ಬೀದರ್‌ | ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : 36 ಪರೀಕ್ಷಾ ಕೇಂದ್ರ; ವೆಬ್‌ಕಾಸ್ಟಿಂಗ್ ಕಣ್ಗಾವಲು

Date:

ಬೀದರ್ ಜಿಲ್ಲೆಯಲ್ಲಿನ‌ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ, ಶಿಸ್ತುಬದ್ಧವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ʼಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ಪರೀಕ್ಷೆಗಾಗಿ ಜಿಲ್ಲೆಯಾದ್ಯಂತ 199 ಕಾಲೇಜುಗಳಲ್ಲಿ ಒಟ್ಟು 36 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆʼ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬೀದರ (15), ಭಾಲ್ಕಿ (5), ಔರಾದ್(ಬಿ) (3), ಹುಮನಾಬಾದ್ (8), ಬಸವಕಲ್ಯಾಣ (5) ಪರೀಕ್ಷಾ ಕೇಂದ್ರಗಳಿವೆ. ಜಿಲ್ಲೆಯಲ್ಲಿ ಒಟ್ಟು 21,856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪ್ರವೇಶ ಪತ್ರಗಳನ್ನು ಆನ್‌ಲೈನ್ ಮೂಲಕ ಕಾಲೇಜುಗಳಿಗೆ ವಿತರಿಸಲಾಗಿದೆʼ ಎಂದು ಅವರು ತಿಳಿಸಿದರು.

ʼಪ್ರತಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ನಿಯಮಾನುಸಾರ ಪರೀಕ್ಷೆ ನಡೆಸಬೇಕು. ವಿಶೇಷವಾಗಿ ಸೂಕ್ಷ್ಮ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಬೇಕು. ವಿದ್ಯಾರ್ಥಿಗಳಿಗೆ ಸಮರ್ಪಕ ಆಸನ ವ್ಯವಸ್ಥೆ ಕಲ್ಪಿಸಬೇಕು. ನಕಲು ಅಥವಾ ಸಾಮೂಹಿಕ ನಕಲು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝೆರಾಕ್ಸ್, ಕಂಪ್ಯೂಟರ್ ಹಾಗೂ ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಿಸುವಂತೆ ಕ್ರಮ ಕೈಗೊಳ್ಳಲಾಗುವುದುʼ ಎಂದರು.

ಮಾರ್ಗಸೂಚಿಯಂತೆ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಮತ್ತು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಫೋನ್, ಪೆನ್‌ಡ್ರೈವ್, ಇಯರ್‌ಫೋನ್, ಮೈಕ್ರೋಫೋನ್, ಬ್ಲೂಟೂತ್ ಸಾಧನಗಳು ಹಾಗೂ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತರಲು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಮೊಬೈಲ್ ಬಳಕೆ ಮತ್ತು ಛಾಯಾಚಿತ್ರ ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಹೊರಭಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅವರು ಸೂಚಿಸಿದರು.

ʼಪರೀಕ್ಷೆ ಪಾರದರ್ಶಕವಾಗಿ ನಡೆಯಲು ಮುಖ್ಯ ಅಧೀಕ್ಷಕರು ಕೊಠಡಿ ಮೇಲ್ವಿಚಾರಕರೊಂದಿಗೆ ಮುಂಚಿತ ಸಭೆ ನಡೆಸಿ ನಿಯಮಗಳನ್ನು ತಿಳಿಸಬೇಕು. ಸುಸೂತ್ರ ಪರೀಕ್ಷೆಗೆ ಪೊಲೀಸ್ ಇಲಾಖೆ ಹಾಗೂ ಖಜಾನೆ ಇಲಾಖೆಯ ಸಹಕಾರ ಪಡೆಯಲಾಗಿದೆ. ಪರೀಕ್ಷಾ ಕೇಂದ್ರಗಳ ಹೊರಭಾಗದಲ್ಲಿ ಅನಾವಶ್ಯಕ ಜನಸಂದಣಿ ಆಗದಂತೆ ಪೊಲೀಸ್ ಇಲಾಖೆ ನಿಗಾ ವಹಿಸಲಿದೆ. ಯಾವುದೇ ದೂರುಗಳಿದ್ದಲ್ಲಿ ತಕ್ಷಣ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಕುರಿ, ಮೇಕೆ ಘಟಕ ಸ್ಥಾಪನೆ ಯೋಜನೆಗೆ ಅರ್ಜಿ ಆಹ್ವಾನ

ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್, ಪೊಲೀಸ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಮತ್ತು ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20...