ಬೀದರ್‌ | ದ್ವಿತೀಯ ಪಿಯುಸಿ ಪರೀಕ್ಷೆ : ಮೊದಲ ದಿನ 1,087 ವಿದ್ಯಾರ್ಥಿಗಳು ಗೈರು

Date:

ಬಹು ನಿರೀಕ್ಷೆಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಶನಿವಾರ (ಫೆ.28) ಆರಂಭವಾಗಿದ್ದು, ಜಿಲ್ಲೆಯಾದ್ಯಂತ 199 ಕಾಲೇಜುಗಳಲ್ಲಿ 36 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 1,087 ವಿದ್ಯಾರ್ಥಿಗಳು ಗೈರು ಹಾಜರಾದರು.

- Advertisement -

ಮೊದಲ ದಿನ ಕನ್ನಡ ಹಾಗೂ ಅರೇಬಿಕ್‌ ಭಾಷೆಯ ಪತ್ರಿಕೆ ಎರಡೂ ಸೇರಿ ಒಟ್ಟು 10,840 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 9,753 ವಿದ್ಯಾರ್ಥಿಗಳು ಹಾಜರಾದರೆ, 1,087 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್‌ ಅವರು ಬೀದರ್‌ ನಗರದಲ್ಲಿರುವ ಜ್ಞಾನ ಸುಧಾ ಕಾಲೇಜು, ಶಾಹು ಮಹಾರಾಜ್‌ ಕಾಲೇಜು ಹಾಗೂ ಆರ್.ಆರ್.ಕೆ. ಪಿಯು ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊದಲ ದಿನ ಜಿಲ್ಲೆಯ ಯಾವೊಂದು ಕೇಂದ್ರದಲ್ಲೂ ನಕಲು ಪ್ರಕರಣಗಳು ವರದಿಯಾಗಿಲ್ಲ. ಪರೀಕ್ಷೆಗಳು ಸುಗಮವಾಗಿ ಜರುಗಿದವು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಾಬಾದಕರ್‌ ʼಈದಿನʼಕ್ಕೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಚಕ್ರ ಎಸೆತ : ಅಂಬೇಡ್ಕರ್‌ ವಸತಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ...

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...