ಬೀದರ್‌ | ವಿಶ್ವ ಶಾಂತಿಗಾಗಿ ರೋಟರಿ ಶಾಂತಿ ನಡಿಗೆ

Date:

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಅಮೆರಿಕಾ ನಡುವಿನ ಯುದ್ಧದಿಂದ ಜಗತ್ತಿನಾದ್ಯಂತ ಉಂಟಾಗಿರುವ ಅಶಾಂತಿ ಕೊನೆಗೊಳ್ಳಬೇಕು ಎಂಬ ಆಶಯದೊಂದಿಗೆ ಬೀದರ್ ಜಿಲ್ಲೆಯ ಎಲ್ಲಾ ರೋಟರಿ ಕ್ಲಬ್‌ಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಶಾಂತಿ ನಡಿಗೆ ಹಮ್ಮಿಕೊಳ್ಳಲಾಯಿತು.

- Advertisement -

ರೋಟರಿ ಪೇಲ್ಸ್ ಮತ್ತು ಸೇಲ್ಸ್ ಕಾರ್ಯಕ್ರಮದ ಅಧ್ಯಕ್ಷ ಬಸವರಾಜ ಧನ್ನೂರ ಹಾಗೂ ರೋಟರಿ ಕ್ಲಬ್ ಆಫ್ ಬೀದರ್ ಸಿಲ್ವರ್ ಸ್ಟಾರ್ ಅಧ್ಯಕ್ಷ ಆದಿಶ್ ವಾಲಿ ಅವರ ನೇತೃತ್ವದಲ್ಲಿ ನಗರದ ಬರೀದ ಶಾಯಿ ಗರ‍್ಡನ್‌ನಿಂದ ಪ್ರಾರಂಭವಾದ ಈ ನಡಿಗೆ ನೂತನ ಬಸ್ ನಿಲ್ದಾಣ, ಮಡಿವಾಳ ಮಾಚಿದೇವ ವೃತ್ತದ ಮೂಲಕ ಸಾಗುತ್ತಾ ರೋಟರಿ ಕನ್ನಡಾಂಬೆ ವೃತ್ತದಲ್ಲಿ ಕೊನೆಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ರೋಟರಿ ಕಲ್ಯಾಣ ವಲಯ ಜಿಲ್ಲೆಗಳ ಗವರ್ನರ್ ಎಂ.ಕೆ. ರವೀಂದ್ರ ಮಾತನಾಡಿ, ʼವಿಶ್ವದಲ್ಲಿ ಶಾಂತಿ ಸ್ಥಾಪನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಯುದ್ಧಗಳು ಮಾನವಕುಲಕ್ಕೆ ಅಪಾಯಕಾರಿಯಾಗಿದ್ದು, ಸಹಬಾಳ್ವೆಯ ಮೂಲಕವೇ ಶಾಂತಿ ಸಾಧ್ಯʼ ಎಂದು ತಿಳಿಸಿದರು.

ಕೇಶವ ರೆಡ್ಡಿ ಅವರು ಮಾತನಾಡಿ, ʼಯುದ್ಧದಿಂದ ವಿನಾಶವೇ ಹೊರತು ಯಾರಿಗೂ ಲಾಭವಿಲ್ಲ. ಧರ್ಮ, ಜಾತಿ ಬೇಧ ಮೀರಿದ ಮಾನವೀಯತೆ ಬೆಳೆಸಿದಾಗ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲಿʼದೆ ಎಂದು ಹೇಳಿದರು.

ಹಿರಿಯ ಪತ್ರರ‍್ತ ಶಿವಶರಣಪ್ಪ ವಾಲಿ ಮಾತನಾಡಿ, ʼಯುದ್ಧದ ದುಷ್ಪರಿಣಾಮಗಳು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ವಿಶೇಷವಾಗಿ ಸಣ್ಣ ಪುಟ್ಟ ದೇಶಗಳು ಹೆಚ್ಚು ಸಂಕಷ್ಟ ಅನುಭವಿಸುತ್ತಾರೆ. ಆದ್ದರಿಂದ ಶಾಂತಿ ಮತ್ತು ಸೌಹರ್ದತೆ ಉಳಿಸುವುದು ಅತ್ಯಂತ ಅಗತ್ಯʼ ಎಂದರು.

