ಬೀದರ್‌ | ದೇಶದ ಉನ್ನತಿಗೆ ಶ್ರಮಿಕರನ್ನು ಗೌರವಿಸಿ : ವಿಠಲದಾಸ ಪ್ಯಾಗೆ

Date:

ದೇಶದ ಉನ್ನತಿಗಾಗಿ ರೈತರು ಸೇರಿದಂತೆ ಶ್ರಮಿಕರನ್ನು ಎಲ್ಲರೂ ಗೌರವಿಸಬೇಕು ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ್ ಪ್ಯಾಗೆ ಹೇಳಿದರು.

- Advertisement -

ಭಾಲ್ಕಿ ತಾಲ್ಲೂಕಿನ ರುದನೂರದಲ್ಲಿ ಬೀದರ್ ವಿಶ್ವವಿದ್ಯಾಲಯ ಹಾಗೂ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ನಡೆದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಯಾವುದೇ ದೇಶದ ಪ್ರಗತಿಯಲ್ಲಿ ಶ್ರಮಿಕರ ಪಾತ್ರ ಬಹಳ ಮಹತ್ವದ್ದಾಗಿದೆ. ಆದರೆ, ಪ್ರಸ್ತುತ ಶ್ರೀಮಂತರು, ಪಟ್ಟಭದ್ರರು, ಅಧರ್ಮೀಯರನ್ನು ಮಾತ್ರ ಗೌರವಿಸುತ್ತಿರುವುದು ಕಳವಳಕಾರಿ. ಯುವ ಜನರು ರಾಷ್ಟ್ರ ಸೇವೆಗೆ ಸದಾ ಕಂಕಣಬದ್ಧರಾಗಿರಬೇಕು” ಎಂದು ಸಲಹೆ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ.ಶಂಕರ ಗಣಗೊಂಡ ಮಾತನಾಡಿ, “ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಗುರಿ ಮುಟ್ಟುವ ವರೆಗೆ ವಿರಮಿಸಬಾರದು. ಒಳ್ಳೆಯ ನಡತೆ ಮೈಗೂಡಿಸಿಕೊಳ್ಳಬೇಕು. ಸತ್ಪ್ರಜೆಯಾಗಲು ಪ್ರಯತ್ನಿಸಬೇಕು” ಎಂದು ಕಿವಿಮಾತು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಡಾ.ಸುಚಿತಾನಂದ ಕೆ.ಮಲ್ಕಾಪುರೆ ಮಾತನಾಡಿ, “ಸದೃಢ ರಾಷ್ಟ್ರ ಕಟ್ಟಲು ಸ್ವದೇಶಿ ಉತ್ಪನ್ನಗಳನ್ನೇ ಬಳಸಬೇಕು. ಪ್ರತಿಯೊಬ್ಬರೂ ದೇಶಕ್ಕೆ ಏನನ್ನಾದರೂ ಕೊಡುಗೆ ನೀಡಬೇಕು. ದೇಶದ ಶ್ರೇಷ್ಠ ಸಂಸ್ಕøತಿಯನ್ನು ಉಳಿಸಿ, ಬೆಳೆಸಬೇಕು” ಎಂದು ತಿಳಿಸಿದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ರಾಜಕುಮಾರ ಅಲ್ಲೂರೆ ಮಾತನಾಡಿ, “ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಹನೆ ಹಾಗೂ ಸಮಯ ಪ್ರಜ್ಞೆ ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಓದಿ : ಬೀದರ್ | ಬೇಸಿಗೆ ಬೆಳಿಗ್ಗೆಯೇ ಮಳೆ ಆರ್ಭಟ : ಸಿಡಿಲು ಬಡಿದು ಯುವಕ ಸಾವು

ಕಾರ್ಯಕ್ರಮದಲ್ಲಿ ಡಾ.ದೇವದಾಸ್ ಯಲೀಶ್, ಡಾ.ಶಿವಕುಮಾರ ಚಿಲ್ಲರ್ಗೆ, ಡಾ.ಶೀಲಾ ಬಿರಾದಾರ, ಡಾ.ಬಾಲಸುಬ್ರಹ್ಮಣ್ಯಂ, ಡಾ.ಚನ್ನಕೇಶವ ಮೂರ್ತಿ, ಡಾ.ಸುನೀಲಕುಮಾರ ಉಪಸ್ಥಿತರಿದ್ದರು. ಕೀರ್ತನ್ ನಿರೂಪಿಸಿದರು. ಪ್ರೊ.ಸುಮನ್‍ಬಾಯಿ ಸಿಂಧೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...