ಬೀದರ್ ತಾಲೂಕಿನ ಕಮಠಾಣ ಗ್ರಾಮದ ಜೈನ್ ಮಂದಿರದಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಇರುವ ರಸ್ತೆ ಸಂಪೂರ್ಣ ಕೆಸರಿನಿಂದ ಕೂಡಿದ್ದು, ಕೆಸರು ಗದ್ದೆಯಂತಾಗಿದೆ.
ಮಳೆಯಿಂದ ರಸ್ತೆ ಹದಗೆಟ್ಟಿರುವ ಪರಿಣಾಮ ವಾಹನ ಸವಾರರು, ಪಾದಚಾರಿಗಳು ಹಾಗೂ ರೋಗಿಗಳು ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲಿಸಿ ರಸ್ತೆ ದುರಸ್ತಿ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಆರೋಗ್ಯ ಕೇಂದ್ರಕ್ಕೆ ತೆರಳುವವರಿಗೆ ಈ ರಸ್ತೆ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಅಲ್ಲದೆ ಈ ಬಡಾವಣೆಯಲ್ಲಿರುವ ವಾಸಿಸುವ ಜನರಿಗೆ ಓಡಾಡಲು ಸಮಸ್ಯೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರಸ್ತೆ ದುರಸ್ತಿ ಮಾಡಬೇಕೆಂದು ಎಂದು ಗ್ರಾಮದ ಮುಖಂಡ ರಾಜಶೇಖರ್ ಕುಂಚೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದಲ್ಲಿ ಸೆ.8ರಂದು ಪ್ರಜಾ ಸೇವಾ ಅಭಿಯಾನಕ್ಕೆ ಚಾಲನೆ





