ಬೀದರ್‌ | ಭಾರತ ಜೋಡೊ ಯುವ ಸಂಘಗಳ ನೋಂದಣಿ ಪ್ರಾರಂಭ

Date:

ಯುವಜನರ ಸಬಲೀಕರಣ ಹಾಗೂ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆನ್‌ಲೈನ್ ಪೋರ್ಟಲ್ ಮೂಲಕ ಹೊಸ ಭಾರತ ಜೋಡೊ ಯುವ (BJYS) ಸಂಘಗಳ ನೋಂದಣಿಗೆ ಚಾಲನೆ ನೀಡಲಾಗಿದೆ ಎಂದು ಬೀದರ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಈ ಸಂಘಗಳು ಕ್ರೀಡೆ ಮತ್ತು ಫಿಟ್‌ನೆಸ್, ಯುವ ಸಬಲೀಕರಣ, ಕೌಶಲ್ಯಾಭಿವೃದ್ಧಿ, ಸಮುದಾಯ ಅಭಿವೃದ್ಧಿ, ಅರಣ್ಯ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ ಹಾಗೂ ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯದ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನೋಂದಣಿ ಮಾಡಿಕೊಳ್ಳಲು 16 ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಅರ್ಹರಾಗಿದ್ದು, ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಹೊಂದಿರಬೇಕು. ಆಯಾ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ ನಿವಾಸಿಗಳಿಗೆ ಈ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಂದು ಸಂಘದಲ್ಲಿ ಕನಿಷ್ಠ 100 ಜನ ಸದಸ್ಯರಿರಬೇಕು. ನಿಯಮಾವಳಿಗಳ ಪ್ರಕಾರ ಆಯ್ಕೆಯಾಗುವ ಸಂಘಗಳಿಗೆ 10 ಲಕ್ಷ ರೂಪಾಯಿಗಳ ಉತ್ತೇಜನ ಅನುದಾನ ದೊರೆಯಲಿದೆ.

ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಒಟ್ಟು 15 ಪದಾಧಿಕಾರಿಗಳಿದ್ದು, ಅಧ್ಯಕ್ಷರು (1), ಉಪಾಧ್ಯಕ್ಷರು (1), ಖಜಾಂಚಿ (1) ಹಾಗೂ 12 ಕಾರ್ಯಕಾರಿ ಸದಸ್ಯರನ್ನು ಒಳಗೊಂಡಿರಬೇಕು. ವಿಶೇಷ ಸೂಚನೆಯಂತೆ, ಸಂಘದ ಅಧ್ಯಕ್ಷ ಅಥವಾ ಉಪಾಧ್ಯಕ್ಷರ ಹುದ್ದೆಯಲ್ಲಿ ಒಬ್ಬರು ಮಹಿಳೆಯಾಗಿರುವುದು ಕಡ್ಡಾಯಗೊಳಿಸಲಾಗಿದೆ. ಆಸಕ್ತರು ತಕ್ಷಣವೇ ಅಧಿಕೃತ ವೆಬ್‌ಸೈಟ್ https://bjys.karnataka.gov.in ಮೂಲಕ ತಮ್ಮ ಸಂಘವನ್ನು ನೋಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ : ವಚನ ಕಲ್ಯಾಣ | ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು!

ಹೆಚ್ಚಿನ ಮಾಹಿತಿಗಾಗಿ ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಕಚೇರಿಗಳು ಹಾಗೂ ಮಹಾನಗರ ಪಾಲಿಕೆಯನ್ನು ನೇರವಾಗಿ ಭೇಟಿ ನೀಡಿ ಸಂಪರ್ಕಿಸಬಹುದು. ಬೀದರ ಜಿಲ್ಲಾ ಪಂಚಾಯತ್, ನೆಹರೂ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು (ದೂ- 08482-226681) ನೇರವಾಗಿ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...