ಬೀದರ್‌ | ಸ್ವಾತಂತ್ರ್ಯ ಯೋಧರ ಗೌರವಧನ ₹20 ಸಾವಿರಕ್ಕೆ ಹೆಚ್ಚಿಸಲು ಮನವಿ

Date:

ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ಯೋಧರಿಗೆ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ₹10 ಸಾವಿರದಿಂದ ₹20 ಸಾವಿರಕ್ಕೆ ಹೆಚ್ಚಿಸಬೇಕೆಂದು ರಾಜ್ಯ ಹಿರಿಯ ನಾಗರಿಕರ ಪ್ರಶಸ್ತಿ ಪುರಸ್ಕೃತ ವೀರಭದ್ರಪ್ಪ ಉಪ್ಪಿನ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ʼ2018 ರಿಂದ ಸ್ವಾತಂತ್ರ್ಯ ಯೋಧರಿಗೆ ತಿಂಗಳಿಗೆ ₹10,000 ಗೌರವಧನ ನೀಡಲಾಗುತ್ತಿದ್ದು, ಕಳೆದ ಎಂಟು ವರ್ಷಗಳಿಂದ ಇದರಲ್ಲಿ ಯಾವುದೇ ಪರಿಷ್ಕರಣೆ ಆಗಿಲ್ಲ. ಇದೇ ಅವಧಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 6ನೇ ಹಾಗೂ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ನೀಡಲಾಗಿದೆ. ಸಚಿವರು, ಸಂಸದರು, ಶಾಸಕರು ಹಾಗೂ ಇತರ ಚುನಾಯಿತ ಪ್ರತಿನಿಧಿಗಳ ಸಂಬಳ ಮತ್ತು ಭತ್ಯೆಗಳನ್ನು ಸಹ ಬೆಲೆ ಸೂಚ್ಯಂಕದ ಆಧಾರದ ಮೇಲೆ ಹೆಚ್ಚಿಸಲಾಗುತ್ತಿದೆʼ ಎಂದು ಅವರು ತಿಳಿಸಿದ್ದಾರೆ.

WhatsApp Image 2026 05 07 at 6.29.20 PM

ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ, ಆಸ್ಪತ್ರೆ ಹಾಗೂ ಔಷಧಿ ವೆಚ್ಚಗಳು ಹೆಚ್ಚುತ್ತಿರುವ ಹಿನ್ನೆಲೆ ಸ್ವಾತಂತ್ರ್ಯ ಯೋಧರ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ. ಹೀಗಾಗಿ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಗೌರವ ಧನವನ್ನು ₹20,000ಕ್ಕೆ ಹೆಚ್ಚಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ : ಔರಾದ್‌ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ್ಯ ಯೋಧೆ ಸರಸ್ವತಿಬಾಯಿ ಉಪ್ಪಿನ ಹಾಗೂ ಶಿಕ್ಷಕ ರಾಜಶೇಖರ ಉಪ್ಪಿನ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...