ಬೀದರ್‌ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು; ಆರೋಪಿ ಬಂಧನ

Date:

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೆರೆ ಮನೆಯ 35 ವರ್ಷ ವ್ಯಕ್ತಿಯೊಬ್ಬರು ತನ್ನ ಮನೆಗೆ ಕರೆದೊಯ್ದು 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

- Advertisement -

8 ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ 35 ವರ್ಷದ ಧನರಾಜ್ ಕಾಂಬಳೆ ಎಂಬಾತ ಕೃತ್ಯ ಎಸಗಿದ ಆರೋಪಿ ಎಂದು ತಿಳಿದು ಬಂದಿದ್ದು, ಆರೋಪಿಯನ್ನು ಅಕ್ಕಪಡೆ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಾಯಿ ಇಲ್ಲದ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ತಂದೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಗೆ ಕರೆದು ಅತ್ಯಾಚಾರ ಮಾಡಿ ಕ್ರೌರ್ಯ ಮೆರೆದಿದ್ದಾನೆ.

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಂತ್ರಸ್ತ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಈ ಕುರಿತು ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್‌ | ʼಈದಿನʼ ಫಲಶೃತಿ : ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ನೆರಳಿನ ಪರದೆ ಅಳವಡಿಕೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...