ಬೀದರ್‌ | ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

Date:

ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಎಲ್ಲ ವಿಧದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

- Advertisement -

ಈ ಸಂಬಂಧ ಸೋಮವಾರ ಬೀದರ್ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆಗಳ ಮುಖಂಡರು, ರೈತರು, ಕೃಷಿ ಕೂಲಿಕಾರ್ಮಿಕರು ಹಾಗೂ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಬೀದರ್ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಹಲವು ಕಡೆ ಬೆಳೆಗಳು ಸರಿಯಾಗಿ ಬಂದಿಲ್ಲ. ಬೀಜ, ರಸಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಮಾಡಿದ ವೆಚ್ಚವನ್ನೂ ರೈತರು ಮರಳಿ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಟ್ರ್ಯಾಕ್ಟರ್ ಸೇರಿದಂತೆ ಕೃಷಿ ಯಂತ್ರೋಪಕರಣಗಳಿಗಾಗಿ ಸಾಲ ಪಡೆದ ರೈತರು ಕಂತು ಪಾವತಿಸಲು ಸಾಧ್ಯವಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

“ಎಸ್‌ಬಿಐ ಸೇರಿದಂತೆ ವಿವಿಧ ಬ್ಯಾಂಕ್‌ಗಳು ಸಾಲ ಮರುಪಾವತಿಸುವಂತೆ ರೈತರಿಗೆ ಡಿಮ್ಯಾಂಡ್ ನೋಟಿಸ್ ಜಾರಿ ಮಾಡುತ್ತಿದ್ದು, ಸರ್ಫೇಸಿ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಚೊಂಡಿ ಗ್ರಾಮದ ಮಾಣಿಕಪ್ಪ ಸೈಬಣ್ಣ, ಕಂಟೆಪ್ಪ ಸಿದ್ಧಪ್ಪ, ನೀಲಮ್ಮ ಮೇತ್ರೆ, ಜಗದೀಶ್ವರ ಸೈಬಣ್ಣ, ವೈಜಿನಾಥ ಚೊಂಡಿ ಹಾಗೂ ರಾಚಮ್ಮ ಕಂಟೆಪ್ಪ ಸೇರಿದಂತೆ ರೈತರಿಗೆ ನೀಡಿರುವ ನೋಟಿಸ್‌ಗಳನ್ನು ಹಿಂಪಡೆದು, ಅವರ ಸಾಲಗಳನ್ನು ಮನ್ನಾ ಮಾಡಬೇಕು. ತಮಿಳುನಾಡು ಸರ್ಕಾರದ ಮಾದರಿಯಲ್ಲಿ ರಾಜ್ಯದ ರೈತರ ಎಲ್ಲ ವಿಧದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು” ಎಂದು ಆಗ್ರಹಿಸಿದರು.

“ಮಳೆ ಕೊರತೆಯಿಂದ ಉಂಟಾಗಿರುವ ಬರಗಾಲ ಪರಿಸ್ಥಿತಿಯನ್ನು ಪರಿಗಣಿಸಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಬ್ಯಾಂಕ್‌ಗಳು ರೈತರಿಗೆ ಡಿಮ್ಯಾಂಡ್ ನೋಟಿಸ್ ನೀಡುವ ಮೂಲಕ ಕಿರುಕುಳ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ‘ಸಿ’ ಫಾರಂ ನೀಡಬೇಕು. ಫಾರಂ ನಂ.57ರ ಅರ್ಜಿಗಳನ್ನು ಸ್ವೀಕರಿಸಲು ರಾಜ್ಯದ ಎಲ್ಲ ತಹಸೀಲ್ದಾರರಿಗೆ ಸರ್ಕಾರ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಹಾಗೂ ಕಾರ್ಮಿಕ ಕಾಯ್ದೆಗಳಿಗೆ ಮಾಡಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು. ರಾಜ್ಯ ಸರ್ಕಾರ ಅಕುಶಲ ಕಾರ್ಮಿಕರಿಗೆ ತಿಂಗಳಿಗೆ ₹24 ಸಾವಿರ ಹಾಗೂ ಕುಶಲ ಕಾರ್ಮಿಕರಿಗೆ ₹32 ಸಾವಿರ ಕನಿಷ್ಠ ವೇತನ ನಿಗದಿಪಡಿಸಿದ್ದರೂ, ಅದು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಅಂಗನವಾಡಿ ಬಿಸಿಯೂಟ ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರನ್ನು ಕ್ರಮಬದ್ಧಗೊಳಿಸಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ದುರುಪಯೋಗದ ಕುರಿತು ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಅಪರಾಧಿಕ ಪ್ರಕರಣ ದಾಖಲಿಸಬೇಕು. ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ಪಿಂಚಣಿ ಸೇರಿದಂತೆ ಬಾಕಿ ಇರುವ ಎಲ್ಲ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಂಘಟಕರು ಒತ್ತಾಯಿಸಿದ್ದಾರೆ.

