿ ಒಂದಾದ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ತಿಳಿಸಿದ್ದಾರೆ.

ಟೀಮ್ ಯುವಾ ಸಹ ಸಂಸ್ಥಾಪಕ ವಿನಯಕುಮಾರ ಮಾಳಗೆ ಮಾತನಾಡಿ, ‘ನಮ್ಮ ಟೀಮ್ ಯುವಾ ವತಿಯಿಂದ ನಡೆಯುತ್ತಿರುವ ದಖ್ಖನ್ ಕೆ ಕೆಲಸದಲ್ಲಿ ಹಿರಿಯ ಕಲಾವಿದೆ ಶಾಂತಾಬಾಯಿ ಕಾಂಬಳೆ ಅವರು ಕೈಜೋಡಿಸುವುದರ ಜತೆಗೆ ಮಾರ್ಗದರ್ಶನ ನೀಡಿದ್ದಾರೆ. ಅವರ ಮಕ್ಕಳಾದ ರಾಜು ಮತ್ತು ಶ್ಯಾಮರಾವ್ ಕಾಂಬಳೆ ಅವರು ನಮ್ಮೊಂದಿಗೆ ಕೆಲಸ ಮಾಡುತ್ತಿದ್ದಾರೆ. ಶಾಂತಾಬಾಯಿ ಅವರ ಇಡೀ ಕುಟುಂಬವೇ ಬಿದ್ರಿ ಕಲೆಯನ್ನು ಉಳಿಸಿ ಬೆಳೆಸಲು ಅವಿರತವಾಗಿ ಶ್ರಮಿಸುತ್ತಿದೆ. ಅವರ ಸೇವೆಯನ್ನು ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ’ ಎಂದು ತಿಳಿಸಿದ್ದಾರೆ.

WhatsApp Image 2026 10 10 at 7.46.08 PM 29

ಜಿಲ್ಲೆಯ ಇಬ್ಬರು ಹಿರಿಯ ಕಲಾವಿದರಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಕಲಾ ಕ್ಷೇತ್ರದಲ್ಲಿ ಸಂತಸ ಮೂಡಿಸಿದ್ದು, ಜಿಲ್ಲೆಯ ಸಾಂಸ್ಕೃತಿಕ ಪರಂಪರೆಗೆ ಮತ್ತೊಂದು ಗೌರವ ಲಭಿಸಿದಂತಾಗಿದೆ ಎಂದು ಕಲಾಭಿಮಾನಿಗಳು, ಸಾಹಿತ್ಯಾಸಕ್ತರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

WhatsApp Image 2026 10 10 at 6.59.09 PM 10
WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...