ಬೀದರ್‌ | ಸಂತ ಸೇವಾಲಾಲ್‌ ವಿಚಾರಧಾರೆ ಯುವ ಜನಾಂಗಕ್ಕೆ ದಾರಿದೀಪ : ಸಚಿವ ಈಶ್ವರ ಖಂಡ್ರೆ

Date:

ಸಂತ ಸೇವಾಲಾಲ್ ಮಾಹಾರಾಜರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅಭಿಪ್ರಾಯಪಟ್ಟರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ ಸಂತ ಸೇವಾಲಾಲ್‌ ಅವರ 287ನೇ ಜಯಂತ್ಯೋತ್ಸವ ಅಂಗವಾಗಿ ಸಂತ ಸೇವಾಲಾಲ್ ಮಹಾರಾಜ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼಅನ್ಯಾಯ, ಅಂಧಶ್ರದ್ಧೆ ವಿರುದ್ಧ ಹೋರಾಡಿ ಸಮಾನತೆ, ಶಿಕ್ಷಣ ಹಾಗೂ ಆತ್ಮಗೌರವದ ಸಂದೇಶ ನೀಡಿದ ಸಂತ ಸೇವಾಲಾಲ್ ಮಹಾರಾಜರ ಆದರ್ಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಸಂತ ಸೇವಾಲಾಲ್ ಮಹಾರಾಜರು ಮಹಾನ್ ಪವಾಡ ಪುರುಷರಾಗಿದ್ದರು, ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಮೂಢನಂಬಿಕೆ, ಕೆಟ್ಟ ಆಚರಣೆಗಳ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಿಗೆ ತಿಳಿವಳಿಕೆ ಮೂಡಿಸಿದರುʼ ಎಂದರು.

ಸಮಾಜದ ಐಕ್ಯತೆ ಮತ್ತು ಸಹಬಾಳ್ವೆಗೆ ಪ್ರೇರೇಪಿಸಿದರು. ಬ್ರಿಟಿಷರು ತೆರಿಗೆ ಹೆಚ್ಚಳ ಮಾಡಿದಾಗ ವೀರ ಸೇನಾನಿಯಾಗಿ ಹೋರಾಡಿದರು. ಯಾವುದೇ ಮಹಾನ ಪುರುಷರು ಒಂದೇ ಜಾತಿಗೆ ಸಿಮಿತವಿಲ್ಲ. ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರುʼ ಎಂದು ತಿಳಿಸಿದರು.

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸೇರಿದಂತೆ ಜಿಲ್ಲಾ ಬಂಜಾರಾ ಸಮಾಜದ ಅಧ್ಯಕ್ಷ ಗೋವರ್ಧನ ರಾಠೋಡ, ಮುಖಂಡರಾದ ಬಸವರಾಜ ಪವಾರ, ಮಾಣಿಕರಾವ ಪವಾರ, ವೀರಶೆಟ್ಟಿ ರಾಠೋಡ, ಗೋಪಾಲಸಿಂಗ ರಾಠೋಡ, ಕೀಶನರಾವ ರಾಠೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಮಾಜಕ್ಕೆ ಶಾಂತಿಯ ಸಂದೇಶ ಸಾರಿದ ಸಂತ ಸೇವಾಲಾಲ್‌ : ಸಚಿವ ರಹೀಂ ಖಾನ್

ಸಂತ ಸೇವಾಲಾಲ್ ಮಹಾರಾಜರು ಇಡೀ ಸಮಾಜಕ್ಕೆ ಒಳಿತನ್ನು ಬಯಸಿ ಶಾಂತಿಯ ಸಂದೇಶ ಸಾರಿದವರು. ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸಂತ ಸೇವಾಲಾಲ್‌ ಅವರ 287ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

WhatsApp Image 2026 02 15 at 6.56.09 PM

ʼಸಂತ ಸೇವಾಲಾಲ್‌ ಅವರಂತಹ ದಾರ್ಶನಿಕರು ಒಂದು ಜಾತಿಗೆ ಸೀಮಿತರಲ್ಲ. ಅವರು ಬಂಜಾರ ಸಮಾಜ ಸುಧಾರಣೆ ಮತ್ತು ಅಭಿವೃದ್ಧಿಗಾಗಿ ಬಹಳಷ್ಟು ಉತ್ತಮ ಸಂದೇಶ ನೀಡಿದ್ದಾರೆ. ಅವರ ತತ್ವಾದರ್ಶ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಶಿಕ್ಷಿತರಾದರೆ ಮಾತ್ರ ಸಮಾಜ ಏಳಗೆಯಾಗಲು ಸಾಧ್ಯ. ಎಲ್ಲರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕುʼ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮರಖಲ್ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಬಳವಂತರಾವ್ ರಾಥೋಡ್ ಅವರು ಸಂತ ಸೇವಾಲಾಲ್ ಮಹಾರಾಜರ ಕುರಿತು ಅತಿಥಿ ಉಪನ್ಯಾಸ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಸಂತ ಸೇವಲಾಲ್ ಮಾಹಾರಾಜ ಅವರ ಭಾವಚಿತ್ರ ಮೆರವಣಿಗೆಯು ನಗರದ ಛತ್ರಪತಿ ಶಿವಾಜಿ ವೃತ್ತ, ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ಡಾ.ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದಿಂದ ಮಾರ್ಗವಾಗಿ ರಂಗಮಂದಿರ ನಡೆಯಿತು.

ಇದನ್ನೂ ಓದಿ : ಔರಾದ್‌ | ಸಮಾನತೆ ಸಂದೇಶ ಸಾರಿದ ಸಂತ ಸೇವಾಲಾಲ್‌ : ಶಾಸಕ ಪ್ರಭು‌ ಚವ್ಹಾಣ

ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಬಂಜಾರಾ ಸಮಾಜದ ಅಧ್ಯಕ್ಷ ಗೋವರ್ಧನ ರಾಠೋಡ, ಮುಖಂಡರಾದ ಬಸವರಾಜ ಪವಾರ, ಮಾಣಿಕರಾವ ಪವಾರ, ವೀರಶೆಟ್ಟಿ ರಾಠೋಡ, ಗೋಪಾಲಸಿಂಗ ರಾಠೋಡ, ಕೀಶನರಾವ ರಾಠೋಡ ಸೇರಿದಮತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...