ಬೀದರ್‌ | ತೇವಾಂಶ ಸಂರಕ್ಷಣೆಯಿಂದ ಬೆಳೆ ಉಳಿಸಿಕೊಳ್ಳಿ: ರೈತರಿಗೆ ಕೃಷಿ ವಿಜ್ಞಾನಿಗಳ ಸಲಹೆ

Date:

ಬೀದರ್ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಕೊರತೆಯಿಂದ ತೊಗರಿ, ಸೋಯಾಬೀನ್, ಹೆಸರು, ಉದ್ದು ಸೇರಿದಂತೆ ಪ್ರಮುಖ ಖರೀಫ್ ಬೆಳೆಗಳ ಬೆಳವಣಿಗೆ ಕುಂಠಿತವಾಗಿದ್ದು, ರೈತರು ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅನುಸರಿಸಿ ಮಣ್ಣಿನ ತೇವಾಂಶವನ್ನು ಸಂರಕ್ಷಿಸುವ ಮೂಲಕ ಬೆಳೆಗಳನ್ನು ಉಳಿಸಿಕೊಳ್ಳಬೇಕು ಎಂದು ಬೀದರ ಕೃಷಿ ವಿಜ್ಞಾನ ಕೇಂದ್ರ (ಐಸಿಎಆರ್–ಕೆವಿಕೆ) ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ರಾಜಶೇಖರ ಬಸನಾಯಕ ತಿಳಿಸಿದ್ದಾರೆ.

- Advertisement -

ಹುಮನಾಬಾದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕ್ಷೇತ್ರ ಭೇಟಿಯ ಸಂದರ್ಭದಲ್ಲಿ ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿದ ವಿಜ್ಞಾನಿಗಳ ತಂಡ ರೈತರಿಗೆ ಅಗತ್ಯ ತಾಂತ್ರಿಕ ಸಲಹೆಗಳನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಮಳೆಯ ಕೊರತೆಯಿಂದ ಉಂಟಾಗಿರುವ ತೇವಾಂಶದ ಅಭಾವವನ್ನು ನಿವಾರಿಸಲು ಹೊಲಗಳಲ್ಲಿ ಕಳೆ ನಿಯಂತ್ರಣ, ಸಾಲುಗಳ ಮಧ್ಯೆ ಗುಂಟಿ ಹೊಡೆಯುವುದು, ಮಣ್ಣಿನ ಮೇಲ್ಭಾಗದಲ್ಲಿ ಕವಚ (ಮಲ್ಚಿಂಗ್) ಮಾಡುವುದು ಹಾಗೂ ಅಗತ್ಯವಿದ್ದಲ್ಲಿ ಜೀವಾಮೃತ ಅಥವಾ ಪೋಷಕಾಂಶಗಳ ಸಿಂಪಡಣೆ ಮಾಡುವಂತೆ ರೈತರಿಗೆ ಸಲಹೆ ನೀಡಲಾಯಿತು.

ತೊಗರಿ ಬೆಳೆಯಲ್ಲಿ 19:19:19 ನೀರಿನಲ್ಲಿ ಕರಗುವ ಗೊಬ್ಬರವನ್ನು ಪ್ರತಿ ಲೀಟರ್ ನೀರಿಗೆ 4 ಗ್ರಾಂ ಪ್ರಮಾಣದಲ್ಲಿ ಬೆರೆಸಿ ಸಿಂಪಡಿಸಿದರೆ ಸಸ್ಯಗಳ ಬೆಳವಣಿಗೆ ಉತ್ತಮವಾಗುತ್ತದೆ. ಅಗತ್ಯವಿದ್ದಲ್ಲಿ 13:0:45 ಗೊಬ್ಬರವನ್ನು ಪ್ರತಿ ಲೀಟರ್ ನೀರಿಗೆ 5 ರಿಂದ 10 ಗ್ರಾಂ ಪ್ರಮಾಣದಲ್ಲಿ ಬೆರೆಸಿ ಸಿಂಪಡಿಸುವುದರಿಂದ ಬೆಳೆ ಬರದ ಒತ್ತಡವನ್ನು ತಡೆದುಕೊಳ್ಳಲು ಸಹಕಾರಿಯಾಗುತ್ತದೆ. ಸೂಕ್ಷ್ಮ ಪೋಷಕಾಂಶಗಳ ಸಿಂಪಡಣೆಯಿಂದ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ತಿಳಿಸಿದರು.

ಮಳೆಯ ಅಭಾವದ ಸಂದರ್ಭದಲ್ಲಿ ರೋಗ ಹಾಗೂ ಕೀಟಗಳ ಹಾವಳಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ತಮ್ಮ ಹೊಲಗಳನ್ನು ನಿಯಮಿತವಾಗಿ ಪರಿಶೀಲಿಸಿ, ಕೃಷಿ ವಿಜ್ಞಾನಿಗಳ ಸಲಹೆಯಂತೆ ಸೂಕ್ತ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಣ್ಣು ವಿಜ್ಞಾನಿ ಡಾ.ಚಂದ್ರಕಾಂತ, ಸಸ್ಯರೋಗ ವಿಜ್ಞಾನಿ ಡಾ.ಶಿವಕುಮಾರ, ಸಹಾಯಕ ಕೃಷಿ ನಿರ್ದೇಶಕ (ವಿಷಯ ತಜ್ಞ) ಡಾ. ಪ್ರೇಮ್‌ದಾಸ್, ಉಪ ಯೋಜನಾ ನಿರ್ದೇಶಕರು ರೈತ ಸಂಪರ್ಕ ಕೇಂದ್ರಗಳಲ್ಲಿ ಲಘು ಪೋಷಕಾಂಶಗಳು ಮಾರಾಟಕ್ಕೆ ಲಭ್ಯವಿರುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಅಧಿಕಾರಿಗಳಾದ ಡಾ.ಶರಣಕುಮಾರ ಹಾಗೂ ಹುಮನಾಬಾದ ಸಹಾಯಕ ಕೃಷಿ ನಿರ್ದೇಶಕ ಡಾ.ರಾಜಕುಮಾರ್ ಎಕ್ಕಳ್ಳಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಔರಾದ-ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಶಾಸಕ ಪ್ರಭು ಚವ್ಹಾಣ ಆಗ್ರಹ

ಹೆಚ್ಚಿನ ಮಾಹಿತಿಗಾಗಿ ಬೀದರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ರಾಜಶೇಖರ ಬಸನಾಯಕ ಅವರನ್ನು 9480696318 ಹಾಗೂ 9711330755 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...