ಬೀದರ್‌ | ಉತ್ತಮ ಸಮಾಜ ಕಟ್ಟಲು ಪುಸ್ತಕ ಓದು ಅಗತ್ಯ : ಸಿದ್ರಾಮಪ್ಪಾ ಮಾಸಿಮಾಡೆ

Date:

ಪುಸ್ತಕಗಳ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪುಸ್ತಕಗಳು ಸಹಕಾರಿಯಾಗಿವೆ ಎಂದು ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪಾ ಮಾಸಿಮಾಡೆ ಹೇಳಿದರು.

- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಜಾಗೃತ ಸಮಿತಿ ಬೀದರ್ ಸಹಯೋಗದಲ್ಲಿ‌ ಬೀದರ್‌ನ ಗುಮ್ಮೆ ಬಡಾವಣೆಯ ಸಾಹಿತಿ ಶಿಲ್ಪಾ ಮಹೇಶ ಮಜಗೆ ಅವರ ನಿವಾಸದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಪುಸ್ತಕಗಳು ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿ ಇಡೀ ಜಗತ್ತಿನ ಜ್ಞಾನ ನೀಡುತ್ತವೆ. ಪರಸ್ಪರ ಸಂಬಂಧ ಬೆಳೆಸುತ್ತವೆ. ಉತ್ತಮ ಸಮಾಜ ಕಟ್ಟಲು ಕೃತಿ ಓದುವುದು ಅಗತ್ಯ. ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಎಲ್ಲರಿಗೂ ಪ್ರೇರಣೆಯಾಗಿ ಮನೆ-ಮನೆಗಳಲ್ಲಿ ಪತ್ರಿಕೆ, ಪುಸ್ತಕಗಳನ್ನು ಓದುವವರ ಸಂಖ್ಯೆ ಅಧಿಕವಾಗಬೇಕಿದೆ” ಎಂದರು.

ಹಿರಿಯ ಸಾಹಿತಿ ಭಾರತಿ ವಸ್ತ್ರದ್‌ ಅವರು ವಿಶೇಷ ಉಪನ್ಯಾಸ ನೀಡಿ, “ಆಧುನಿಕತೆಯ ಭರಾಟೆಯಲ್ಲಿ ನಾವು ಓದಿನ ಅಭಿರುಚಿ ಕಳೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿ ಪುಸ್ತಕ ಸಂಗ್ರಹಣೆಗೆ ಸ್ಥಳ ಮೀಸಲಿಡಬೇಕೆಂಬ ಆಸಕ್ತಿ ಸಹ ತೋರುತ್ತಿಲ್ಲ. ಆದರೆ, ಪುಸ್ತಕ ಓದಿನಿಂದ ಜಗತ್ತಿನ ಜ್ಞಾನ ಕಲಿಯಲು ಸಾಧ್ಯ. ಮನೆಯಲ್ಲಿ ಪುಸ್ತಕ ಗ್ರಂಥಾಲಯವಿದ್ದರೆ ಸಾಹಿತ್ಯ, ಸಂಸ್ಕೃತಿಯ ವಾತಾವರಣ ನಿರ್ಮಾಣವಾಗುತ್ತದೆ ಎಂಬುದು ತಿಳಿಯಬೇಕಿದೆ. ಓದಿನ ಹವ್ಯಾಸವು ಮನಸ್ಸಿನ ಏಕಾಗ್ರತೆ, ನೆಮ್ಮದಿ, ಜ್ಞಾನ ವೃದ್ಧಿಸುತ್ತದೆ. ಎಲ್ಲೆಡೆ ಮನೆಗೊಂದು ಪುಸ್ತಕಾಲಯ ಆಗಬೇಕು” ಎಂದು ಅಭಿಪ್ರಾಯಪಟ್ಟರು.