ರೋಟರಿ ಮಾಜಿ ಡಿಸ್ಟ್ರಿಕ್ಟ್ ಗವರ್ನರ್ ರವಿ ವಾದ್ರಾಮಾನಿ ಮಾತನಾಡಿ, ‌ʼಯುದ್ಧಗಳಿಂದ ಅಮಾಯಕರ ಜೀವಹಾನಿಯಾಗುತ್ತದೆ. ಸಂಕಷ್ಟ ಹಾಗೂ ಮಾನವೀಯ ಮೌಲ್ಯಗಳ ಹಾನಿ ಸಂಭವಿಸುತ್ತದೆ. ಶಾಂತಿಯೇ ಅಭಿವೃದ್ಧಿಗೆ ಮೂಲವಾಗಿದ್ದು, ಅದನ್ನು ಕಾಪಾಡುವುದು ಎಲ್ಲರ ಕರ್ತವ್ಯʼ ಎಂದರು.

ರೊಟೋರಿಯನ್ ಬಸವರಾಜ ಧನ್ನೂರ ಮಾತನಾಡಿ, ʼಒಂಬತ್ತು ಶತಮಾನಗಳ ಹಿಂದೆ ಬಸವಣ್ಣನವರು ಯಾವುದೇ ಯುದ್ಧ ಬೇಡ ಎಂದು ಹೇಳಿ ಪ್ರತಿಯೊಂದು ಪ್ರಾಣಿ, ಪಕ್ಷಿ, ಜೀವಸಂಕುಲದ ಮೇಲೆ ದಯೆ ಇರಬೇಕು ಎಂದು ಹೇಳಿದರು. ಆದರೆ ಇವತ್ತು ಜಗತ್ತಿನಲ್ಲಿ ಎರಡು ದೇಶಗಳಲ್ಲಿ ನಡೆಯುತ್ತಿರುವ ಈ ಯುದ್ಧ ಜಗತ್ತಿನ ಸಾಕಷ್ಟು ಅಮಾಯಕರ ಮೇಲೆ ಪ್ರಭಾವ ಬೀರುತ್ತವೆ. ಈ ಬಸವಣ್ಣನ ನೆಲದಿಂದ ಜಗತ್ತಿಗೆ ಶಾಂತಿಯ ಸಂದೇಶವನ್ನು ನೀಡಬೇಕು ಎಂಬ ಉದ್ದೇಶದಿಂದ ವಿಶ್ವಶಾಂತಿಗಾಗಿ ಶಾಂತಿಯುತ ನಡಿಗೆಯನ್ನು ಹಮ್ಮಿಕೊಳ್ಳಲಾಯಿತುʼ ಎಂದರು.

ಇದನ್ನೂ ಓದಿ : ಬೀದರ್‌ | ನಮ್ಗ ಅನ್ನ ಕೊಡಬೇಡ್ರಿ; ಕುಡಿಯೋಕೆ ನೀರು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ!

ಶಾಂತಿ ನಡಿಗೆಯಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್, ರೋಟರಿ ಅಸಿಸ್ಟೆಂಟ್ ಗವರ್ನರ್ ಹಾವಶೆಟ್ಟಿ ಪಾಟೀಲ್, ನಿತೀನ್, ಬೀದರ್ ಜಿಲ್ಲೆಯ ಎಲ್ಲ ರೋಟರಿ ಕ್ಲಬ್ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಾಹೀನ್ ಶಿಕ್ಷಣ ಸಂಸ್ಥೆಯ ಹಾಗೂ ಸೈನಿಕ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...