ಬೀದರ್‌ | ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ ಶಿಕ್ಷಣ

Date:

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 95ಕ್ಕೂ ಅಧಿಕ ಅಂಕ ಗಳಿಸಿದ ರಾಜ್ಯದ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ವರ್ಷದ ಪಿಯುಸಿ ಶಿಕ್ಷಣ ಉಚಿತವಾಗಿ ನೀಡುವುದಾಗಿ ಇಲ್ಲಿಯ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಪ್ರಕಟಿಸಿದೆ.

- Advertisement -

ʼ100 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬೀದರ್ ಸೇರಿದಂತೆ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗುವುದುʼ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ʼಉಚಿತ ಸ್ಥಾನಗಳಲ್ಲಿ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳಲ್ಲಿ ಓದಿದ, ತಂದೆಯನ್ನು ಕಳೆದುಕೊಂಡ ಹಾಗೂ ಅಂಗವಿಕಲ ವಿದ್ಯಾರ್ಥಿಗಳಿಗೆ ಆದ್ಯತೆ ಕೊಡಲಾಗುವುದು. ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು ಉಚಿತ ಶಿಕ್ಷಣ ಯೋಜನೆಯ ಉದ್ದೇಶವಾಗಿದೆʼ ಎಂದು ತಿಳಿಸಿದ್ದಾರೆ.

ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಬೋಧನಾ ಶುಲ್ಕದ ಸಂಪೂರ್ಣ ರಿಯಾಯಿತಿ ಇರಲಿದೆ. ಅರ್ಹ ವಿದ್ಯಾರ್ಥಿಗಳು ಸಮೂಹದ ಪದವಿ ಪೂರ್ವ ಕಾಲೇಜುಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಶಾಲೆಬಿಟ್ಟ ಮಕ್ಕಳ ಫಲಿತಾಂಶ ಶೇ 100 ಫಲಿತಾಂಶ :

ಶಾಲೆ ಬಿಟ್ಟ ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಮರಳಿ ಮುಖ್ಯ ವಾಹಿನಿಗೆ ತರಲು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಆರಂಭಿಸಿದ ಶೈಕ್ಷಣಿಕ ತುರ್ತು ನಿಗಾ ಘಟಕ (ಎಐಸಿಯು) ಪರಿಣಾಮಕಾರಿ ಫಲಿತಾಂಶ ನೀಡುತ್ತಾ ಮುನ್ನಡೆದಿದೆ.

ಶಾಲೆ ಬಿಟ್ಟ 90 ವಿದ್ಯಾರ್ಥಿಗಳು ಇಲ್ಲಿಯ ಶಾಹೀನ್ ಪ್ರೌಢ ಶಾಲೆಯಲ್ಲಿ ಈ ಬಾರಿಯ ಎಸ್.ಎಸ್. ಎಲ್.ಸಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ಶಾಹೀನ್ ತುರ್ತು ಶೈಕ್ಷಣಿಕ ನಿಗಾ ಘಟಕದಲ್ಲಿ ಓದಿದವರಾಗಿರುವುದು ವಿಶೇಷ. ಸೌಕರ್ಯಗಳ ಕೊರತೆ ಹಾಗೂ ವೈಫಲ್ಯದಿಂದ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶೈಕ್ಷಣಿಕ ತುರ್ತು ನಿಗಾ ಘಟಕ ವರದಾನವಾಗಿ ಪರಿಣಮಿಸಿದೆ.

ವಿಶೇಷ ನಿಗಾ ಮೂಲಕ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಮುಖ್ಯ ವಾಹಿನಿಗೆ ತರುವ ಹಾಗೂ ಅವರ ಶೈಕ್ಷಣಿಕ ಪ್ರಗತಿಗೆ ನೆರವಾಗುವ ಶಾಹೀನ್‍ನ ಶೈಕ್ಷಣಿಕ ತುರ್ತು ನಿಗಾ ಘಟಕದ ಮಾದರಿಯನ್ನು ಪ್ರಶಂಸಿಸಿರುವ ಜಾಗತಿಕ ಮಟ್ಟದ ನಿಯತಕಾಲಿಕೆಯ ಭಾರತೀಯ ಆವೃತ್ತಿಯಾದ ಫೋಬ್ರ್ಸ್ ಇಂಡಿಯಾ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರನ್ನು ‘ಲೀಡರ್ ಆಫ್ ಟುಮಾರೋ’ ಎಂದು ಗುರುತಿಸಿದೆ ಎಂದು ಸಂಸ್ಥೆ ತಿಳಿಸಿದೆ.

