ಬೀದರ್‌ | ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ರೂ. ಹಗರಣ: ವಿಶ್ರಾಂತ ಕುಲಪತಿ ಸೇರಿ ಆರು ಮಂದಿ ಬಂಧನ

Date:

ಬೀದರ್ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ‌ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಕಲಿ‌ ಬಿಲ್ ಸೃಷ್ಟಿಸಿ ₹45 ಕೋಟಿ ಹಗರಣ ಮಾಡಿ, ಅಕ್ರಮ‌ ಎಸಗಿರುವ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಪಶು ವೈದ್ಯಕೀಯ ವಿವಿ ವಿಶ್ರಾಂತ ಕುಲಪತಿ, ನಿವೃತ್ತ ಕಂಟ್ರೋಲರ್ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ.

- Advertisement -

ವಿಶ್ರಾಂತ ಕುಲಪತಿ ಎಚ್ ಡಿ ನಾರಾಯಣಸ್ವಾಮಿ, ನಿವೃತ್ತ ಪ್ರಭಾರ ಹಣಕಾಸು ನಿಯಂತ್ರಣಾಧಿಕಾರಿ ಕೆ ಎಲ್ ಸುರೇಶ್, ಎಫ್‌ಡಿಎ ಮೃತ್ಯುಂಜಯ ಹಿರೇಮಠ, ಬೆಂಗಳೂರು ಎಂಟರ್ ಪ್ರೈಸೆಸ್ ಮಾಲೀಕರಾದ ಬೊಪ್ಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಬಂಧಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2017-18ರಲ್ಲಿ ₹45 ಕೋಟಿಗೂ ಅಧಿಕ ಹಣದ ನಕಲಿ ಬಿಲ್ ಸೃಷ್ಟಿಸಿ ಅಕ್ರಮ ಎಸಗಿರುವ ಆರೋಪವಿದೆ. ಈ ಅವಧಿಯಲ್ಲಿ ನಾರಾಯಣಸ್ವಾಮಿ ಕುಲಪತಿ, ಕೆ ಎಲ್ ಸುರೇಶ್ ಕಂಟ್ರೋಲರ್ ಆಗಿದ್ದರು. ವಿವಿ ಎಫ್‌ಡಿಎ ಮೃತ್ಯುಂಜಯ ಹಿರೇಮಠ ಅವರು ಬೆಂಗಳೂರಿನ ಖಾಸಗಿ‌ ಎಂಟರ್ ಪ್ರೈಸೆಸ್ ಜೊತೆಯಲ್ಲಿ ಸೇರಿಕೊಂಡು ಅಕ್ರಮ ಎಸಗಿರುವ ಆರೋಪವಿರುವುದಾಗಿ ತಿಳಿದುಬಂದಿದೆ.

ಪ್ರಕರಣ ಸಂಬಂಧ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು. ಇದರ ಬೆನ್ನಲ್ಲೇ ಸಕ್ರಿಯವಾದ ಲೋಕಾಯುಕ್ತ ಪೊಲೀಸರು ಕೆಲವರನ್ನು ಬೀದರ್ ಹಾಗೂ ಕೆಲ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಬೀದರ್ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | 50 ಮಿಲಿಯನ್ ಸಸಿಗಳ ನೆಡುವ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ಮೊದಲ ಪೈಲಟ್ ಜಿಲ್ಲೆ

ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್, ಐಜಿಪಿ ಎ ಎಸ್ ಸುಬ್ರಹ್ಮಣ್ಯಶ್ವರರಾವ್, ಎಸ್‌ಪಿಗಳಾದ ಬದ್ರಿನಾಥ, ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಬೀದರ್ ಲೋಕಾಯುಕ್ತ ಡಿವೈಎಸ್‌ಪಿ ಹಣಮಂತರಾಯ, ಸಂತೋಷ ರಾಠೋಡ್ ಸೇರಿದಂತೆ ಇತರೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...