ಬೀದರ್‌ | ಹದಗೆಟ್ಟ ರಸ್ತೆ, ಸವಾರರು ಹೈರಾಣು : ದುರಸ್ತಿ ಯಾವಾಗ?

Date:

ಜಿಲ್ಲೆಯ ಗ್ರಾಮೀಣ ಭಾಗದ ಹಲವು ರಸ್ತೆಗಳು ಗುಂಡಿಮಯವಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಗುಂಡಿಗಳಿಗೆ ಮುಕ್ತಿ ನೀಡುವ ಗೋಜಿಗೆ ಹೋಗುತ್ತಿಲ್ಲ. ಇಂತಹ ಹದಗೆಟ್ಟ ರಸ್ತೆಯಲ್ಲಿ ಸವಾರರ ನಿತ್ಯ ಸಂಚಾರ ಹೈರಾಣಾಗಿಸಿದೆ.

- Advertisement -

ಔರಾದ್‌ ತಾಲೂಕಿನ ಹೆಡಗಾಪುರ-ನಿಟ್ಟೂರ(ಬಿ) ನಡುವಿನ ರಸ್ತೆಯಲ್ಲಿ ಸಂಚಾರ ಮಾಡುವವರು ಜೀವವನ್ನು ಕೈಯಲ್ಲಿಟ್ಟುಕೊಂಡು ಸಾಗಬೇಕಾದ ಸ್ಥಿತಿಯಿದೆ. ಮಾರ್ಗದಲ್ಲಿ ಎಲ್ಲೆಂದರಲ್ಲಿ ಹೊಂಡಗಳು ನಿರ್ವಣವಾಗಿ ವಾಹನ ಚಾಲಕರಿಗೆ ಅಪಾಯವಾಗಿ ಪರಿಣಮಿಸಿವೆ. ಇನ್ನು ಸ್ವಲ್ಪ ಮಳೆಯಾದರೂ ಆಳದ ಗುಂಡಿಯಲ್ಲಿ ನೀರು ಸಂಗ್ರಹವಾಗುತ್ತಿದೆ. ಬೈಕ್ ಸವಾರರು ಸ್ವಲ್ಪ ಎಡವಿದರೂ ಸಾಕು ಹೊಂಡದಲ್ಲಿ ಬೈಕ್ ಸಮೇತು ಬೀಳುವುದು ಗ್ಯಾರಂಟಿ ಎನ್ನುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಸುಮಾರು ನಾಲ್ಕು ಕಿ.ಮೀ. ರಸ್ತೆ ಹಾಳಾಗಿದೆ. ಇಕ್ಕಟಾದ ಈ ರಸ್ತೆಯಲ್ಲಿ ಸಾರಿಗೆ ಬಸ್, ಖಾಸಗಿ ವಾಹನಗಳು ಸೇರಿದಂತೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಭಾಲ್ಕಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ. ರಸ್ತೆಯುದ್ದಕ್ಕೂ ಮೊಣಕಾಲುದ್ಧದ ತಗ್ಗು, ಗುಂಡಿಗಳು ಬಿದ್ದಿವೆ. ರಸ್ತೆ ದುರಸ್ತಿಗಾಗಿ ಹಲವು ಬಾರಿ ಮನವಿ ಮಾಡುತ್ತಿದ್ದರೂ ಆಡಳಿತ ವ್ಯವಸ್ಥೆ ಕನಿಷ್ಠ ಗುಂಡಿ ಮುಚ್ಚುವ ಕೆಲಸ ಮಾಡಿಲ್ಲ. ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇಕ್ಕಟ್ಟಾದ ರಸ್ತೆ ಡಾಂಬರು ಕಂಡು ಹಲವು ವರ್ಷಗಳೇ ಕಳೆದಿದೆ. ಎದುರುಗಡೆಯಿಂದ ಲಾರಿ, ಬಸ್‌, ಟಿಪ್ಪರ್‌ನಂತಹ ಭಾರಿ ವಾಹನಗಳು ಬಂದಾಗ ವಾಹನ ಸವಾರರು ಪರದಾಡುವಂತಾಗಿದೆ. ಸ್ವಲ್ಪ ಮಳೆಯಾದರೆ ಗುಂಡಿಗಳಲ್ಲಿ ನೀರು ತುಂಬಿಕೊಂಡಿರುತ್ತವೆ. ಆಗ ರಸ್ತೆ ಮೇಲೆ ಗುಂಡಿಯೊ ಅಥವಾ ಗುಂಡಿಯಲ್ಲಿ ರಸ್ತೆಯೊ ಎಂದು ತಿಳಿಯದ ಸ್ಥಿತಿ ನಿರ್ಮಾಣವಾಗುತ್ತದೆ. ಪ್ರತಿನಿತ್ಯ ಅಪಘಾತದ ಭೀತಿಯಲ್ಲೇ ಸಂಚಾರಿಸುವುದು ಜನರಿಗೂ ವಾಡಿಕೆಯಾಗಿದೆ.

