ಬೀದರ್‌ | ಸಮಾನತೆಯ ಸಂದೇಶ ಸಾರಿದ ಸಿದ್ದರಾಮೇಶ್ವರರು : ಗುರುಮಹಾಂತ ಸ್ವಾಮೀಜಿ

Date:

ಶಿವಯೋಗಿ ಸಿದ್ದರಾಮೇಶ್ವರರು ಬಸವಾದಿ ಶರಣರಲ್ಲಿ ಪ್ರಮುಖ ಶರಣರಾಗಿದ್ದರು. ಸಿದ್ಧರಾಮೇಶ್ವರರು ಬಸವಣ್ಣನವರನ್ನು ಪರಮ ಗುರುವಾಗಿ ಕಂಡರು, ಬಸವಣ್ಣನವರ ಮಾರ್ಗದರ್ಶನದಿಂದ ಸಿದ್ಧರಾಮೇಶ್ವರರು ಶಿವಯೋಗಿಯಾದರು ಎಂದು ಇಳಕಲ್‌ನ
ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಹೇಳಿದರು.

- Advertisement -

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಬುಧವಾರ ಆಯೋಜಿಸಿದ್ದ ಸಿದ್ಧರಾಮೇಶ್ವರ ಜಯಂತಿ ಮತ್ತು ವಿಶ್ವಗುರು ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಸಿದ್ಧರಾಮೇಶ್ವರರು ಲಿಂಗಭೇದ ನಿವಾರಿಸಿ ಸಮಾನತೆಯ ಸಂದೇಶ ನೀಡಿದರು. ಕೆರೆ, ಬಾವಿ, ದೇವಾಲಯಗಳ ನಿರ್ಮಿಸಿ ಜನಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡರು. ಸೊಲ್ಲಾಪುರವನ್ನು ಭೂಕೈಲಾಸವನ್ನಾಗಿ ಪರಿವರ್ತಿಸಿದರು. ಅಂತಹ ಶರಣರ ಆದರ್ಶಗಳು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕುʼ ಎಂದು ತಿಳಿಸಿದರು.

ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ʼಸಿದ್ದರಾಮೇಶ್ವರರು ಕೇವಲ ದಾರ್ಶನಿಕರಾಗಿರದೆ, ತಮ್ಮ ಕಾಯಕ ಮತ್ತು ಚಿಂತನೆಗಳ ಮೂಲಕ ಸಮಾಜದ ಓರೆಕೋರೆಗಳನ್ನು ಸರಿಪಡಿಸಲು ಶ್ರಮಿಸಿದರುʼ ಎಂದು ತಿಳಿಸಿದರು. 

WhatsApp Image 2026 01 14 at 7.26.19 PM

ಸಂಕ್ರಾಂತಿ ಹಬ್ಬದ ನಿಮಿತ್ತ ಮಕ್ಕಳಿಗೆ ಇಳಕಲ್, ಭಾಲ್ಕಿ ಶ್ರೀಗಳು ಮಕ್ಕಳಿಗೆ ಸಂಕ್ರಾಂತಿ ಹಬ್ಬದ ಶುಭ ಕೋರಿದರು. ಚನ್ನಬಸವೇಶ್ವರ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉಭಯ ಪೂಜ್ಯರು ಎಳ್ಳು, ಬೆಲ್ಲ ವಿತರಿಸಿ ಆಶೀರ್ವದಿಸಿದರು.

ಸಾಮಾಜಿಕ ಕ್ರಾಂತಿ ಹಾಗೂ ವಚನ ಸಾಹಿತ್ಯಕ್ಕೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಅಪಾರ. ಅವರು ಶಿವಯೋಗಿ ಮಾತ್ರವಲ್ಲದೇ ಕಾಯಕ ಯೋಗಿ ಆಗಿದ್ದರು ಎಂದು ಗುರುಬಸವ ಪಟ್ಟದ್ದೇವರು ಹೇಳಿದರು.

ಇದನ್ನೂ ಓದಿ : ಬೀದರ್‌ | ಕೋಟಿ ಖರ್ಚಾದರೂ ಉದ್ಘಾಟನೆಯಾಗದ ಪದವಿ ಕಾಲೇಜು ಹಾಸ್ಟೆಲ್‌ : ಕುಸಿಯುತ್ತಿದೆ ದಾಖಲಾತಿ!

ಮದನೂರಿನ ಯುವ ಮುಖಂಡ ಗುಂಡಪ್ಪ ಬೆಲ್ಲೆ ಅವರು ಬಸವಣ್ಣನವರ ಮೂರ್ತಿಗೆ ಪೂಜೆ ನೆರವೇರಿಸಿದರು. ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ಸಂಸ್ಥೆಯ ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ಭಾಲ್ಕಿ | ವಿಬಿ-ಜಿ ರಾಮ್ ಜಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ...

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ...