ಬೀದರ್‌ | ಒಳಮೀಸಲಾತಿ ಅನ್ಯಾಯ ಸರಿಪಡಿಸಲು ಬಲಗೈ ಸಮುದಾಯ ಒತ್ತಾಯ

Date:

ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ತತ್‌ಕ್ಷಣ ಸರಿಪಡಿಸಬೇಕೆಂದು ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

- Advertisement -

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹಾದೇವಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಬೀದರ್‌ ನಗರಕ್ಕೆ ಆಗಮಿಸಿದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧ್ಯಕ್ಷ ಡಾ.ಮೂರ್ತಿ ಎಲ್. ಅವರಿಗೆ ಬೀದರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕವಾಗಿ ಮನವಿ ಪತ್ರ ನೀಡಲಾಯಿತು.

ಹಕ್ಕೋತ್ತಾಯಗಳೇನು?

ಒಳಮೀಸಲಾತಿ ಗೊಂದಲಗಳು ಪರಿಹಾರವಾಗುವ ತನಕ ಹಳೆಯ ಮೀಸಲಾತಿ ಪದ್ಧತಿಯನ್ನೇ ಅನ್ವಯಿಸಿ, ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಜಾರಿಗೆ ತಂದಿರುವ ಒಳಮೀಸಲಾತಿ ವರದಿ ಸಂಬಂಧಿತ ಸಮಸ್ಯೆಗಳು ಸಂಪೂರ್ಣವಾಗಿ ಪರಿಹಾರವಾಗುವ ತನಕ, ಪ್ರಸ್ತುತ ಶೈಕ್ಷಣಿಕ ಕ್ಷೇತ್ರ ಮತ್ತು ಉದ್ಯೋಗಗಳಿಗೆ ಅನ್ವಯಿಸುತ್ತಿರುವ ಒಳಮೀಸಲಾತಿಯ ಕಾರ್ಯಚಟುವಟಿಕೆಗಳಿಗೆ ತಕ್ಷಣ ತಡೆಯಾಜ್ಞೆ ನೀಡಬೇಕು. ಹೊಸ ಜಾತಿ ಪ್ರಮಾಣ ಪತ್ರಗಳ ವಿತರಣೆ ತುರ್ತಾಗಿ ನಿಲ್ಲಿಸಿ, ಈಗಾಗಲೇ ನೀಡಿರುವ ಹಳೆಯ ಜಾತಿ ಪ್ರಮಾಣ ಪತ್ರಗಳನ್ನೇ ಮುಂದುವರೆಸಬೇಕು. ಒಳಮೀಸಲಾತಿಗೆ ಸಂಬಂಧಿಸಿದ ರೋಸ್ಟರ್ ಬಿಂದುಗಳನ್ನು ಪರಿಷ್ಕರಿಸಿ, ನ್ಯಾಯಸಮ್ಮತವಾಗಿ ಸರಿಪಡಿಸಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ʼಒಳಮೀಸಲಾತಿ ಅನ್ಯಾಯವನ್ನು ಒಂದು ವಾರದೊಳಗೆ ಬಗೆಹರಿಯದಿದ್ದರೆ ಸಮುದಾಯದಿಂದ ಸಭೆ ನಡೆಸಿ ಬೀದರ ಬಂದ್‌ಗೆ ಕರೆ ನೀಡಲಾಗುವುದುʼ ಎಂದು ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮಹೇಶ ಗೋರನಾಳಕರ ಎಚ್ಚರಿಸಿದರು.

ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರದೀಪ್ ನಾಟೆಕರ್, ಪ್ರಕಾಶ ರಾವಣ್, ಭೀಮರಾವ ಮಾಲಗತ್ತಿ, ರಾಹುಲ್ ಡಾಂಗೆ, ಪವನ ಮಿಠಾರೆ, ಸಂಜುಕುಮಾರ ಸಾಗರ, ವಿನೋದ ಬಂದಗೆ, ಸೂರ್ಯಕಾಂತ ಸಾಧೂರೆ, ಅರುಣ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಫೆ.26ರಂದು ರಮಾತಾಯಿ ಅಂಬೇಡ್ಕರ್‌ ಜಯಂತ್ಯುತ್ಸವ, ಸಾಂಸ್ಕೃತಿಕ ಸಂಭ್ರಮ

ಬಲಗೈ ಸಮುದಾಯದ ಹೋರಾಟಗಾರರಾದ ಮಾರುತಿ ಬೌದ್ಧೆ, ಅನೀಲಕುಮಾರ ಬೆಲ್ದಾರ, ಕಾಶಿನಾಥ ಚೆಲ್ವಾ, ವಿಠಲದಾಸ ಪ್ಯಾಗೆ, ಕೆ.ಪುಂಡಲಿಕರಾವ, ಅರವಿಂದಕುಮಾರ ಅರಳಿ, ಶಂಕರ ದೊಡ್ಡಿ, ವಿಜಯಕುಮಾರ ಗಾಯಕವಾಡ, ಶಂಭುಲಿಂಗ ಕುದರೆ, ಶ್ರೀಪತರಾವ ದಿನೆ, ಶಿವಕುಮಾರ ನೀಲಿಕಟ್ಟಿ, ದಶರಥ ಗುರು, ಸಂದೀಪ್ ಕಾಂಟೆ, ಸುನೀಲ ಸಂಗಮ್, ಪ್ರದೀಪ್ ಜಂಜಿರೆ, ದೇವೆಂದ್ರ ಸೋನಿ, ಭರತ ಕಾಂಬಳೆ, ಸಂಜುಕುಮಾರ ಲಾಧಾ, ತುಕಾರಾಮ ಹಸನ್ಮುಖಿ, ಶಿವಮೂರ್ತಿ ಸುಬಾನೆ, ಅಶೋಕ ಮಾಳಗೆ, ಉದಯ ನಾಯಕ, ಪುಟ್ಟರಾಜ ದೀನೆ, ಸುಭಾಷ ಲಾಧಾ, ಝರೇಪ್ಪಾ ಬೆಲ್ದಾರ್, ಗೋಪಾಲ ಸಾಗರ, ಮೋಹನ ಡಾಂಗೆ, ಬಸವರಾಜ ಅಲಿಯಂಬರ, ರಾಹುಲ್ ಹಾಲೆಪೂರ್ಗಿಕರ್, ಮಲ್ಲಿಕಾರ್ಜುನ ಮೊಳಕೇರೆ, ಬಾಬು ಆಣದೂರ, ಅರ್ಜುನ ಸಾಗರ, ಶರಣು ಫುಲೆ, ಧನರಾಜ ಜ್ಯೋತಿ, ಸುನೀಲ ಮಿತ್ರಾ, ಲೋಕೆಶ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...