ಫ್ರಿ ಪ್ಲಸ್ ಟು ಫೌಂಡೇಷನ್ ಕೋರ್ಸ್

ಎಸ್.ಎಸ್.ಎಲ್.ಸಿ ಪಾಸ್/ ಫೇಲ್ ಆದ, ಬೇಸಿಕ್‍ನಲ್ಲಿ ದುರ್ಬಲರಾದ, ವಿಷಯಗಳ ಮೇಲೆ ಹಿಡಿತವಿಲ್ಲದ, ಕಾನ್ಸೆಪ್ಟ್ ಅರಿತುಕೊಳ್ಳಲಾಗದ ವಿದ್ಯಾರ್ಥಿಗಳ ನೀಟ್ / ಜೆಇಇ ಕನಸು ಸಾಕಾರಗೊಳಿಸಲು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಮೂರು ವರ್ಷದ ಫ್ರಿ ಪ್ಲಸ್ ಟು ಫೌಂಡೇಷನ್ ಕೋರ್ಸ್ ಆರಂಭಿಸಿದೆ.

ಸಮೂಹವು ಮೂರು ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಈ ಕೋರ್ಸ್‍ಗೆ ಶಿಕ್ಷಣ ತಜ್ಞರು ಹಾಗೂ ಪಾಲಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕೋರ್ಸ್‍ನಲ್ಲಿ ಮೊದಲ ವರ್ಷ ಮಕ್ಕಳ ಶೈಕ್ಷಣಿಕ ಅಡಿಪಾಯ ಬಲಪಡಿಸಲಾಗುವುದು. ಎ.ಐ.ಸಿ.ಯು ಮೂಲಕ ಗಣಿತ ಹಾಗೂ ಭಾಷಾ ವಿಷಯಗಳ ಮೇಲೆ ಹಿಡಿತ ಸಾಧಿಸುವಂತೆ ಮಾಡಲಾಗುವುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ತಿಳಿಸಿದ್ದಾರೆ

ʼಎ.ಐ.ಸಿ.ಯು ನಲ್ಲಿ ಆರು ಮಕ್ಕಳಿಗೆ ಒಬ್ಬರು ಶಿಕ್ಷಕರು ಇರುವರು. ಆರರಿಂದ ಹತ್ತನೇ ತರಗತಿ ವರೆಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ಅನ್ನು ಸುಧಾರಿಸುವರು. ಇದರಿಂದ ಮಕ್ಕಳಿಗೆ ಬಹು ಆಯ್ಕೆ, ಕಾನ್ಸೆಪ್ಟ್ ಅರ್ಥವಾಗುವುದು. ಗುರಿ ಸ್ಪಷ್ಟವಾಗುವುದು. ಬಳಿಕ ವಿದ್ಯಾರ್ಥಿಗಳಿಗೆ ಪಿಯುಸಿಗೆ ಪ್ರವೇಶ ಕೊಡಲಾಗುವುದುʼ ಎಂದು ಹೇಳಿದ್ದಾರೆ.

ಈ ಕೋರ್ಸ್ ದೇಶದ ವಿಶಿಷ್ಟ ಕೋರ್ಸ್ ಆಗಿದೆ. ಇದನ್ನು ಪೂರೈಸಿದ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಮೊದಲ ದಿನದಿಂದಲೇ ಬಹು ಆಯ್ಕೆ ಅಭ್ಯಾಸ ಮಾಡಲು ಆರಂಭಿಸುತ್ತಾರೆ. ಅವರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜೀವನದ ಯಾವುದೇ ಶೈಕ್ಷಣಿಕ ಯಾತ್ರೆಯಲ್ಲಿ ಅವರು ಹಿಂದೆ ಬೀಳುವುದಿಲ್ಲ ಎಂದು ತಿಳಿಸಿದ್ದಾರೆ.‌

ಇದನ್ನೂ ಓದಿ : ಬೀದರ್‌ | ಪುಸ್ತಕ ಓದಿನಿಂದ ಮಾನಸಿಕ ನೆಮ್ಮದಿ ಸಾಧ್ಯ : ಧರ್ಮಣ್ಣಾ ಚಿಟ್ಟಾ

ಶಾಹೀನ್ ವೆಬ್‍ಸೈಟ್ https://shaheengroup.org ಹಾಗೂ ಟೋಲ್ ಫ್ರೀ ಸಂಖ್ಯೆ 1800 121 6235 ಗೆ
ಸಂಪರ್ಕಿಸಿ ಈ ಕುರಿತು ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...