WhatsApp Image 2026 07 15 at 1.12.52 PM 1
ಸಾಹಿತಿ ಶಿಲ್ಪಾ ಮಹೇಶ ಮಜಗೆ ದಂಪತಿಗೆ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭದಲ್ಲಿ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತ ಸಮಿತಿ ಸಂಚಾಲಕ ಬಾಲಾಜಿ ಕುಂಬಾರ ಪ್ರಾಸ್ತಾವಿಕ ಮಾತನಾಡಿ, “ಪುಸ್ತಕಗಳು ನಮ್ಮ ಉತ್ತಮ ಸ್ನೇಹಿತರಿದ್ದಂತೆ. ಎಲ್ಲರ ಮನೆಯಲ್ಲಿ ದೇವರ ಕೋಣೆ ಇರುವಂತೆ ಮನೆಯಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಜಾಗ ಮೀಸಲಿಡಬೇಕು. ಪ್ರತಿಯೊಬ್ಬರು ಓದಿನ ಅಭಿರುಚಿ ಬೆಳೆಸಿಕೊಂಡರೆ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಉಳಿಯುತ್ತವೆ. ಮನೆ-ಮನೆಗಳಲ್ಲಿ ಪುಸ್ತಕ ಓದುವ ಸಂಸ್ಕೃತಿ ಹೆಚ್ಚಿಸುವುದು ಕನ್ನಡ ಪುಸ್ತಕ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗ್ರಂಥಾಲಯಗಳ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಾಹಿತಿ ಶಿಲ್ಪಾ ಮಹೇಶ ಮಜಗೆ ಹಾಗೂ ಹಿರಿಯ ಸಾಹಿತಿ ರಘುಶಂಖ ಭಾತಂಬ್ರಾ ಅವರು ಪುಸ್ತಕಗಳ ಮಹತ್ವದ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಶಿಲ್ಪಾ ಮಜಗೆ ಅವರ ಮನೆಯಲ್ಲಿ ಸ್ಥಾಪಿಸಿದ ʼಪುಸ್ತಕ ಕುಂಜʼ ನೂತನ ಗ್ರಂಥಾಲಯ ಕೋಣೆಯನ್ನು ಉದ್ಘಾಟಿಸಲಾಯಿತು.

WhatsApp Image 2026 07 15 at 1.12.52 PM 3
ಕಾರ್ಯಕ್ರಮ ಉದ್ಘಾಟನೆ

ಇದನ್ನೂ ಓದಿ : ಈ ದಿನ ಸಂಪಾದಕೀಯ | ಸೋನಂ ವಾಂಗ್ಚುಕ್ ನಿರಶನ ಮತ್ತು ಮೋದಿ ಮೌನ

ಕಾರ್ಯಕ್ರಮದಲ್ಲಿ ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಜಯದೇವಿ ಯದಲಾಪುರೆ, ಲಕ್ಷ್ಮಣ ಮೇತ್ರೆ ಸೇರಿದಂತೆ ಸಾಹಿತ್ಯಾಸಕ್ತರಾದ ಶಂಭುಲಿಂಗ ವಾಲ್ದೊಡ್ಡಿ, ಮಹೇಶ ಮಜಗೆ, ಹಂಸಕವಿ, ಶೈಲಜಾ ಹುಡಗೆ, ಕೀರ್ತಿಲತಾ ಹೊಸಳ್ಳಿ, ಮಹೇಶ್ವರಿ ಹೇಡೆ, ಸಿದ್ದಮ್ಮ ಹಳಕಾಯಿ, ನಾಗಯ್ಯ ಸ್ವಾಮಿ, ಜಗದೇವಿ ತಿಬಶೆಟ್ಟಿ, ಆರ್.‌ಎಸ್.ಬಿರಾದರ್‌, ಬಸವರಾಜ ಸಿಂದಬಂದಗೆ, ದಿನೇಶ ಕೊಂಡಾ ಸೇರಿ ಅನೇಕರು ಉಪಸ್ಥಿತರಿದ್ದರು. ಲಕ್ಷ್ಮಿ ಬಿರಾದರ್‌ ಸ್ವಾಗತಿಸಿದರು. ಸ್ವರೂಪರಾಣಿ ನಾಗೂರೆ ನಿರೂಪಿಸಿದರು. ಆಶಾ ಕೋಟೆ ವಂದಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...