ಬೀದರ್‌ | ಆ.26ರಿಂದ ಸೀರತ್ ಅಭಿಯಾನ, ವಿವಿಧ ಕಾರ್ಯಕ್ರಮ ಆಯೋಜನೆ

Date:

ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ಆಗಸ್ಟ್ 26 ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯದಾದ್ಯಂತ ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ) ಕುರಿತು ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.

- Advertisement -

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜಮಾ ಅತೆ ಇಸ್ಲಾಮಿ ಹಿಂದ್ ರಾಜ್ಯ ಸಲಹಾ ಮಂಡಳಿ ಸದಸ್ಯ ಮುಹಮ್ಮದ್ ಆಸಿಫುದ್ದೀನ್ ಹಾಗೂ ಬೀದರ್ ಘಟಕದ ಮಾಧ್ಯಮ ಉಪ ಸಂಚಾಲಕ ಮುಹಮ್ಮದ್ ನಿಝಾಮುದ್ದೀನ್ ಅಭಿಯಾನ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಅಭಿಯಾನದ ಪ್ರಯುಕ್ತ ಬೀದರ್ ನಗರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಅಭಿಯಾನ ಅವಧಿಯಲ್ಲಿನ ಎರಡು ಶುಕ್ರವಾರ ಮಸೀದಿಗಳಲ್ಲಿ ಪ್ರವಚನ ಜರುಗಲಿದೆ. ಪ್ರವಾದಿ ಮುಹಮ್ಮದ್(ಸ) ರ ಕುರಿತ ಮಾನವ ಮನಸ್ಸಿನ ಕೃಷಿಕ ಮನದೊಡೆಯ ಮುಹಮ್ಮದ್(ಸ) ಹಾಗೂ ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ) ಕೃತಿ ಬಿಡುಗಡೆ ಆಗಲಿವೆ. ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನವಾದ ಆಗಸ್ಟ್ 26 ರಂದು ನಗರದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದು” ಎಂದರು.

ಆಗಸ್ಟ್ 30ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಬಹುಭಾಷಾ ಕವಿಗೋಷ್ಠಿ ಆಯೋಜಿಸಲಾಗುವುದು. ಇದೇ ಸ್ಥಳದಲ್ಲಿ ಸೆಪ್ಟೆಂಬರ್ 9ರಂದು ಸಂಜೆ 7ಕ್ಕೆ ‘ಮೇಜಿನ ಮಾತು’ ನಡೆಸಲಾಗುವುದು. ಸಾರ್ವಜನಿಕರನ್ನು ವೈಯಕ್ತಿಕವಾಗಿ ಭೇಟಿಯಾಗಿ ಪ್ರವಾದಿ ಮುಹಮ್ಮದ್(ಸ)ರ ಮಡೀಚಿಕೆ ಹಾಗೂ ಸೀರತ್ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

WhatsApp Image 2026 08 14 at 11.58.13 AM 6

ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11ಕ್ಕೆ ಬೀದರ್‌ನ ವಿಜ್ಡಮ್ ಕಾಲೇಜಿನಲ್ಲಿ 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸಾಮಾಜಿಕ ಕ್ರಾಂತಿಯ ಜ್ಯೋತಿ- ಪ್ರವಾದಿ ಮುಹಮ್ಮದ್ (ಸ) ಕುರಿತು ಹಾಗೂ ಪಿಯುಸಿಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ‘ಆರ್ಥಿಕ ಕ್ರಾಂತಿಯ ಜ್ಯೋತಿ-ಪ್ರವಾದಿ ಮುಹಮ್ಮದ್ (ಸ)’ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುವುದು. ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ಕ್ರಮವಾಗಿ ₹5 ಸಾವಿರ, ₹3 ಸಾವಿರ ಹಾಗೂ ₹2 ಸಾವಿರ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ʼಶುದ್ಧೀಕರಣʼ ಮಾನವ ಸಮಾಜ ತಲೆತಗ್ಗಿಸುವ ಕೃತ್ಯ

ಪ್ರವಾದಿ ಮುಹಮ್ಮದ್(ಸ)ರ ಜೀವನ ಹಾಗೂ ಸಂದೇಶಗಳನ್ನು ಜನರಿಗೆ ತಿಳಿಸುವುದು, ಪ್ರವಾದಿ ಅವರ ಕುರಿತ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ಸಮಾಜದಲ್ಲಿ ಸೌಹಾರ್ದತೆ ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಹೇಳಿದರು.
ಅಭಿಯಾನದ ಯಶಸ್ವಿಗಾಗಿ ಜಮಾ ಅತೆ ಇಸ್ಲಾಮಿ ಹಿಂದ್ ಬೀದರ್ ಘಟಕದ ಅಧ್ಯಕ್ಷ ಮುಹಮ್ಮದ್ ಮೌಅಜ್ಜಮ್ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸ್ವಾಗತ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಜಮಾ ಅತೆ ಇಸ್ಲಾಮಿ ಹಿಂದ್ ಬೀದರ್ ಘಟಕದ ಉಪಾಧ್ಯಕ್ಷ ಮುಹಮ್ಮದ್ ಆರಿಫುದ್ದೀನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...