ಬೀದರ್‌ | ರೈತರ ಸಂಪೂರ್ಣ ಸಾಲಮನ್ನಾಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

Date:

ರೈತರ ಎಲ್ಲಾ ವಿಧದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ‌ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.

- Advertisement -

ಈ ಸಂಬಂಧ‌ ಮೋರ್ಚಾದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಮಂಗಳವಾರ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ʼಹಳ್ಳಿಖೇಡ(ಬಿ) ಸಮೀಪದ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಜಿಲ್ಲೆಯ ಅನೇಕ ರೈತರು ಷೇರುಗಳನ್ನು ಖರೀದಿಸಿದ್ದು, ಎರಡು ವರ್ಷಗಳಿಂದ ಸರ್ಕಾರದ ಅನುಮತಿ ಇಲ್ಲದೆ ಕಾರ್ಖಾನೆ ಮುಚ್ಚಲ್ಪಟ್ಟಿರುವುದರಿಂದ ರೈತರು, ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಬಿಎಸ್‌ಎಸ್‌ಕೆ ಕಾರ್ಖಾನೆ ವಶಕ್ಕೆ ಪಡೆದು ಪುನರಾರಂಭಿಸಬೇಕುʼ ಎಂದು ಒತ್ತಾಯಿಸಿದರು.

ʼಇತ್ತೀಚೆಗೆ ಅತಿವೃಷ್ಠಿ-ಅನಾವೃಷ್ಠಿಯಿಂದಾಗಿ ಬೆಳೆಗಳು ಹಾನಿಗೊಳಗಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಳೆದ ಬೆಳೆಗಳಿಗೆ ಸಮರ್ಪಕ ಮತ್ತು ವೈಜ್ಞಾನಿಕ ಬೆಲೆ ದೊರೆಯುತ್ತಿಲ್ಲ. ಹೀಗಾಗಿ ಸರ್ಕಾರವು ರೈತರ ಎಲ್ಲಾ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ‌ : ಉರ್ದು ಭಾಷೆಯಲ್ಲಿ ಲಾವಣ್ಯಗೆ 125ಕ್ಕೆ 125 ಅಂಕ

ಈ ಸಂದರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಗೌರವಾಧ್ಯಕ್ಷ ಶಿವರಾಯ ಮುದಾಳೆ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ರಾಜ್ಯ ಉಪಾಧ್ಯಕ್ಷ ಬಾಬುರಾವ ಹೊನ್ನಾ ಸೇರಿದಂತೆ ಮೋರ್ಚಾದ ಪ್ರಮುಖರಾದ ವೀರಾರೆಡ್ಡಿ ಪಾಟೀಲ್ , ಮಾರುತಿ ಬೌದ್ಧೆ, ಖಾಸಿಮ್ ಅಲಿ, ಶಿವರಾಜ ಪಾಟೀಲ್ ಅತಿವಾಳ, ಖಮರ್ ಪಟೇಲ್, ಸೂರ್ಯಕಾಂತ ಮಟಕಟ್ಟಿ, ನಜೀರ್ ಅಹ್ಮದ್, ಶಫಾಯತ್ ಅಲಿ, ಜೈಶೀಲಕುಮಾರ, ಅರುಣ್ ಪಟೇಲ್, ನನ್ನೇಸಾಬ್ ಟಿ.ಮಿರ್ಜಾಪೂರ ಹಾಗೂ ಮುನಿರೋದ್ದೀನ್ ಬಗದಲ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ, ತಾಂತ್ರಿಕ ಕೌಶಲ್ಯ ಬೆಳೆಸುವುದು ಅಗತ್ಯ: ಆರ್.ಎಸ್ ಬುರಡಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವುದರ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ...

ಯುಪಿ ಎಂಎಲ್‌ಸಿ ಚುನಾವಣೆ: ಪ್ರಧಾನಿ ಮೋದಿ ಕ್ಷೇತ್ರ ವಾರಾಣಸಿಯಲ್ಲಿ ಎಸ್‌ಪಿಗೆ ಭರ್ಜರಿ ಜಯ

ಉತ್ತರ ಪ್ರದೇಶ ವಿಧಾನ ಪರಿಷತ್ (ಎಂಎಲ್‌ಸಿ) ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ...

ಅಗ್ರಿಗೋಲ್ಡ್ ಹೂಡಿಕೆದಾರರಿಗೆ ಹೊಸ ಭರವಸೆ! ಬಾಂಡ್‌ಗಳ ಪರಿಶೀಲನೆಗೆ 9 ಕೇಂದ್ರಗಳ ಸ್ಥಾಪನೆ

ದಶಕದ ಹಿಂದೆ ದಕ್ಷಿಣ ಭಾರತದ ಲಕ್ಷಾಂತರ ಹೂಡಿಕೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದ ಬಹುಕೋಟಿ...