WhatsApp Image 2026 06 27 at 2.41.10 PM 1
ಹೆಡಗಾಪುರ-ನಿಟ್ಟೂರ(ಬಿ) ರಸ್ತೆ ಮಾರ್ಗದಲ್ಲಿ ಆಳವಾದ ಗುಂಡಿಗಳು ಬಿದ್ದಿರುವುದು

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಿಂದ ಕೋಟಗ್ಯಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ಆಳವಾದ ಗುಂಡಿ, ತಗ್ಗು ಬಿದ್ದು ಸವಾರರ ಸಂಚಾರ ದುಸ್ತರವಾಗಿದೆ. ರಾಷ್ಟ್ರೀಯ ಹೆದ್ದಾರಿ-50ಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಯ ಡಾಂಬರು ಕಿತ್ತು ಹದಗೆಟ್ಟು ಹೋಗಿದೆ. ನಿಟ್ಟೂರ (ಬಿ) ವಲಯ ವ್ಯಾಪ್ತಿಯಲ್ಲಿರುವ ಬರುವ ಬಾಳೂರ, ಚಂದಾಪುರ, ಕೇರೂರ, ಮುರಾಳ ಹಾಗೂ ಇತರ ಗ್ರಾಮಗಳ ಜನರು ಈ ರಸ್ತೆಯೇ ಅವಲಂಬಿಸಿದ್ದಾರೆ. ಮಳೆಗಾಲದಲ್ಲಿ ನೀರು ಹಾಗೂ ತಗ್ಗು ಪ್ರದೇಶಗಳು ಸಂಚಾರಕ್ಕೆ ಅಪಾಯವನ್ನುಂಟು ಮಾಡುತ್ತಿದೆ.

ಸರ್ಕಾರ ರಸ್ತೆ ದುರಸ್ತಿಗೆ ಕೋಟ್ಯಂತರ ಹಣ ವ್ಯಯಿಸುತ್ತಿದೆ. ಆದರೆ, ಗ್ರಾಮೀಣ ಭಾಗದ ಕೆಲ ರಸ್ತೆಗಳು ಹದಗೆಟ್ಟು ಹಲವು ವರ್ಷಗಳೇ ಕಳೆದರೂ ಅಧಿಕಾರಿಗಳು ದುರಸ್ತಿ ಕಾರ್ಯ ಮಾಡುವ ಇಚ್ಛಾಶಕ್ತಿ ತೋರಿಲ್ಲ. ಗುಂಡಿ ಬಿದ್ದ ರಸ್ತೆ, ಕೆಸರು ಗದ್ದೆಯಂತಹ ರಸ್ತೆಗಳಲ್ಲಿ ಓಡಾಡುತ್ತ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : ಆರ್‌ಎಸ್‌ಎಸ್‌ ಪಿಡುಗು ಈ ದೇಶಕ್ಕೆ ಅಂಟಿರುವ ಕ್ಯಾನ್ಸರ್‌, ಏಡ್ಸ್‌ : ಚಿಂತಕಿ ಮೀನಾಕ್ಷಿ ಬಾಳಿ

ಮಳೆಗಾಲಕ್ಕೂ ಮುನ್ನವೇ ಗುಂಡಿ ಮುಚ್ಚುವ ಕೆಲಸ ಆಗಬೇಕಿತ್ತು. ಆಗ ನಿರ್ಲಕ್ಷ್ಯ ಮಾಡಿರುವುದಕ್ಕೆ ಇದೀಗ ರಸ್ತೆ ಸಂಪೂರ್ಣ ಹಾಳಾಗಿದೆ. ಇಂತಹ ರಸ್ತೆಗಳಲ್ಲಿ ಓಡಾಡಲು ತೊಂದರೆಯಾಗುತ್ತಿದೆ. ರಾತ್ರಿ ಹೊತ್ತಿನಲ್ಲಿ ಗುಂಡಿಮಯ ರಸ್ತೆಯಲ್ಲಿ ಸಂಚರಿಸುವುದು ದೇವರಿಗೆ ಪ್ರೀತಿ ಎಂಬಂತಾಗಿದೆ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಮುಂದಾಗಿ ಜನರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...