ಬೇಸಿಗೆ ರಜೆ ಬಳಿಕ ಜೂನ್ 1ರಿಂದ ಜಿಲ್ಲಾದ್ಯಂತ ಶಾಲೆಗಳು ಆರಂಭವಾಗಿದ್ದು, ಮಕ್ಕಳಲ್ಲಿ ಶಾಲಾ ಪ್ರಾರಂಭದ ಸಂಭ್ರಮ ಜೋರಾಗಿದೆ. ಶಾಲೆಗಳು ಪುಷ್ಪ, ತಳಿರು-ತೋರಣಗಳಿಂದ ಅಲಂಕರಿಸಲಾಗಿತ್ತು. ಮೊದಲ ದಿನ ಶಾಲೆ ಅಂಗಳಕ್ಕೆ ಆಗಮಿಸಿದ ಮಕ್ಕಳ ಮೇಲೆ ಹೂಮಳೆಗರೆದು ಪ್ರೀತಿಯಿಂದ ಸ್ವಾಗತಿಸಿದರು.
- Advertisement -
ಭಾಲ್ಕಿ ತಾಲೂಕಿನ ದಾಡಗಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ತರಗತಿಗಳು ಸಂಭ್ರಮದಿಂದ ಆರಂಭಗೊಂಡವು. ಶಾಲೆಯ ಹಿರಿಯ ವಿದ್ಯಾರ್ಥಿಗಳು ಡ್ರಮ್ ಬಾರಿಸಿ ಕಿರಿಯ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಶಿಕ್ಷಕರು ಮಕ್ಕಳ ಮೇಲೆ ಪುಷ್ಪವೃಷ್ಟಿಗೈದು, ಸಿಹಿ ತಿನ್ನಿಸಿ ತರಗತಿಗೆ ಬರಮಾಡಿಕೊಂಡರು.
ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...
ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...
ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...
ಬೀದರ್ ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಉತ್ಸಾಹ….ಉಲ್ಲಾಸ ಮನೆಮಾಡಿತು. ಶಿಕ್ಷಕರು, ಸಿಬ್ಬಂದಿ, ಪೋಷಕರು ಆತ್ಮೀಯ ಸ್ವಾಗತಿಸಿದರೆ, ಮಕ್ಕಳು ಮೊದಲ ದಿನ ಶಾಲಾ ಅಂಗಳಕ್ಕೆ ಕಾಲಿಟ್ಟು ಪುಳಕಿತಗೊಂಡರು.
ಶಿಕ್ಷಕರು ಮೊದಲ ದಿನವೇ ಮಕ್ಕಳಿಗೆ ಹೊಸ ಪಠ್ಯಪುಸ್ತಕ, ಸಮವಸ್ತ್ರ ನೀಡಿದಾಗ ಮಕ್ಕಳ ಸಂತೋಷಕ್ಕೆ ಪಾರವೇ ಇರಲಿಲ್ಲ. ಶಾಲೆಗಳಲ್ಲಿ ಹಬ್ಬದ ಸಂಭ್ರಮ ಕಳೆ ಎಲ್ಲೆಡೆ ಮನೆಮಾಡಿತು.
ಭಾಲ್ಕಿ ತಾಲೂಕಿನ ದಾಡಗಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಆರಂಭೋತ್ಸವ ಸಂಭ್ರಮದಿಂದ ನಡೆಯಿತುಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪುಷ್ಪವೃಷ್ಟಿ, ಹೂಗುಚ್ಛ ನೀಡಿ ಸ್ವಾಗತಿಸಿದರು.ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹೂಮಳೆಗರೆದು ಸ್ವಾಗತಿಸಿ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಿಸಿದರು.ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭೋತ್ಸವ ಜರುಗಿತು.ಔರಾದ್ ತಾಲೂಕಿನ ಮೇಡಪಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆರಂಭೋತ್ಸವ ಸಂಭ್ರಮದಿಂದ ನಡೆಯಿತು.ಭಾಲ್ಕಿ ತಾಲೂಕಿನ ರಾಚಪ್ಪಗೌಡಗಾಂವ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆರಂಭೋತ್ಸವ ಸಂಭ್ರಮದಿಂದ ನಡೆಯಿತು. ಮಕ್ಕಳಿಗೆ ಪುಷ್ಪವೃಷ್ಟಿಗೈದು ಸ್ವಾಗತಿಸಿ, ಪಠ್ಯಪುಸ್ತಕ ವಿತರಿಸಿದರು.ಬೀದರ ನಗರದ ಸರಸ್ವತಿ ಶಿಕ್ಷಣ ವಿಕಾಸ ಸಮಿತಿ (ರಿ) ಸಂಚಾಲಿತ ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.