ಬೀದರ್‌ | ಜು.1ರಿಂದ ವಿಬಿ-ಜಿ ರಾಮ್ ಜಿ ಜಾರಿಗೆ ಸಜ್ಜಾಗಿ : ಸಚಿವ ಈಶ್ವರ ಖಂಡ್ರೆ

Date:

ಮಹಾತ್ಮಾ ಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ )ಯನ್ನು ಜು.1ರಿಂದ ವಿಬಿ-ಜಿ ರಾಮ್ ಜಿ ಎಂಬ ಬದಲಾದ ಹೊಸ ಸ್ವರೂಪದಲ್ಲಿ ಜಾರಿಗೊಳಿಸಲು ಸಜ್ಜಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

- Advertisement -

‌ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ವಾಡಿಕೆಯ ಮುಂಗಾರು ಮಳೆ ಕೊರತೆ ಉಂಟಾಗಿದ್ದು, ಮನರೇಗಾ ಅಡಿ ಉದ್ಯೋಗಕ್ಕೆ ಬೇಡಿಕೆ ಹೆಚ್ಚಾಗುತ್ತದೆ. ಜುಲೈ 1ರಿಂದ ಹೊಸ ಯೋಜನೆ ಜಾರಿ ಮಾಡಬೇಕಾಗಿದ್ದು, ಇದಕ್ಕೆ ಸನ್ನದ್ಧರಾಗುವಂತೆ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಮೊದಲೇ ಮಳೆಯ ಕೊರತೆಯಿಂದ ಆಂತಕಕ್ಕೀಡಾಗಿರುವ ಅನ್ನದಾತರಿಗೆ ತೊಂದರೆ ಆಗದಂತೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೃಷಿ ಅಧಿಕಾರಿಗಳು ರೈತರಿಗೆ ಮಳೆಯ ಕೊರತೆಯಾದಾಗ ಯಾವ ಬೆಳೆ ಬೆಳೆಯಬೇಕು ಎಂಬ ಮಾರ್ಗದರ್ಶನ ಮಾಡಬೇಕು, ರೈತರು ಕಚೇರಿಗೆ ಅಲೆದಾಡದಂತೆ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದು, ಖಾಸಗಿ ಬಾವಿಗಳು, ಕೊಳವೆ ಬಾವಿ ಸೇರಿದಂತೆ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ಟ್ಯಾಂಕರ್ ಮಾಲೀಕರೊಂದಿಗೆ ಮಾತನಾಡಿ, ನೀರಿನ ಲಭ್ಯತೆ ಖಚಿತಪಡಿಸಿಕೊಂಡು, ನೀರಿನ ಗುಣಮಟ್ಟ ಪರೀಕ್ಷೆ ಮಾಡಿ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲು ಸಚಿವ ಖಂಡ್ರೆ ತಿಳಿಸಿದರು.

WhatsApp Image 2026 06 25 at 7.08.46 PM

ಜಿಲ್ಲೆಯಲ್ಲಿ ರೈತರ ಹಿತಾಸಕ್ತಿ, ಕುಡಿಯುವ ನೀರಿನ ಲಭ್ಯತೆ ಹಾಗೂ ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಸಮರ್ಪಕ ಅನುಷ್ಠಾನವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದ ಸಚಿವ ಈಶ್ವರ ಖಂಡ್ರೆ ಅವರು ಮಳೆ ಕೊರತೆಯ ಸಂಕಷ್ಟದ ಸಮಯದಲ್ಲಿ ರೈತರ ಮತ್ತು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಸ ವಿಲೇವಾರಿ ಘಟಕಗಳ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಇದನ್ನೂ ಓದಿ : ಬೀದರ್‌ | ಜುಲೈ 3ರಂದು ಬೆಂಗಳೂರಿನಲ್ಲಿ ದಲಿತ ಜನಾಗ್ರಹ ಸಮಾವೇಶ : ರಮೇಶ ಡಾಕುಳಗಿ

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಬಾ ಶರ್ಮಾ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...