ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

Date:

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ ಅಧಿಕೃತ ಸ್ಮಶಾನ ಭೂಮಿ ಎಂದು ಈ ವಾರದಲ್ಲಿ ಪಹಣಿಯಲ್ಲಿ ದಾಖಲಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ‌ ಹೋರಾಟಗಾರ ರಾಹುಲ ಖಂದಾರೆ ಮಾತನಾಡಿ, “ದಲಿತ ಸಮುದಾಯಕ್ಕಾಗಿ ಇರುವ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಕಳೆದ 18 ದಿನಗಳಿಂದ ಬೀದರ್ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸುತ್ತಿದ್ದು, ಜಿಲ್ಲಾಡಳಿತ ಇಲ್ಲಿಯವರೆಗೆ ಸ್ಪಂದಿಸಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

AI ಕಲಿಕೆ ಪ್ರತ್ಯೇಕ ವಿಷಯವಾಗದೆ; ತೃತೀಯ ಭಾಷೆಗೆ ಪರ್ಯಾಯವಾಗಿ...

NSQF ನಿಯಮಗಳ ಪ್ರಕಾರ, ವಿದ್ಯಾರ್ಥಿಗಳು ವೃತ್ತಿಪರ AI ವಿಷಯವನ್ನು ಆಯ್ಕೆ ಮಾಡಿಕೊಂಡರೆ, ಅವರು ತೃತೀಯ ಭಾಷೆಯನ್ನು ಕಲಿಯುವುದರಿಂದ ವಿನಾಯಿತಿ ಪಡೆಯಬಹುದು. ಈ ನಿರ್ಧಾರವು 21ನೇ ಶತಮಾನದ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಿದ್ದರೂ,...

ಚುನಾವಣಾ ವ್ಯವಸ್ಥೆಯನ್ನೇ ಅಲುಗಾಡಿಸಿದ ಮೋದಿ ಸರ್ಕಾರದ 10 ವಿವಾದಗಳು

ಪ್ರಜಾಪ್ರಭುತ್ವದ ಜೀವಾಳವಾದ ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆಗೆ ಇಂದು ಗ್ರಹಣ ಬಡಿದಿದೆಯೇ? ಏಕಾಏಕಿ 13.8 ಕೋಟಿ ಹೆಸರುಗಳನ್ನು ಅಳಿಸಿಹಾಕಿದ 'SIR' (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಮಹಾವಿವಾದ ಮತ್ತು ಆಯೋಗದೊಳಗಿನ ಭಿನ್ನಮತವು ಈ ಅನುಮಾನವನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

“ಅಮಲ್ಲಾಪುರ ಗ್ರಾಮಸ್ಥರು ಹಲವು ವರ್ಷಗಳಿಂದ ಸರ್ವೇ ನಂ.71ರ ಜಾಗದಲ್ಲಿಯೇ ಅಂತ್ಯಸಂಸ್ಕಾರ ನಡೆಸಿಕೊಂಡು ಬರುತ್ತಿದ್ದಾರೆ. ಈ ಜಾಗವನ್ನು ಅಧಿಕೃತವಾಗಿ ಸ್ಮಶಾನ ಭೂಮಿಯೆಂದು ಪಹಣಿಯಲ್ಲಿ ದಾಖಲಿಸಬೇಕೆಂದು ಧರಣಿನಿರತರ ಹಕ್ಕೊತ್ತಾಯವಾಗಿದೆ. ಆದರೆ, ಇಲ್ಲಿಯವರೆಗೆ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಯಾವುದೇ ಕ್ರಮಕೈಗೊಂಡಿಲ್ಲ” ಎಂದರು.

ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಿನೋದ ರತ್ನಾಕರ ಮಾತನಾಡಿ, “ಸುಮಾರು 40 ವರ್ಷಗಳಿಂದ ಇದೇ ಸ್ಥಳದಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಪಹಣಿ ದಾಖಲಿಸಲು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ. ಸ್ಮಶಾನ ಭೂಮಿ ಇಲ್ಲದ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ದಲಿತ ಸಮುದಾಯಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು. ಜಿಲ್ಲಾಧಿಕಾರಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಬೇಕು” ಎಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಒಂದು ವಾರದೊಳಗೆ ಪಹಣಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅದರಂತೆ ಕೂಡಲೇ ಕ್ರಮ ಕೈಗೊಳ್ಳಬೇಕು. ವಾರದೊಳಗೆ ಪಹಣಿ ಮಾಡಿಕೊಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಪ್ರಕಾಶ ರಾವಣ, ಹನುಮಂತ ಮಟ್ಟೆ, ಸಾಗರ್,ಸತ್ಯಾದೀಪ ಹಾವನೂರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ವೇಗದ ಬೈಕ್ ಚಾಲನೆ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ ನವನಗರದ ನಂದೀಶ್ವರ ನಗರದಲ್ಲಿ ಮನೆ ಎದುರಿನ ರಸ್ತೆಯಲ್ಲಿ ಬೈಕ್‌ನ್ನು ವೇಗವಾಗಿ...

ಬಿಡದಿ ಭೂಸ್ವಾಧೀನ ರದ್ದುಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ಕರ್ನಾಟಕದ ಬಿಡದಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಬಿಡದಿ ಟೌನ್‌ಶಿಪ್ ಯೋಜನೆಗಾಗಿ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಬರ | ಮಳೆಯ ಕೊರತೆಯಷ್ಟೇ ಅಲ್ಲ, ಬದುಕಿನ ಮೇಲಿನ ಬರೆ

ಶತ ಶತಮಾನಗಳಿಂದಲೂ ಮಾನವ ಬದುಕನ್ನು ಕಾಡುತ್ತಿರುವ ಪ್ರಕೃತಿಯ ಕಠಿಣ ಸವಾಲುಗಳಲ್ಲಿ ...