ಬೀದರ್‌ | ಸಮಾನತೆ ತಳಹದಿ ಮೇಲೆ ಸದೃಢ ಸಮಾಜ ಕಟ್ಟಿದ ಶರಣರು: ಸವಿತಾ ಪಾಟೀಲ

Date:

ವಚನಾಮೃತ ಕನ್ನಡ ಸಂಘದ ವತಿಯಿಂದ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಮಹಾಲಕ್ಷ್ಮಿ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಕಾಯಕಯೋಗಿ ಜೇಡರ ದಾಸಿಮಯ್ಯ ಹಾಗೂ ಶರಣ ಉರಿಲಿಂಗ ಪೆದ್ದಿ ವಿಚಾರ ಸಂಕಿರಣದಲ್ಲಿ ಅವರು ಉರಿಲಿಂಗ ಪೆದ್ದಿ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

- Advertisement -

ಪ್ರಾಧ್ಯಾಪಕಿ ಸವಿತಾ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಬಸವಣ್ಣನವರು 12ನೇ ಶತಮಾನದಲ್ಲಿ ಸಾಮಾಜಿಕ, ಆರ್ಥಿಕ, ಲಿಂಗ ಸಮಾನತೆ ತಳಹದಿ ಮೇಲೆ ಸದೃಢ ಸಮಾಜ ಕಟ್ಟಲು ಶ್ರಮಿಸಿದ್ದರು. ಮನುಷ್ಯ ಆಡಂಬರ ಜೀವನ ಬಿಡಬೇಕು. ದೇಹ ದಂಡಿಸಿ ದುಡಿದು ಉಣ್ಣಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜೇಡರ ದಾಸಿಮಯ್ಯ ಕುರಿತು ಶೈಲಜಾ ಹುಡಗೆ ಉಪನ್ಯಾಸ ನೀಡಿ, ಜೇಡರ ದಾಸಿಮಯ್ಯ ಸತ್ಯ ಶುದ್ಧ ಕಾಯಕ ಮಾಡಿ ಸಮಾಜಕ್ಕೆ ಕೊಡುಗೆ ನೀಡಿದ್ದರು. ದಾಸಿಮಯ್ಯನವರ ವಿಚಾರಧಾರೆಗೆ ತಲೆ ಬಾಗಿ ಮಹಾರಾಣಿಯೊಬ್ಬರು ಜೈನ ಧರ್ಮಕ್ಕೆ ತಿಲಾಂಜಲಿ ಹೇಳಿ ಶಿವ ಧರ್ಮ ಸ್ವೀಕರಿಸಿದ್ದರು” ಎಂದು ತಿಳಿಸಿದರು.

ಸಂಘದಿಂದ ವಚನ ಸಾಹಿತ್ಯ ಮನೆ ಮನೆಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆದಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.

ಚಿಂತಕ ದಿನೇಶ್ ಕೊಂಡ ಹಳ್ಳಿಖೇಡ ಮಾತನಾಡಿ, “ಉರಿಲಿಂಗ ಪೆದ್ದಿ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ. ಒಮ್ಮೆ ಶ್ರೀಮಂತರೊಬ್ಬರ ಮನೆ ಮಹಡಿ ಏರಿ ಬೆಳಕಿಂಡಿಯಿಂದ ಒಳಗೆ ನೋಡಿದ್ದ. ಒಳಗೆ ಉರಿಲಿಂಗ ದೇವರು ದೀಕ್ಷೆ ನೀಡುತ್ತಿದ್ದುದ್ದನ್ನು ಕಂಡು ಕಳ್ಳತನ ವೃತ್ತಿ ತೊರೆದಿದ್ದ. ಗುರುಗಳ ಸೇವೆ ಮಾಡಿದ್ದ” ಎಂದು ತಿಳಿಸಿದರು.

ಇದೇ ವೇಳೆ ರೇಣುಕಾ ಪದವಿಪೂರ್ವ ಕಾಲೇಜು ನಿವೃತ್ತ ಪ್ರಾಚಾರ್ಯ ಅಶೋಕ್ ಬೂದಿಹಾಳ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಗ್ರಂಥಾಲಯ ಪಿತಾಮಹ ಎಸ್.ಆರ್. ರಂಗನಾಥನ್ ಜಯಂತಿ ಆಚರಣೆ

ಕಾರ್ಯಕ್ರಮದಲ್ಲಿ ಪ್ರಮುಖರಾದ ವಿದ್ಯಾವತಿ ಹಿರೇಮಠ, ಶ್ರೀಕಾಂತ ಬಿರಾದಾರ, ಶಂಭುಲಿಂಗ ವಾಲ್ದೊಡ್ಡಿ, ಪ್ರವೀಣ್, ಬಸವರಾಜ ಬಿರಾದಾರ, ಶ್ರೀದೇವಿ ಸೋಮಶೆಟ್ಟಿ, ಪದ್ಮರಾಜ ಅಜೀತಮಣಿ ಸೇರಿದಂತೆ ಅನೇಕರಿದ್ದರು.

WhatsApp Image 2026 08 13 at 6.47.20 PM
advertisement
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...