ಬೀದರ್ | ಬಜೆಟ್‌ನಲ್ಲಿ ದಲಿತರಿಗೆ ಶೇ.24.1 ಅನುದಾನ ಮೀಸಲಿಡಿ : ದಸಂಸ ಒತ್ತಾಯ

Date:

2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

- Advertisement -

ಈ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಸೆಕ್ಷನ್ 7(ಸಿ) ಅನ್ನು ರದ್ದುಗೊಳಿಸಿ ಅನುದಾನದ ದುರ್ಬಳಕೆಯನ್ನು ತಡೆಯಬೇಕು. ಎಸ್‌ಸಿ, ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಸುಮಾರು ₹25 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ಕ್ರಮ ಖಂಡನೀಯ. ಆ ಹಣವನ್ನು ಕೂಡಲೇ ಮರುಸ್ಥಾಪಿಸಬೇಕು ಎಂದು ಆಗ್ರಹಿಸಲಾಗಿದೆ.

ಸಂವಿಧಾನದ ನಿರ್ದೇಶಕ ತತ್ವಗಳ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ಮೀಸಲು ಮಾಡುವುದು ಸರ್ಕಾರದ ಕರ್ತವ್ಯ. ರಾಜ್ಯ ಸರ್ಕಾರವು ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ದಲಿತ ಸಮುದಾಯದ ಶಿಕ್ಷಣ, ವಸತಿ, ಭೂ ಹಕ್ಕು, ಆರ್ಥಿಕ ಅಭಿವೃದ್ಧಿ ಹಾಗೂ ಸಾಮಾಜಿಕ ಭದ್ರತೆ ವಿಷಯಗಳಲ್ಲಿ ನ್ಯಾಯ ಒದಗಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರಮುಖ ಬೇಡಿಕೆಗಳು:ದಲಿತರ ಅಭಿವೃದ್ಧಿಗೆ ಶೇ.24.1 ಅನುದಾನ ಕಡ್ಡಾಯ ಮೀಸಲಿಡಬೇಕು. ವರ್ಗಾಯಿಸಿದ ₹25,000 ಕೋಟಿ ಅನುದಾನ ಮರುಸ್ಥಾಪನೆ. ನಿವೇಶನ ರಹಿತ ಕುಟುಂಬಗಳಿಗೆ ಭೂಮಿ ಮತ್ತು ವಸತಿ ಸೌಲಭ್ಯ. ಬಗರ್ ಹುಕುಂ ಸಾಗುವಳಿದಾರರಿಗೆ ಭೂ ಹಕ್ಕು. ದೇವದಾಸಿ, ವಿಧವಾ ಹಾಗೂ ವೃದ್ಧರಿಗೆ ಮಾಸಿಕ ಪಿಂಚಣಿ ಹೆಚ್ಚಳ. ದಲಿತ ಉದ್ಯಮ ಮತ್ತು ಕಲ್ಯಾಣ ಯೋಜನೆಗಳಿಗೆ ಹೆಚ್ಚುವರಿ ಅನುದಾನ. ಪ್ರೊ. ಬಿ. ಕೃಷ್ಣಪ್ಪ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ. ಆಸ್ಪತ್ರೆ ನಿರ್ಲಕ್ಷ್ಯ ಪ್ರಕರಣಗಳಿಗೆ ನ್ಯಾಯ. ಗೋಹತ್ಯೆ ಕಾಯ್ದೆ ರದ್ದುಪಡಿಸುವಂತೆ ಆಗ್ರಹಿಸಲಾಗಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರೆ, ಜಿಲ್ಲಾ ಸಹ ಸಂಚಾಲಕರಾದ ವಿಜಯಕುಮಾರ ಐಹೊಳೆ ಪ್ರಮುಖರಾದ ಗುಂಡಪ್ಪ ಜ್ಯೋತಿ, ಅನೀಲಕುಮಾರ ಬಡಿಗೇರ್, ಜೈಪ್ರಕಾಶ ಅಷ್ಟೂರೆ, ಮಹಾದೇವ ದೇವೆ, ಅನೀಲಕುಮಾರ ಕಾಂಬಳೆ, ಜೈಪ್ರಕಾಶ ಕೇರುರ್‌ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...