ಬೀದರ್‌ | ಫೆ.26ರಂದು ರಮಾತಾಯಿ ಅಂಬೇಡ್ಕರ್‌ ಜಯಂತ್ಯುತ್ಸವ, ಸಾಂಸ್ಕೃತಿಕ ಸಂಭ್ರಮ

Date:

ಮಾತೋಶ್ರೀ ರಮಾತಾಯಿ ಅಂಬೇಡ್ಕರ್‌ ಅವರ 128ನೇ ಜಯಂತ್ಯುತ್ಸವ ಪ್ರಯಕ್ತ ಜಿಲ್ಲೆಯ ವಿದ್ಯಾರ್ಥಿಗಳಿಗೆ ಐಎಎಸ್‌, ಕೆಎಎಸ್‌ ಪೂರ್ವ ಸಿದ್ದತೆ ಪರೀಕ್ಷೆ ಬಗ್ಗೆ ತರಬೇತಿ, ಕಾನೂನು ಅರಿವು ಹಾಗೂ ನೆರವು ಮತ್ತು ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಫೆ.26ರಂದು ಆಯೋಜಿಸಲಾಗಿದೆ ಎಂದು ಬುದ್ದ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ʼಫೆ.26ರಂದು ಬೆಳಿಗ್ಗೆ 11:30ಗಂಟೆಗೆ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಬುದ್ದ ಬೆಳಕು ಟ್ರಸ್ಟ್ ವತಿಯಿಂದ ಜರುಗಲಿರುವ ಈ ಕಾರ್ಯಕ್ರಮವನ್ನು ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ ಅಧ್ಯಕ್ಷ ಡಾ.ಶಿವಕುಮಾರ ಉದ್ಘಾಟಿಸಲಿದ್ದು, ಮಾತೋಶ್ರೀ ರಮಾತಾಯಿ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷೆ ನಂದಮ್ಮ ಕುಂದೆ ಅಧ್ಯಕ್ಷತೆ ವಹಿಸುವರುʼ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ʼಮುಖ್ಯ ಅತಿಥಿಗಳಾಗಿ ಸರ್ಕಾರದ ನಿವೃತ್ತ ಅಪರ ಕಾರ್ಯದರ್ಶಿ ಡಾ.ಭೀಮಸೇನರಾವ ಶಿಂಧೆ, ನಿವೃತ್ತ ಎಇ ಮಲ್ಲಿಕಾರ್ಜುನ ಸುಬಾನೆ ಹಾಗೂ ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಟಾನ ಸಮಿತಿ ಅಧ್ಯಕ್ಷ ಡಾ.ಕಾಶಿನಾಥ ಚಲವಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಯಂತ್ಯೋತ್ಸವ ಸಮಿತಿಯ ಗೌರವಾಧ್ಯಕ್ಷೆ ಉಷಾಬಾಯಿ ಬನಸೊಡೆ, ಕಾರ್ಯಾಧ್ಯಕ್ಷೆ ಕಲ್ಪನಾ ಗೋರನಾಳಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ, ಸಾಮಾಜಿಕ ಹೋರಾಟಗಾರ ಮನೋಜ ವಾಲೆ ಸೇರಿದಂತೆ ಸಮಿತಿಯ ಇತರೆ ಪದಾಧಿಕಾರಿಗಳು ಭಾಗವಹಿಸುವರುʼ ಎಂದು ತಿಳಿಸಿದರು.

WhatsApp Image 2026 02 24 at 6.25.47 PM

ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಹುಮನಾಬಾದ್ ಮಾಜಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಟೈಗರ್ ಉದ್ಘಾಟಿಸಲಿದ್ದು, ಶಶಿಕಲಾ ಶರ್ಮಾ, ಮಹಾದೇವಿ ಕಸ್ತುರೆ, ಕಮಳಮ್ಮ ಸಂತಪುರೆ ಹಾಗೂ ಗಂಗಮ್ಮ ಫುಲೆ ಉಪಸ್ಥಿತರಿರುವರು.

ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಟಾನ ಸಮಿತಿ ಅಧ್ಯಕ್ಷ ಡಾ.ಕಾಶಿನಾಥ ಚಲವಾ ಮಾತನಾಡಿ, ʼಮಾತೋಶ್ರೀ ರಮಾತಾಯಿ ಅಂಬೇಡ್ಕರ್ ಅವರು ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯ ವನಂದಾ ಗ್ರಾಮದಲ್ಲಿ 7 ಫೆಬ್ರವರಿ 1898ರಂದು ಜನಿಸಿದರು. ಅವರ ವಿಚಾರಧಾರೆಗಳನ್ನು ಪರಿಚಯಿಸುವ ಹಾಗೂ ಅವರ ತ್ಯಾಗಮಯಿ ಬದುಕು ತಿಳಿಸುವ ಕಾರ್ಯಕ್ರಮ ಇದಾಗಿದೆʼ ಎಂದರು.

ಜಯಂತ್ಯುತ್ಸವ ಸಮಿತಿ ಅಧ್ಯಕ್ಷೆ ನಂದಮ್ಮ ಕುಂದೆ ಮಾತನಾಡಿ, ʼಇದು ಕೇವಲ ಅಂಬೇಡ್ಕರ್‌ವಾದಿಗಳು ಹಾಗೂ ಬೌದ್ದ ಅನುಯಾಯಿಗಳ ಕಾರ್ಯಕ್ರಮ ಅಲ್ಲ. ಇಡೀ ಮಹಿಳಾ ಸಮೂಹದ ಕಾರ್ಯಕ್ರಮವಾಗಿದೆ. ಈ ಅಪರೂಪದ ಕಾರ್ಯಕ್ರಮಕ್ಕೆ ಎಲ್ಲ ಸಮುದಾಯದ ಮಹಿಳೆಯರು ಸಾಕ್ಷಿಗಳಾಗಬೇಕುʼ ಎಂದು ಕೋರಿದರು.

ಇದನ್ನೂ ಓದಿ : ಬೀದರ್‌ | ಬಲಗೈ ಸಮುದಾಯದ ಹೋರಾಟಗಾರರ ಮೇಲೆ ಪ್ರಕರಣ : ಡಿವಿಪಿ ಖಂಡನೆ

ಯುವ ಮುಖಂಡ ಶರಣು ಫುಲೆ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...