ಶಾಸಕರು ಹಾಗೂ ಸಂಸದರ ವೇತನ ಮತ್ತು ನಿವೃತ್ತಿ ವೇತನ ವ್ಯವಸ್ಥೆಯನ್ನು ರದ್ದುಪಡಿಸಬೇಕು. ಇಲ್ಲವಾದಲ್ಲಿ ಪ್ರತಿಯೊಬ್ಬ ರೈತ ಹಾಗೂ ಕಾರ್ಮಿಕರಿಗೆ ತಿಂಗಳಿಗೆ ₹10 ಸಾವಿರ ಗೌರವಧನ ನೀಡುವಂತೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಬೇಕು. ಮತದಾರರಿಗೆ ತಮ್ಮ ಪ್ರತಿನಿಧಿಗಳನ್ನು ಅವಧಿ ಪೂರ್ವವಾಗಿ ಹಿಂದಕ್ಕೆ ಕರೆಸಿಕೊಳ್ಳುವ ‘ರೈಟ್ ಟು ರಿಕಾಲ್’ ಅಧಿಕಾರ ನೀಡುವಂತೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಬೇಕು ಎಂಬ ಒತ್ತಾಯಿಸಿದರು.

ಇದನ್ನೂ ಓದಿ : ಹುಮನಾಬಾದ್ | ನದಿಗೆ ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

ಈ ಸಂದರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಮುಖಂಡರಾದ ಬಾಬುರಾವ ಹೊನ್ನಾ, ಶಿವರಾಜ ಪಾಟೀಲ, ಕೋಂಡಿಬಾ ಪಾಂಡ್ರೆ, ಅರುಣ ಪಟೇಲ್, ಮಾರುತಿ ಬೌದ್ಧೆ, ಶಿವರಾಯ ಮುದಾಳೆ, ವೀರರೆಡ್ಡಿ ಪಾಟೀಲ್, ಮಲ್ಲಿಕಾರ್ಜುನ ಸ್ವಾಮಿ, ಜೈಶೀಲ ಕುಮಾರ, ನಜೀರ ಅಹ್ಮದ್, ಎಂ.ಡಿ. ಖಮರ ಪಟೇಲ್, ವೀರಶೆಟ್ಟಿ ಒಟಂಬೆ, ರಾಜಕುಮಾರ ಬಗದಲ್, ರಾಮಣ್ಣ ಅಲ್ಮಾಸಪೂರ, ಶೀಲಾ ಸಾಗರ, ಶಫಿಯೋದ್ದೀನ್ ಗೋಲ್ಡ್, ಶಫಾಯತ್ ಅಲಿ, ಪ್ರಭು ತಗಣಿಕರ್, ಚಂದ್ರಕಲಾ, ಸುಜಾತಾ, ಮಂಗಲಾ, ಕಲ್ಲಪ್ಪ ಸೈಬಣ್ಣ, ವೈಜಿನಾಥ ಹಣಮಂತಪ್ಪ, ರಾಚಮ್ಮ ಕಂಟೆಪ್ಪ, ಬಸವರಾಜ ಪಟೀಲ್, ಬಂಡೆಮ್ಮಾ, ಮೌಲಾನಾ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...